LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಡಿ ಗ್ರೂಪ್ ನೌಕರರ ನೇಮಕಕ್ಕೆ ಮನವಿ 

ಬಳ್ಳಾರಿ,ಮೇ.೧೫: ಬಳ್ಳಾರಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಕೇಂದ್ರದಲ್ಲಿ ಡಿ ಗ್ರೂಪ್ ನೌಕರರನ್ನು ಹೆಚ್ಚಳ ಮಾಡುವಂತೆ ಬಳ್ಳಾರಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಕೇಂದ್ರದ ನಿರ್ದೇಶಕರಿಗೆ ಎಐಯುಟಿಯುಸಿಗೆ ಸಂಯೋಜನೆಗೊAಡ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಗಳ ಗುತ್ತಿಗೆ ನೌಕರರ ಸಂಘವು ಮನವಿ ಸಲ್ಲಿಸಿತು.
      ಬಳ್ಳಾರಿ ವೈದ್ಯಕೀಯ ಮಹಾವಿದ್ಯಾಲಯ ವಿಸ್ತರಣೆಯಾಗುತ್ತಿರುವುದು ಅತ್ಯಂತ ಸಂತೋಷದ ವಿಷಯ. ಇತ್ತೀಚಿನ ಕೆಲ ವರ್ಷಗಳಲ್ಲಿ ಟ್ರಾಮಾ ಕೇರ್, ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಕೂಡ ಪ್ರಾರಂಭವಾಗಿವೆ. ದಿನಕ್ಕೆ ಸುಮಾರು ೨೦೦೦ ಹೊರ ರೋಗಿಗಳು ಇಲ್ಲಿ ಬರುತ್ತಾರೆ ಎಂಬುವ ಅಂದಾಜಿದೆ. ಸುತ್ತಾಮುತ್ತಾ ಜಿಲ್ಲೆಗಳಿಂದ, ನೆರೆಯ ಆಂಧ್ರಪ್ರದೇಶದಿAದ ಕೂಡ ರೋಗಿಗಳು ಬರುತ್ತಾರೆ. ಇಂತಹ ಸಂದರ್ಭದಲ್ಲಿ ದೊಡ್ಡ ಸಂಖ್ಯೆ, ಸುಮಾರು ೭೫೦-೯೦೦ ಡಿ ಗ್ರೂಪ್ ನೌಕರರ ಅವಶ್ಯಕತೆಯಿದೆ. ಆದರೆ ಇಲ್ಲಿ ಕೆಲಸ ನಿರ್ವಹಿಸುತ್ತಿರುವುದು ಕೇವಲ ೪೫೦-೫೦೦. ಅದು ಕೂಡ ಹೊರಗುತ್ತಿಗೆ ಆಧಾರದ ಮೇಲೆ. ಇದರ ಪರಿಣಾಮವಾಗಿ ಇರುವ ಕಾರ್ಮಿಕರ ಮೇಲೆ ಒತ್ತಡ ತೀವ್ರವಾಗಿದೆ. ಒಬ್ಬ ಕಾರ್ಮಿಕ, ೨-೩ ಕಾರ್ಮಿಕರ ಕೆಲಸವನ್ನು ಮಾಡಬೇಕಾಗಿದೆ. ಜೊತೆಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸಾಧ್ಯವಾಗುವುದಿಲ್ಲ. ಈ ಹಿನ್ನಲೆಯಲ್ಲಿ ಆರೋಗ್ಯದಂತಹ ಅವಶ್ಯಕ ಸೇವೆಯ ವಿಷಯದಲ್ಲಿ ರಾಜ್ಯ ಸರ್ಕಾರ ಗಂಭೀರವಾಗಿ ತೆಗೆದುಕೊಂಡು, ಕೂಡಲೆ ಅವಶ್ಯಕವಿರುವ ಹೆಚ್ಚುವರಿ ಡಿ ಗ್ರೂಪ್ ಕಾರ್ಮಿಕರನ್ನು ನೇಮಕ ಮಾಡಲು ಕೂಡಲೆ ಕ್ರಮಕೈಗೊಳ್ಳಬೇಕೆಂದು ಮನವಿ ಮಾಡಿದೆ.
      ಇನ್ನು ಅನೇಕ ಕಾರ್ಮಿಕರು ನೇಮಕಾತಿ ಪತ್ರ ಸಿಗದೆ ಇರುವುದು, ಪಿಎಫ್ ಸಮಸ್ಯೆ ಸೇರಿದಂತೆ ಅನೇಕ ಸಮಸ್ಯೆಗಳಿಗೆ ಒಳಗಾಗಿದ್ದಾರೆ. ಈ ಕೊರತೆಗಳನ್ನು ನೀಗಿಸಲು ಗುತ್ತಿಗೆದಾರರ ಜೊತೆ ಸಭೆ ಆಗುವುದು ಕೂಡ ಅವಶ್ಯಕತೆ ಇದೆ.  ಇದಲ್ಲದೆ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮಹಿಳಾ ಕಾರ್ಮಿಕರಿಗೆ ವಿಶ್ರಾಂತಿ ಕೊಠಡಿಯಿಲ್ಲದೆ. ಊಟ ಮಾಡಲು, ವಸ್ತç ಬದಲಿಸಲು ತೀವ್ರ ತೊಂದರೆಯನ್ನು ಅನುಭವಿಸುತ್ತಿದ್ದಾರೆ ಎಂದು ಮನವಿಯಲ್ಲಿ ತಿಳಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್