LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಅಂಬಾಲದಲ್ಲಿ ವಾಯುದಾಳಿ ಎಚ್ಚರಿಕೆ: ವಿದ್ಯುತ್ ವ್ಯತ್ಯಯ, ಮೇ 10 ರವರೆಗೆ ಶಿಕ್ಷಣ ಸಂಸ್ಥೆಗಳು ಬಂದ್

ಅಂಬಾಲ (ಹರಿಯಾಣ) : ಆಪರೇಷನ್ ಸಿಂಧೂರ್ ನಂತರ, ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ಮುಂದುವರೆದಿದೆ. ಗುರುವಾರ, ಪಾಕಿಸ್ತಾನವು ಡ್ರೋನ್‌ಗಳು ಮತ್ತು ಕ್ಷಿಪಣಿಗಳೊಂದಿಗೆ ಭಾರತದ ಮೇಲೆ ದಾಳಿ ಮಾಡಲು ಪ್ರಯತ್ನಿಸಿತ್ತು. ಆದರೆ ಭಾರತವು S-400 ವಾಯು ರಕ್ಷಣಾ ವ್ಯವಸ್ಥೆಯ ಮೂಲಕ ಈ ದಾಳಿಗಳನ್ನು ವಿಫಲಗೊಳಿಸಿದೆ. ಇದರ ನಂತರ, ಗಡಿ ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಇದರ ಮಂದುವರೆದ ಭಾಗವಾಗಿ, ಪಂಜಾಬ್ - ಹರಿಯಾಣ ಮತ್ತು ಚಂಡೀಗಢದಲ್ಲಿಯೂ ಎಚ್ಚರಿಕೆ ನೀಡಲಾಗಿದೆ.


ಅಂಬಾಲದಲ್ಲಿ ಸೈರನ್ ಎಚ್ಚರಿಕೆ: ಶುಕ್ರವಾರ ಬೆಳಗ್ಗೆ, ವಾಯುಪಡೆಯು ಚಂಡೀಗಢ ಮತ್ತು ಹರಿಯಾಣದ ಅಂಬಾಲದಲ್ಲಿ ಸಂಭಾವ್ಯ ಡ್ರೋನ್ ದಾಳಿಯ ಬಗ್ಗೆ ಎಚ್ಚರಿಕೆ ನೀಡಿದೆ. ಅದರ ನಂತರ ಸೈರನ್ ಮೊಳಗಿಸಲಾಗಿದೆ. ಈ ಸಮಯದಲ್ಲಿ ಜನರು ಮನೆಯಲ್ಲಿಯೇ ಇರಬೇಕೆಂದು ಮನವಿ ಮಾಡಲಾಗಿತ್ತು.


''ಜನರು ತಮ್ಮ ಮನೆಗಳಲ್ಲಿಯೇ ಇರಬೇಕು. ಉದ್ಯಾನವನದಲ್ಲಿ ಅಥವಾ ಬೀದಿಯಲ್ಲಿ ಯಾರೂ ನಿಲ್ಲಬಾರದು. ಇದನ್ನು ಹೊರತುಪಡಿಸಿ, ಮನೆಯ ಬಾಲ್ಕನಿ ಅಥವಾ ಟೆರೇಸ್‌ನಲ್ಲಿ ಯಾರೂ ನಿಲ್ಲಬಾರದು. ಯಾರೊಬ್ಬರ ಮನೆ ದೂರದಲ್ಲಿದ್ದರೆ, ಅವರು ಹತ್ತಿರದ ಕಟ್ಟಡಕ್ಕೆ ಹೋಗಬೇಕು" ಎಂದು ಇಲ್ಲಿನ ಸರ್ಕಾರ ಹೇಳಿದೆ.


ಜನರು ಮನೆಯೊಳಗೆ ಇರುವಂತೆ ಮನವಿ : ಸುಮಾರು ಅರ್ಧ ಗಂಟೆಯ ನಂತರ, ವಾಯುಪಡೆಯು ಯಾವುದೇ ವಾಯುದಾಳಿ ಎಚ್ಚರಿಕೆ ಇಲ್ಲ ಎಂದು ತಿಳಿಸಿದೆ. ಆದರೆ ಜನರು ಮನೆಯೊಳಗೆ ಇರುವಂತೆ ಮನವಿ ಮಾಡಿದೆ. ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ನಡೆಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಅಂಬಾಲ ಆಡಳಿತವು ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಮುಚ್ಚಲು ನಿರ್ಧರಿಸಿದೆ. ಅಂಬಾಲಾದಲ್ಲಿ ಮೇ 10 ರವರೆಗೆ ಶಿಕ್ಷಣ ಸಂಸ್ಥೆಗಳು ಬಂದ್ ಆಗಿರಲಿವೆ.


ಇಂದು ರಾತ್ರಿ 8 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ವಿದ್ಯುತ್ ಕಡಿತ: ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆಯನ್ನು ಗಮನದಲ್ಲಿಟ್ಟುಕೊಂಡು, ಇಂದು ರಾತ್ರಿ 8 ಗಂಟೆಯಿಂದ ಮರುದಿನ ಬೆಳಗ್ಗೆ 6 ಗಂಟೆಯವರೆಗೆ ಅಂಬಾಲದಲ್ಲಿ ವಿದ್ಯುತ್ ಕಡಿತಗೊಳ್ಳಲಿದೆ. ಈ ಸಮಯದಲ್ಲಿ ನಗರದ ಲೈಟ್​ಗಳನ್ನು ಆಫ್ ಮಾಡಲಾಗುತ್ತದೆ. ಆದ್ದರಿಂದ, ಜನರು ತಮ್ಮ ಪ್ರಮುಖ ಕೆಲಸವನ್ನು ಹಗಲಿನಲ್ಲಿಯೇ ಪೂರ್ಣಗೊಳಿಸಿಕೊಳ್ಳುವಂತೆ ಮನವಿ ಮಾಡಲಾಗಿದೆ. ನಿಮ್ಮ ಫೋನ್ ಚಾರ್ಜ್ ಆಗಿರಲಿ. ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ. ಸೈರನ್ ಸದ್ದು ಮಾಡಿದ ತಕ್ಷಣ ನಿಮ್ಮ ಮನೆಯೊಳಗೆ ಹೋಗಿ ಎಂದು ತಿಳಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್