LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ರೈತರಿಗೆ ಎಪಿಎಂಸಿ ಮಾರುಕಟ್ಟೆಯಲ್ಲಿ ಸ್ಥಳಾವಕಾಶ ಕಲ್ಪಿಸಲು ಮನವಿ







ಬಳ್ಳಾರಿ, ಏ.09.: ಎಪಿಎಂಸಿ ಮಾರುಕಟ್ಟೆಯಲ್ಲಿ ರೈತರಿಗೆ ಸೂಕ್ತ ಸ್ಥಳಾವಕಾಶ ಕಲ್ಪಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಬಳ್ಳಾರಿ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಮಂಗಳವಾರ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಉದ್ದೇಶಿಸಿ ಬರೆದ ಮನವಿ ಪತ್ರವನ್ನು ಕೇಂದ್ರ ಸ್ಥಾನಿಕ ಅಧಿಕಾರಿಗೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಅಧ್ಯಕ್ಷ ಕೃಷ್ಣಮೂರ್ತಿ (ಅಕ್ಕಿಕೃಷ್ಣ), ಎಪಿಎಂಸಿಯಲ್ಲಿ ಶೇಂಗಾ, ಜೋಳ, ಮೆಕ್ಕೆಜೋಳ ಸೇರಿದಂತೆ ವಿವಿಧ ಬೆಳೆಗಳನ್ನು ತಂದು ಮಾರಾಟ ಮಾಡುವ ರೈತರಿಗೆ ಜಾಗದ ಕೊರತೆ ಉಂಟಾಗಿದೆ ಎಂದು ಹೇಳಿದರು.

ಆಂಧ್ರ ಪ್ರದೇಶದ ಉರುವಕೊಂಡ, ರಾಯದುರ್ಗ ಹಾಗೂ ಬಳ್ಳಾರಿ ಜಿಲ್ಲೆಯ ವಿವಿಧ ಭಾಗಗಳಿಂದ ರೈತರು ತರಲಾಗುವ ಬೆಳೆಗಳಿಗೆ ಮಾರುಕಟ್ಟೆಯಲ್ಲಿ ಸ್ಥಳಾವಕಾಶ ಇಲ್ಲದ ಕಾರಣ, ರಸ್ತೆಗಳಲ್ಲಿ ಹಾಕಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಲಾರಿಗಳು ಬೆಳೆಗಳ ಮೇಲೆ ಸಂಚರಿಸಿ ರೈತರಿಗೆ ನಷ್ಟ ಉಂಟಾಗುತ್ತಿದೆ ಎಂದು ಅವರು ದೂರಿದರು.

ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ರೈತರಿಗೆ ಸೂಕ್ತ ಸ್ಥಳಾವಕಾಶ ಒದಗಿಸಬೇಕು ಎಂದು ಅವರು ಆಗ್ರಹಿಸಿದರು.

ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಬೇವಿನಗಿಡದ ರವಿಸ್ವಾಮಿ, ಕೊಳಗಲ್ಲು ತಿಮ್ಮಪ್ಪ, ಬೈಲೂರು ವೀರೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.







Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್