LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಹಿರೇಹಡ್ಲಿಗಿ ಗ್ರಾಮದಲ್ಲಿ ಸಂಭ್ರಮದ ಆಂಜನೇಯ ಸ್ವಾಮಿ ರಥೋತ್ಸವ 







​ಬಳ್ಳಾರಿ,03..: ತಾಲ್ಲೂಕಿನ ಹಿರೇಹಡ್ಲಿಗಿ ಗ್ರಾಮದಲ್ಲಿ ಶ್ರೀ ಆಂಜನೇಯ ಸ್ವಾಮಿಯ ರಥೋತ್ಸವವು ಅತ್ಯಂತ ವೈಭವ ಹಾಗೂ ಸಡಗರ ಸಂಭ್ರಮದಿಂದ ನೆರವೇರಿತು.


 ಹನುಮಾನ್ ಜಯಂತಿ ಹಿನ್ನೆಲೆ

ಗ್ರಾಮದ ಆರಾದ್ಯದೈವ ಆಂಜನೇಯ ಸ್ವಾಮಿಯ ಕೃಪೆಗೆ ಪಾತ್ರರಾಗಲು ಸಾವಿರಾರು ಭಕ್ತರು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.


ರಥೋತ್ಸವದ ಅಂಗವಾಗಿ ಬೆಳಿಗ್ಗೆಯಿಂದಲೇ ದೇವಸ್ಥಾನದಲ್ಲಿ ವಿಶೇಷ ಧಾರ್ಮಿಕ ವಿಧಿವಿಧಾನಗಳು ಜರುಗಿದವು. ಸ್ವಾಮಿಗೆ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ ಹಾಗೂ ಮಹಾಮಂಗಳಾರತಿಯನ್ನು ನೆರವೇರಿಸಲಾಯಿತು. ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಹಳ್ಳಿಗಳ ಭಕ್ತರು ಮುಂಜಾನೆಯಿಂದಲೇ ದೇವಸ್ಥಾನಕ್ಕೆ ಆಗಮಿಸಿ ಸ್ವಾಮಿಯ ದರ್ಶನ ಪಡೆದರು.



ಸಂಜೆ ನಿಗದಿತ ಶುಭ ಮುಹೂರ್ತದಲ್ಲಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಅಲಂಕೃತಗೊಂಡ ರಥದಲ್ಲಿ ಆಂಜನೇಯ ಸ್ವಾಮಿಯ ರಥೋತ್ಸವನ್ನು ಭಕ್ತರು ಭಕ್ತಿಯ ಜಯಘೋಷಗಳೊಂದಿಗೆ ರಥವನ್ನು ಎಳೆದರು.


ಆಂಜನೇಯ ದೇವಸ್ಥಾನದಿಂದ ಪ್ರಾರಂಭವಾದ ರಥಯಾತ್ರೆಯು ಗ್ರಾಮದ ಪ್ರಮುಖ ರಸ್ತೆಗಳ ಮೂಲಕ ಸಾಗಿ ವಾಲ್ಮೀಕಿ ವೃತ್ತದವರೆಗೆ ಅತ್ಯಂತ ಅದ್ದೂರಿಯಾಗಿ ತಲುಪಿತು.


ರಥವು ಸಾಗುವ ಮಾರ್ಗದುದ್ದಕ್ಕೂ ಭಕ್ತರು ಬಾಳೆಹಣ್ಣು ಮತ್ತು ಉತ್ತತ್ತಿಯನ್ನು ರಥಕ್ಕೆ ಎಸೆಯುವ ಮೂಲಕ ತಮ್ಮ ಹರಕೆಯನ್ನು ತೀರಿಸಿದರು. ವಿವಿಧ ಮೇಳಗಳ ವಾದ್ಯಘೋಷಗಳು, ಭಜನಾ ತಂಡಗಳ ಹಾಡುಗಳು ರಥೋತ್ಸವಕ್ಕೆ ವಿಶೇಷ ಮೆರುಗು ನೀಡಿದವು.


ವಾಲ್ಮೀಕಿ ವೃತ್ತದ ಬಳಿ ರಥವು ಬಂದಾಗ ಭಕ್ತರ ಸಂಭ್ರಮ ಮುಗಿಲು ಮುಟ್ಟಿತ್ತು.

​ಗ್ರಾಮದ ಹಿರಿಯರು, ದೇವಸ್ಥಾನ ಸಮಿತಿಯ ಪದಾಧಿಕಾರಿಗಳು ಹಾಗೂ ಯುವಕ ಸಂಘದ ಸದಸ್ಯರು ರಥೋತ್ಸವದ ಯಶಸ್ಸಿಗೆ ಶ್ರಮಿಸಿದರು.


ಯಾವುದೇ ಅಹಿತಕರ ಘಟನೆ ನಡೆಯದಂತೆ ಗ್ರಾಮಸ್ಥರೇ ಸ್ವಯಂಪ್ರೇರಿತರಾಗಿ ಶಿಸ್ತನ್ನು ಕಾಪಾಡಿಕೊಂಡಿದ್ದು ವಿಶೇಷವಾಗಿತ್ತು. ರಥೋತ್ಸವದ ನಂತರ ಭಕ್ತಾದಿಗಳಿಗೆ ಭಕ್ತಾಧಿಗಳು ಅನ್ನಸಂತರ್ಪಣೆ (ಪ್ರಸಾದ) ಏರ್ಪಡಿಸಿದ್ದರು.

ಈ ಸಂದರ್ಭದಲ್ಲಿ ಗ್ರಾಮದ ಹಿರಿಯ ಮುಖಂಡರು, ಮಕ್ಕಳು, ಮಹಿಳೆಯರು ಭಾಗವಹಿಸಿದ್ದರು.







Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್