LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಜಯಗಾಂಧಿ ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿ ಅರವಿಂದ ಆತ್ಮಹತ್ಯೆ

ಬಳ್ಳಾರಿ, ಮಾ.11: ನಗರದ ಸಂಜಯ ಗಾಂಧಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವ್ಯಾಸಂಗ ಮಾಡ್ತಿದ್ದ ವಿದ್ಯಾರ್ಥಿ ಯೋರ್ವ ನೇಣು ಬಿಗಿದುಕೊಂಡು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ನಿನ್ನೆ ಕಾಲೇಜಿನಲ್ಲಿ ಉಪನ್ಯಾಸಕರು ಬೈದಿರೋದು ಅತ್ಯಹತ್ಯೆಗೆ ಕಾರಣ ಎಂದು ಅರೋಪ ಕೇಳಿಬಂದಿದೆ

ನಗರದ ಗುಗ್ಗರಹಟ್ಟಿ ಪ್ರದೇಶದ ಅರವಿಂದ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿಯಾಗಿದ್ದಾನೆ.

ನಿನ್ನೆ ದಿನ ಕಾಲೇಜಿನ ವಿದ್ಯಾರ್ಥಿಗಳ ಮಧ್ಯೆ ಒಂದಷ್ಟು ಜಗಳವಾಗಿತ್ತು. ಆಗ ಆರವಿಂದ ಪೋಷಕರನ್ನು ಕಾಲೇಜಿನ ಉಪನ್ಯಾಸಕರು ಕರೆದು. ಹೀಗೆ ಗಲಾಟೆ ಮಾಡೋ ಹುಡುಗರನ್ನು ನಾವು ಕಾಲೇಜಿನಲ್ಲಿ ಇರಿಸಿಕೊಳ್ಳಲು ಸಾಧ್ಯವಿಲ್ಲ. ಇದು ಲಾಸ್ಟ್ ವಾರ್ನಿಂಗ್ ಎಂದು ಹೇಳಿ ಕಳುಹಿಸಿದ್ದರು. ಇದರಿಂದ ಮನನೊಂದ ಅರವಿಂದ ನಿನ್ನೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ ಎಂಬ ಆರೋಪವಾಗಿದೆ.

ಇಂದು ಬೆಳಿಗ್ಗೆ ಅರವಿಂದ ಸಾವಿನ ಹಿನ್ನಲೆಯಲ್ಲಿ ಕಾಲೇಜಿನಲ್ಲಿ ಶ್ರದ್ದಾಂಜಲಿ ಸಭೆ ನಡೆಸಲಾಯ್ತು. ನಂತರ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಅರವಿಂದ ಗೆ ಕಾಲೇಕಿನ ಹೆಚ್ಓಡಿ ಮತ್ತು ಉಪನ್ಯಾಸಕರು ಬೈದಿರೋದೇ ಕಾರಣ ಎಂದು ಆರೋಪಿಸಿ ಹೈಡ್ರಾಮ ನಡೆದು ಅರವಿಂದ ಸಾವಿನ ವಿಷಯದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು. ಕಾಲೇಜಿನ ಟೇಬಲ್, ಗ್ಲಾಸ್ ಒಡೆದು ಹಾಕಿ ಆಡಳಿತ ಮಂಡಳಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಆಡಳಿತ ಮಂಡಳಿ ಬರಬೇಕು ನ್ಯಾಯ ಕೊಡಬೇಕೆಂದು ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದರು. ಸ್ಥಳಕ್ಕೆ ಬ್ರೂಸ್ ಪೇಟ್ ಪೊಲೀಸರು ಅಗಮಿಸಿ ಪರಿಸ್ಥಿತಿ ತಿಳಿಗೊಳಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್