LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಗೌರವ ಧನ ಹೆಚ್ಚಳಕ್ಕೆ ಆಗ್ರಹಿಸಿ ಸರ್ಕಾರಕ್ಕೆ ಮನವಿ




ಬಳ್ಳಾರಿ 10.: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವಧನ ಹೆಚ್ಚಿಸುವಂತೆ ಆಗ್ರಹಿಸಿ ಇಂದು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.

ಫೆಡರೇಷನ್ ನ ಜಿಲ್ಲಾಧ್ಯಕ್ಷೆ ಎಸ್.ಅರ್ಕಾಣಿ ಅವರು ಈ ವೇಳೆ ಮಾತನಾಡಿ, ರಾಜ್ಯ ಸರ್ಕಾರ ಮಂಡಿಸಿರುವ ಇತ್ತೀಚಿನ ಬಜೆಟ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಗೌರವಧನ ಹೆಚ್ಚಳ ಕುರಿತು ಯಾವುದೇ ಘೋಷಣೆ ಮಾಡಿಲ್ಲ. ಕೇವಲ ಸೀರೆ ವಿತರಿಸುವ ಮಾತಾಗಿದೆ. ಇದು ನಿರಾಶೆ ಉಂಟುಮಾಡಿದೆ ಎಂದು ಫೆಡರೇಷನ್ ಆರೋಪಿಸಿದೆ. ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯಂತೆ ಅಂಗನವಾಡಿ, ಬಿಸಿ ಊಟ ಹಾಗೂ ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಿಸುವ ಬಗ್ಗೆ ಘೋಷಣೆ ಮಾಡಲಾಗಿತ್ತು. ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೂರು ವರ್ಷ ಕಳೆದರೂ ಆ ಭರವಸೆ ಈಡೇರಿಲ್ಲ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದರು.

ಹಿಂದಿನ ಸರ್ಕಾರದ ಅವಧಿಯಲ್ಲಿ ಕಾರ್ಯಕರ್ತೆಯರ ಗೌರವಧನವನ್ನು ಹೆಚ್ಚಿಸುವ ಬಗ್ಗೆ ಘೋಷಣೆ ಮಾಡಲಾಗಿತ್ತು. ಇದುವರೆಗೆ ಅನುಷ್ಠಾನಕ್ಕೆ ತರಲಾಗಲಿಲ್ಲ. ನಂತರದ ಬಜೆಟ್‌ನಲ್ಲಿ ಕೇವಲ ಸಾವಿರ ರೂಪಾಯಿ ಮಾತ್ರ ಹೆಚ್ಚಳ ಮಾಡಲಾಗಿದೆ. ಸರ್ಕಾರ ನೀಡಿದ ಭರವಸೆಯಂತೆ ಮಾಸಿಕ ರೂ. ೧೫,೦೦೦ ಗೌರವಧನ ನೀಡುವ ಘೋಷಣೆ ಇನ್ನೂ ಜಾರಿಯಾಗಿಲ್ಲ. ೨೦೧೧ ರಿಂದ ಸೇವೆ ಸಲ್ಲಿಸಿ ನಿವೃತ್ತರಾದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಗ್ರಾಚ್ಯುಟಿ ಸೌಲಭ್ಯ ನೀಡಲಾಗಿಲ್ಲ. ೨೦೨೦ರ ನಂತರ ನಿವೃತ್ತರಾದವರಿಗೆ ಮಾತ್ರ ಈ ಸೌಲಭ್ಯ ಅನ್ವಯವಾಗುತ್ತಿದೆ. ಇದರಿಂದ ಸಾವಿರಾರು ವಯೋವೃದ್ಧರಿಗೆ ನ್ಯಾಯ ಸಿಗುತ್ತಿಲ್ಲ.

ಈ ಹಿನ್ನೆಲೆಯಲ್ಲಿ ಬಜೆಟ್ ಅಂಗೀಕಾರಗೊಳ್ಳುವ ಮೊದಲು ಸೀರೆ ನೀಡುವ ಪ್ರಸ್ತಾಪವನ್ನು ಕೈಬಿಟ್ಟು ಅದೇ ಅನುದಾನವನ್ನು ಗೌರವಧನ ಹೆಚ್ಚಳಕ್ಕೆ ಬಳಸುವಂತೆ ಫೆಡರೇಷನ್ ಸರ್ಕಾರವನ್ನು ಒತ್ತಾಯಿಸಿದೆ. ಈ ಕುರಿತು ಮಾರ್ಚ್ ೭ರಂದು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು `ಸೀರೆ ಬೇಡ, ಗೌರವಧನ ಹೆಚ್ಚಿಸಿ' ಎಂಬ ಘೋಷಣೆಗಳೊಂದಿಗೆ ಪ್ರತಿಭಟನೆ ನಡೆಸಿ ಸರ್ಕಾರದ ಗಮನ ಸೆಳೆದಿರುವುದಾಗಿ ಹೇಳಿದರು.

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ನ ಕಾನೂನು ಸಲಹೆಗಾರರಾದ ಎ.ಆರ್.ಎಂ.ಇಸ್ಮಾಯಿಲ್, ತಾಲೂಕು ಘಟಕದ ಅಧ್ಯಕ್ಷೆ ಇ.ಮಂಗಮ್ಮ, ಪದಾಧಿಕಾರಿಗಳಾದ ರ‍್ರೆಮ್ಮ, ಮೀನಾ, ಇಂದಿರಾ, ವೀರಮ್ಮ ಹಿರೇಮಠ ಮತ್ತಿತರರು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.






Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್