LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಅಕ್ರಮ ಅದಿರು ದಾಸ್ತಾನು, ಮಣ್ಣು ಸಾಗಣೆಗೆ ಲಂಚ ಆರೋಪ: ಸಿಪಿಐ ಉದಯರವಿ ಅಮಾನತು

ಬಳ್ಳಾರಿ, ಜೂ.10: ಕಬ್ಬಿಣದ ಅದಿರಿನ ಅಕ್ರಮ ದಾಸ್ತಾನು ಹಾಗೂ ಸರ್ಕಾರಿ ಕೆರೆಯ ಮಣ್ಣಿನ ಅಕ್ರಮ ಸಾಗಣೆಗೆ ನೆರವು ನೀಡಿದ ಆರೋಪ ಎದುರಿಸುತ್ತಿರುವ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಉದಯರವಿ ಅವರನ್ನು ಅಮಾನತುಗೊಳಿಸಲಾಗಿದೆ.
ಬಳ್ಳಾರಿ ವಲಯ ಪೊಲೀಸ್ ಮಹಾ ನಿರೀಕ್ಷಕರು (ಐಜಿಪಿ) ಜೂನ್ 6ರಂದು ಹೊರಡಿಸಿದ್ದ ಅಮಾನತು ಆದೇಶವನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಾಗೂ ಆರಕ್ಷಕ ಮಹಾನಿರೀಕ್ಷಕರು (ಡಿಜಿ ಮತ್ತು ಐಜಿಪಿ) ಡಾ. ಎಂ.ಎ. ಸಲೀಂ ಅವರು ಜೂನ್ 7ರಂದು ಸ್ಥಿರೀಕರಿಸಿ ಅಧಿಕೃತ ಆದೇಶ ಹೊರಡಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕರಡು ದೋಷಾರೋಪಣೆ ಪತ್ರ ಹಾಗೂ ಅಗತ್ಯ ದಾಖಲೆಗಳೊಂದಿಗೆ ಸಮಗ್ರ ವಿಚಾರಣಾ ವರದಿಯನ್ನು ಶೀಘ್ರವಾಗಿ ಸಲ್ಲಿಸುವಂತೆ ಬಳ್ಳಾರಿ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಸೂಚಿಸಲಾಗಿದೆ.
ಅಮಾನತಿಗೆ ಕಾರಣವೇನು?
ಬಳ್ಳಾರಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಸಿರುಗುಪ್ಪ ಉಪವಿಭಾಗದ ಡಿವೈಎಸ್‌ಪಿ ಸಲ್ಲಿಸಿದ ತನಿಖಾ ವರದಿಗಳ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.
ಮಾರ್ಚ್ 22ರಂದು ಬಳ್ಳಾರಿ ಗ್ರಾಮೀಣ ಠಾಣಾ ವ್ಯಾಪ್ತಿಯ ಹಲಕುಂದಿ ಸಮೀಪ ಕಾನೂನುಬಾಹಿರವಾಗಿ ಕಬ್ಬಿಣದ ಅದಿರು ಸಂಗ್ರಹಿಸಲಾಗಿದ್ದರೂ, ವಿಷಯ ತಿಳಿದಿದ್ದ ಇನ್ಸ್‌ಪೆಕ್ಟರ್ ಉದಯರವಿ ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ತನಿಖೆಯಲ್ಲಿ ಬಹಿರಂಗವಾಗಿದೆ.
ನಂತರ ಏಪ್ರಿಲ್ 3ರಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ದೂರು ನೀಡಿದ ಬಳಿಕ ಮಾತ್ರ ಅವರು ಪ್ರತ್ಯೇಕ ಪ್ರಕರಣ ದಾಖಲಿಸಿದ್ದರು. ಆದರೆ ಈ ವಿಷಯವನ್ನು ಠಾಣೆಯ ದಿನಚರಿಯಲ್ಲಿ ದಾಖಲಿಸದೇ ಹಾಗೂ ಮೇಲಾಧಿಕಾರಿಗಳ ಗಮನಕ್ಕೂ ತರದೇ ಮುಚ್ಚಿಟ್ಟಿರುವ ಆರೋಪ ಕೇಳಿಬಂದಿದೆ.
ಅಧಿಕಾರದ ದುರುಪಯೋಗ ಮಾಡಿಕೊಂಡು ಅದಿರು ದಂಧೆಕೋರರಿಗೆ ಅಕ್ರಮ ದಾಸ್ತಾನು ನಡೆಸಲು ಅವಕಾಶ ಮಾಡಿಕೊಟ್ಟಿರುವುದು ಮೇಲ್ನೋಟಕ್ಕೆ ಕಂಡುಬಂದಿರುವುದಾಗಿ ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಮಣ್ಣು ಸಾಗಣೆಗೆ ಲಂಚ ಪಡೆದ ಆರೋಪ
ಕೊಳಗಲ್ಲು ಗ್ರಾಮದ ಸರ್ಕಾರಿ ಕೆರೆಯಿಂದ ಮಣ್ಣನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಪ್ರಕರಣದಲ್ಲಿಯೂ ಉದಯರವಿ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿವೆ.
ಕೆರೆಯ ಮಣ್ಣನ್ನು ಅಕ್ರಮವಾಗಿ ಸಾಗಿಸಲು ಟ್ರ್ಯಾಕ್ಟರ್ ಹಾಗೂ ಟ್ಯಾಲಿ ಮಾಲೀಕರಿಂದ ಹಣ ವಸೂಲಿ ಮಾಡಿರುವುದಾಗಿ ಸಾಕ್ಷಿದಾರರು ತನಿಖಾಧಿಕಾರಿಗಳ ಮುಂದೆ ಹೇಳಿಕೆ ನೀಡಿದ್ದಾರೆ. ಅಲ್ಲದೆ, ಇಟ್ಟಿಗೆ ಭಟ್ಟಿ ಮಾಲೀಕರಿಂದಲೂ ಹಣ ಪಡೆದು ಸರ್ಕಾರಿ ಕೆರೆಯ ಮಣ್ಣಿನ ಅಕ್ರಮ ಲೂಟಿಗೆ ಕುಮ್ಮಕ್ಕು ನೀಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಈ ಎಲ್ಲಾ ಆರೋಪಗಳು ಇಲಾಖೆಯ ಶಿಸ್ತು ಮತ್ತು ಪೊಲೀಸ್ ವ್ಯವಸ್ಥೆಯ ಗೌರವಕ್ಕೆ ಧಕ್ಕೆ ತಂದಿರುವುದರಿಂದ ಅಮಾನತು ಕ್ರಮ ಅನಿವಾರ್ಯವಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ಪ್ರಕರಣದ ಇಲಾಖಾ ತನಿಖೆ ಮುಂದುವರಿದಿದ್ದು, ತನಿಖಾ ವರದಿಯ ಆಧಾರದ ಮೇಲೆ ಮುಂದಿನ ಶಿಸ್ತು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ