LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಎಸ್ಐಆರ್ ಪ್ರಕ್ರಿಯೆಯಲ್ಲಿ ಎಲ್ಲ ಮತದಾರರೂ ಭಾಗಿಯಾಗಬೇಕು: ಮಾಜಿ ಮೇಯರ್ ಎಂ.ರಾಜೇಶ್ವರಿ

ಬಳ್ಳಾರಿ, ಜು.21: ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ (ಎಸ್ಐಆರ್) ಎಲ್ಲ ಮತದಾರರು ಸಕ್ರಿಯರಾಗಿ ಪಾಲ್ಗೊಳ್ಳಬೇಕೆಂದು ಮಾಜಿ ಮೇಯರ್, ಪಾಲಿಕೆಯ ಸದಸ್ಯೆ ಎಂ.ರಾಜೇಶ್ವರಿ ಅಭಿಪ್ರಾಯಪಟ್ಟಿದ್ದಾರೆ.
ಸೋಮವಾರ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿಯವರ ಮಾರ್ಗದರ್ಶನದಲ್ಲಿ ತೆರೆಯಲಾಗಿರುವ ಎಸ್ಐಆರ್ ಸಹಾಯ ಕೇಂದ್ರಕ್ಕೆ ಭೇಟಿ ನೀಡಿ ಸ್ವಯಂ ಸೇವಕರಿಂದ ಮಾಹಿತಿ ಪಡೆದ ನಂತರ ಈ ಕುರಿತು ಅವರು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.
ಮತದಾನದ ಹಕ್ಕು ಸಾಂವಿಧಾನಿಕ ಹಕ್ಕಾಗಿದ್ದು ಎಸ್ಐಆರ್ ಸಮೀಕ್ಷೆಯಲ್ಲಿ ನಾಗರಿಕರೆಲ್ಲರೂ ಭಾಗವಹಿಸುವ ಮೂಲಕ ಅಂತಿಮ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಉಳಿಸಿಕೊಳ್ಳಬೇಕು ಎಂದಿದ್ದಾರೆ.
ಚುನಾವಣಾ ಆಯೋಗದ ವತಿಯಿಂದ ಬರುವ ಬೂತ್ ಮಟ್ಟದ ಅಧಿಕಾರಿಗಳಿಗೆ ನಾಗರಿಕರು ಸಹಕರಿಸಬೇಕು, ಎನುಮರೇಶನ್ ಫಾರಂಗಳನ್ನು ಪಡೆದು ಸರಿಯಾದ ಮಾಹಿತಿ ತುಂಬಿ ಅಥವಾ ತುಂಬಿಸಿ ಬಿಎಲ್ಓ ಅವರಿಗೆ ನೀಡಬೇಕು ಎಂದು ಹೇಳಿರುವ ಅವರು, ಯಾವುದೇ ನಾಗರಿಕರು ಈ ಬಗ್ಗೆ ನಿರ್ಲಕ್ಷ್ಯ ವಹಿಸಬಾರದು ಎಂದು ಹೇಳಿದ್ದಾರೆ.
ನಗರದ ರಾಘವೇಂದ್ರ ಟಾಕೀಸನ ಕಟ್ಟಡದಲ್ಲಿ ನಗರ ಶಾಸಕರು ಚುನಾವಣಾ ಆಯೋಗದ ನಿಯಮಗಳನ್ನು ಗಮನದಲ್ಲಿಟ್ಟುಕೊಂಡು ಸಹಾಯ ಕೇಂದ್ರ ಆರಂಭಿಸಿದ್ದಾರೆ, ಎನುಮರೇಶನ್ ಫಾರಂ ಭರ್ತಿ ಸಬಂಧ ಅಗತ್ಯ ಸಹಾಯ ಬೇಕಾದ ನಾಗರಿಕರು ಇಲ್ಲಿಗೆ ಭೇಟಿ ನೀಡಬಹುದು, ಸಹಾಯ ಕೇಂದ್ರ ಅತ್ಯುತ್ತಮವಾಗಿ ಕಾರ್ಯ ನಿರವಹಿಸುತ್ತಿದೆ ಎಂದು ಪ್ರಶಂಸಿಸಿದ್ದಾರೆ.
ಈ ಸಂದರ್ಭ ಕಂಟ್ರೋಲ್ ರೂಮ್‌ನ ಉಸ್ತುವಾರಿ ಗೌತಮ್ ಎಸ್ ಅವರಿಂದ ಕಂಟ್ರೋಲ್ ರೂಮ್‌ನ ಕಾರ್ಯ ನಿರ್ವಹಣೆ ಕುರಿತು ಮಾಹಿತಿ ಪಡೆದರು.
ಯರಗುಡಿ ಸೋಮಣ್ಣ, ಸುಬ್ಬರಾಯುಡು ಮತ್ತಿತರರು ಹಾಜರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್