LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಸಿ ಎಂ  ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ ಆರೋಪ: ಡಿಎಚ್‌ಒಗೆ ನೋಟಿಸ

ಬೆಳಗಾವಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಇತ್ತೀಚಿನ ಬೆಳಗಾವಿ ಜಿಲ್ಲಾ ಪ್ರವಾಸದ ವೇಳೆ ವೈದ್ಯಕೀಯ ಭದ್ರತೆ ಹಾಗೂ ವಿಐಪಿ ಶಿಷ್ಟಾಚಾರ ಪಾಲನೆಯಲ್ಲಿ ಗಂಭೀರ ಲೋಪಗಳು ನಡೆದಿರುವ ಆರೋಪದ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (ಡಿಎಚ್‌ಒ) ಡಾ. ಈಶ್ವರ ಗಡಾದ ಅವರಿಗೆ ಜಿಲ್ಲಾಡಳಿತ ಶೋಕಾಸ ನೋಟಿಸ ಜಾರಿ ಮಾಡಿದೆ.
9-7-2026  ರಂದು ಬೆಳಗಾವಿಯಲ್ಲಿ ನಡೆದ ವಿಭಾಗೀಯ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಆಗಮಿಸಿದ್ದ ವೇಳೆ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಕೈಗೊಳ್ಳಬೇಕಿದ್ದ ವೈದ್ಯಕೀಯ ಭದ್ರತಾ ಕ್ರಮಗಳಲ್ಲಿ ಸರಿಯಾಗಿ ಕೆಲಸ ಮಾಡದ ವಾಸ್ತವ  ಕಂಡುಬಂದಿದೆ ಎಂದು ಪರಿಶೀಲನೆಯಲ್ಲಿ ತಿಳಿದುಬಂದಿದೆ.
ನಿಯಮಾವಳಿಗಳ ಪ್ರಕಾರ ಮುಖ್ಯಮಂತ್ರಿ ಪ್ರವಾಸದ ಸಂದರ್ಭದಲ್ಲಿ ಅತ್ಯಾಧುನಿಕ ಜೀವರಕ್ಷಕ ಉಪಕರಣಗಳನ್ನು ಹೊಂದಿರುವ ಎಡ್ವಾನ್ಸ್ಡ್ ಲೈಫ್ ಸಪೋರ್ಟ್ (ALS) ಅಂಬುಲೆನ್ಸ್ ಹಾಗೂ ತಜ್ಞ ವೈದ್ಯರ ತಂಡವನ್ನು ಕಡ್ಡಾಯವಾಗಿ ನಿಯೋಜಿಸಬೇಕಾಗಿತ್ತು, ಆದರೆ, ಸಾಮಾನ್ಯ ಅಂಬುಲೆನ್ಸ್‌ನ್ನು ಮಾತ್ರ ನಿಯೋಜಿಸಿರುವುದು ಮುಖ್ಯಮಂತ್ರಿಗಳ ಆರೋಗ್ಯ ಭದ್ರತೆಯಲ್ಲಿ ಗಂಭೀರ ನಿರ್ಲಕ್ಷ್ಯ ಎಂದು ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ.
ಇದಲ್ಲದೆ, ಮುಖ್ಯಮಂತ್ರಿ ತಂಗಿದ್ದ ಸ್ಥಳದಲ್ಲಿ ಹಿರಿಯ ತಜ್ಞ ವೈದ್ಯರನ್ನು ನಿಯೋಜಿಸುವ ಬದಲು ವೈದ್ಯಕೀಯ ಸ್ನಾತಕೋತ್ತರ (ಪಿಜಿ) ವಿದ್ಯಾರ್ಥಿಗಳನ್ನು ಕರ್ತವ್ಯಕ್ಕೆ ನಿಯೋಜಿಸುವ ಮೂಲಕ ವಿಐಪಿ ಪ್ರೋಟೋಕಾಲ್ ಉಲ್ಲಂಘಿಸಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ.
ಪ್ರವಾಸದ ಅವಧಿಯಲ್ಲಿ ವೈದ್ಯಕೀಯ ತಂಡದೊಂದಿಗೆ ನಿರಂತರ ಸಂಪರ್ಕದಲ್ಲಿರದೆ, ಜಿಲ್ಲಾಡಳಿತದೊಂದಿಗೆ ಸಮರ್ಪಕ ಸಮನ್ವಯ ಸಾಧಿಸದಿರುವುದು  ಡಿಎಚ್‌ಒ ವಿರುದ್ಧದ ಪ್ರಮುಖ ಆರೋಪಗಳಲ್ಲಿ ಒಂದಾಗಿದೆ.
ಈ ಹಿನ್ನೆಲೆಯಲ್ಲಿ ಡಾ. ಈಶ್ವರ ಗಡಾದ ಅವರಿಗೆ ನೀಡಿರುವ ಶೋಕಾಸ್ ನೋಟಿಸ್‌ಗೆ ಏಳು ದಿನಗಳೊಳಗೆ ಸಮರ್ಪಕ ಲಿಖಿತ ವಿವರಣೆ ಸಲ್ಲಿಸುವಂತೆ ಸೂಚಿಸಲಾಗಿದೆ. ನಿಗದಿತ ಅವಧಿಯಲ್ಲಿ ಸಮರ್ಪಕ ಉತ್ತರ ನೀಡದಿದ್ದಲ್ಲಿ ಸೇವೆಯಿಂದ ಅಮಾನತು ಸೇರಿದಂತೆ ಕಠಿಣ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್