LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಅಮಿತಾಭ್​ ಬಚ್ಚನ್ ಗೆ ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ

ದೆಹಲಿ,ಏಪ್ರಿಲ್ 18:ಸಿನಿಮಾ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿದ, ಆ ಮೂಲಕ ದೇಶಕ್ಕೆ ಕೊಡುಗೆ ನೀಡಿದ ಬಾಲಿವುಡ್ ನಟ ಅಮಿತಾಭ್​ ಬಚ್ಚನ್ ಅವರಿಗೆ ಪ್ರತಿಷ್ಠಿತ ‘ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ’ಯನ್ನು ನೀಡಿ ಗೌರವಿಸಲಾಗುತ್ತಿದೆ.

ಮಂಗೇಶ್ಕರ್ ಕುಟುಂಬವು ಈ ಪ್ರಶಸ್ತಿಯನ್ನು ನೀಡುತ್ತಿದೆ. ಭಾರತೀಯ ಸಿನಿಮಾ, ಸಂಸ್ಕೃತಿ ಮತ್ತು ಸಮಾಜದ ಮೇಲೆ ಅಮಿತಾಭ್​ ಬಚ್ಚನ್  ಅವರು ಬೀರಿದ ಪ್ರಭಾವನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಇತ್ತೀಚೆಗಷ್ಟೇ ಸುದ್ದಿಗೋಷ್ಠಿ ಮೂಲಕ ಪ್ರಶಸ್ತಿ ಘೋಷಣೆ ಮಾಡಲಾಯಿತು. ಈ ಮೊದಲು ಇದೇ ಪ್ರಶಸ್ತಿ ಪಡೆದ ನರೇಂದ್ರ ಮೋದಿ ಹಾಗೂ ಗಾಯಕಿ ಆಶಾ ಭೋಂಸ್ಲೆ ಅವರ ಸಾಲಿಗೆ ಈಗ ಅಮಿತಾಭ್​ ಬಚ್ಚನ್​ ಸೇರ್ಪಡೆ ಆಗುತ್ತಿದ್ದಾರೆ.

‘ಭಾರತ ರತ್ನ’ ಪ್ರಶಸ್ತಿ ಪುರಸ್ಕೃತೆ, ದಿವಂಗತ ಗಾಯಕಿ ಲತಾ ಮಂಗೇಶ್ಕರ್ ಅವರ ಸ್ಮರಣಾರ್ಥ ‘ದೀನನಾಥ್ ಮಂಗೇಶ್ಕರ್ ಸ್ಮೃತಿ ಪ್ರತಿಷ್ಠಾನ’ ನೀಡುತ್ತಿರುವ ಈ ಪ್ರಶಸ್ತಿಯು ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಕೊಡುಗೆ ನೀಡಿದ ವ್ಯಕ್ತಿಗಳನ್ನು ಗುರುತಿಸುತ್ತದೆ. ಅಮಿತಾಬ್​ ಬಚ್ಚನ್ ಅವರ ಜೊತೆಗೆ, ಅತ್ಯುತ್ತಮ ಸಾಧನೆ ಮಾಡಿದ ಹಲವಾರು ದಿಗ್ಗಜರಿಗೆ ಈ ಪ್ರಶಸ್ತಿ ಸಿಗುತ್ತಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್