LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

18 ಶಾಸಕರನ್ನು ಅಮಾನತುಗೊಳಿಸಿದ್ದ ನಿರ್ಣಯ ವಾಪಸ್ಸಾತಿಗೆ ಅನುಮೋದನೆ

ಬೆಂಗಳೂರು: ಸಭಾಧ್ಯಕ್ಷರ ಪೀಠಕ್ಕೆ ಅಗೌರವ ಸೂಚಿಸಿದ್ದ ಆರೋಪದ ಮೇಲೆ 6 ತಿಂಗಳು ಬಿಜೆಪಿಯ 18 ಶಾಸಕರನ್ನು ಅಮಾನತುಗೊಳಿಸಿದ್ದ ನಿರ್ಣಯ ಹಿಂಪಡೆದಿರುವುದನ್ನು ವಿಧಾನಸಭೆಯಲ್ಲಿ ಇಂದು ಸ್ಥಿರೀಕರಿಸಲಾಯಿತು.


ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಅವರು ಸ್ಥಿರೀಕರಣ ಪ್ರಸ್ತಾವವನ್ನು ಸದನದಲ್ಲಿ ಮಂಡಿಸಿ ಬಿಜೆಪಿ ಶಾಸಕರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ, ಮುನಿರತ್ನ, ಬೈರತಿ ಬಸವರಾಜ್, ಎಸ್.ಆರ್.ವಿಶ್ವನಾಥ್, ದೊಡ್ಡನಗೌಡ ಪಾಟೀಲ್, ಚನ್ನಬಸಪ್ಪ, ಉಮಾನಾಥ್ ಕೋಟ್ಯಾನ್, ಎಂ.ಆರ್.ಪಾಟೀಲ್, ಡಾ.ಭರತ್ ಶೆಟ್ಟಿ, ಬಿ.ಪಿ.ಹರೀಶ್, ದೀರಜ್ ಮುನಿರಾಜು, ಡಾ.ಚಂದ್ರುಲಮಾಣಿ, ಶರಣು ಸಲಗಾರ್, ಬಸವರಾಜ್ ಮತ್ತಿಮೋಡ್ ಸೇರಿದಂತೆ 18 ಶಾಸಕರನ್ನು ಅಮಾನತು ಮಾಡಲಾಗಿತ್ತು ಎಂದರು.


ಬಿಜೆಪಿ 18 ಶಾಸಕರನ್ನು ಆರು ತಿಂಗಳ ಅಮಾನತು ಮಾಡಲಾಗಿತ್ತು. ಅಮಾನತುಗೊಳಿಸಿದ ನಿರ್ಣಯವನ್ನು ಮೇ 25 ರಿಂದ ಜಾರಿಗೆ ಬರುವಂತೆ ಹಿಂಪಡೆಯಾಗಿದೆ. ಈ ಸ್ಥಿರೀಕರಣ ಪ್ರಸ್ತಾವಕ್ಕೆ ಸದನ ಅನುಮೋದನೆ ನೀಡಬೇಕು ಎಂದು ಕೋರಿದರು. ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಪ್ರಸ್ತಾವವನ್ನು ಮತಕ್ಕೆ ಹಾಕಿದಾಗ, ಧ್ವನಿಮತದ ಮೂಲಕ ಅನುಮೋದನೆ ಪಡೆಯಲಾಯಿತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್