LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಕನ್ನಡಕ್ಕೆ ಎಂಟ್ರಿ ಕೊಟ್ಟ ಐಶ್ವರ್ಯ ರಾಜೇಶ್ 

ದಕ್ಷಿಣ ಭಾರತದ ಖ್ಯಾತ ನಟಿ ಐಶ್ವರ್ಯ ರಾಜೇಶ್ ಉತ್ತರಕಾಂಡ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ನೀಡಿದ್ದಾರೆ. ಉತ್ತರಕಾಂಡ ಒಂದು ಬಹು ನಿರೀಕ್ಷಿತ ಚಿತ್ರವಾಗಿದ್ದು, ಚಿತ್ರದಲ್ಲಿ ಸೆಂಚುರಿ ಸ್ಟಾರ್  ಡಾ. ಶಿವರಾಜ್ ಕುಮಾರ್ ಮತ್ತು ನಟರಾಕ್ಷಸ ಡಾಲಿ‌ ಧನಂಜಯ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.


     ನಟಿ ಐಶ್ವರ್ಯ ಚಿತ್ರದಲ್ಲಿ ಧನಂಜಯ ಅವರ‌ ಜೋಡಿಯಾಗಿ "ದುರ್ಗಿ" ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ದಿ ಗ್ರೇಟ್ ಇಂಡಿಯನ್ ಕಿಚನ್,  ದಿ ವರ್ಲ್ಡ್ ಫೇಮಸ್ ಲವರ್, ವಡಾ‌ ಚೆನ್ನೈ, ಕಾಕ ಮುತ್ತೈ (ರಾಷ್ಟ್ರ ಪ್ರಶಸ್ತಿ ವಿಜೇತ ಚಿತ್ರ), ಜೋಮೋಂಟೇ ಸುವಿಶೇಷಂಗಳ್ , ಟಕ್ ಜಗದೀಶ್, ವಾನಂ ಕೊಟ್ಟಾಟುಂ ಸೇರಿದಂತೆ ಹಲವಾರು ಯಶಸ್ವಿ ಚಿತ್ರಗಳಲ್ಲಿ ಐಶ್ವರ್ಯ ತಮ್ಮ ಅಭಿನಯದ ಮೂಲಕ ಛಾಪನ್ನು ಮೂಡಿಸಿ ಇದೀಗ ಉತ್ತರಕಾಂಡಕ್ಕೆ ಎಂಟ್ರಿ ನೀಡಿದ್ದಾರೆ.


     ಪ್ರಸ್ತುತ ಚಿತ್ರದ ಪ್ರಥಮ ಶೆಡ್ಯೂಲ್ ಚಿತ್ರೀಕರಣ ವಿಜಯಪುರದಲ್ಲಿ ನಡೆಯುತ್ತಿದ್ದು, ಈ ಆಕ್ಷನ್ ಡ್ರಾಮಾಗೆ ರೋಹಿತ್ ಪದಕಿ ಆಕ್ಷನ್ ಕಟ್ ಹೇಳಿದ್ದಾರೆ.ಚಿತ್ರವನ್ನು ಕಾರ್ತಿಕ್ ಗೌಡ ಮತ್ತು ಯೋಗಿ‌ ಜಿ ರಾಜ್ ಕೆ ಆರ್ ಜಿ ಸ್ಟೂಡಿಯೋಸ್‌ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಿದ್ದಾರೆ.


     ಮಲಯಾಳಂ ನಟ ವಿಜಯ್ ಬಾಬು, ರಂಗಾಯಣ ರಘು, ಚೈತ್ರ ಜೆ ಆಚಾರ್, ಉಮಾಶ್ರೀ, ಯೋಗರಾಜ್ ಭಟ್, ದಿಗಂತ್ ಮಂಚಾಲೆ, ಗೋಪಾಲಕೃಷ್ಣ ದೇಶಪಾಂಡೆ ಸೇರಿದಂತೆ ಬಹು ದೊಡ್ಡ ತಾರಾಬಳಗವನ್ನು ಚಿತ್ರ ಹೊಂದಿದೆ. ಬಾಲಿವುಡ್ ಗಾಯಕ ಹಾಗೂ ಸಂಗೀತ ಸಂಯೋಜಕ ಅಮಿತ್ ತ್ರಿವೇದಿ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಲಿದ್ದು, ಅದ್ವೈತ ಗುರುಮೂರ್ತಿ ಮುಖ್ಯ ಛಾಯಾಗ್ರಾಹಕರಾಗಿರುತ್ತಾರೆ ಹಾಗೂ ವಿಶ್ವಾಸ್‌ ಕಶ್ಯಪ್ ಪ್ರೊಡಕ್ಷನ್ ವಿನ್ಯಾಸ ಮಾಡಿರುತ್ತಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ