LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ವಿವಾದಗಳ ಇತ್ಯರ್ಥಕ್ಕೆ ಮಧ್ಯಸ್ಥಿಕೆ ಕಾನೂನುಬದ್ಧವಾಗಿದೆ: ಹೈಕೋರ್ಟ್ ನ್ಯಾಯಮೂರ್ತಿ ಆರ್.ನಟರಾಜ್



ಬಳ್ಳಾರಿ,ಜೂ.22 : ಮಧ್ಯಸ್ಥಿಕೆಯನ್ನು ಕಾನೂನುಬದ್ಧಗೊಳಿಸಲಾಗಿದೆ. ವಿವಾದದಲ್ಲಿರುವ ಕಕ್ಷಿದಾರರ ನಡುವೆ ಸಂಧಾನ ಮೂಡಿಸುವಲ್ಲಿ ನ್ಯಾಯಾಧೀಶರ ಪಾತ್ರ ಅತ್ಯಂತ ಪ್ರಮುಖವಾಗಿದೆ. ಯಾವ ಪ್ರಕರಣಗಳನ್ನು ಮಧ್ಯಸ್ಥಿಕೆಗೆ ಕಳುಹಿಸಬೇಕು ಎಂಬುದನ್ನು ನ್ಯಾಯಾಧೀಶರೇ ನಿರ್ಧರಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರು ಹಾಗೂ ಬಳ್ಳಾರಿ ಜಿಲ್ಲೆಯ ಆಡಳಿತಾತ್ಮಕ ನ್ಯಾಯಾಧೀಶರಾದ ನ್ಯಾಯಮೂರ್ತಿ ಆರ್.ನಟರಾಜ್ ಅವರು ಹೇಳಿದರು.
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ಮಧ್ಯಸ್ಥಿಕೆ ಕೇಂದ್ರ ಹಾಗೂ ಬಳ್ಳಾರಿ, ವಿಜಯನಗರ ಮತ್ತು ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳ ಜಂಟಿ ಆಶ್ರಯದಲ್ಲಿ ಬಳ್ಳಾರಿ, ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಗಳ ನ್ಯಾಯಾಧೀಶರು ಹಾಗೂ ರೆಫರಲ್ ಜಡ್ಜ್ಗಳಿಗೆ ಮಧ್ಯಸ್ಥಿಕೆ ಕುರಿತು ಬಳ್ಳಾರಿಯ ತಾಳೂರು ರಸ್ತೆಯಲ್ಲಿರುವ ಜಿಲ್ಲಾ ನ್ಯಾಯಾಲಯದ ಸಂಕೀರ್ಣದ 1 ನೇ ಮಹಡಿಯ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಒಂದು ದಿನದ ಪುನಶ್ಚೇತನ ತರಬೇತಿ ಕಾರ್ಯಾಗಾರವನ್ನು ವರ್ಚುವಲ್ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಭಾರತದಲ್ಲಿ ಮಧ್ಯಸ್ಥಿಕೆ ಅಥವಾ ಸಂಧಾನ ಎಂಬುದು ಹೊಸದೇನಲ್ಲ, ಮೊದಲಿನಿಂದಲೂ ವಿವಾದಗಳನ್ನು ಸಂಧಾನದ ಮೂಲಕವೇ ಬಗೆಹರಿಸಿಕೊಳ್ಳುವ ಸಂಪ್ರದಾಯವನ್ನು ಭಾರತವು ಹೊಂದಿದೆ. ಕುಟುಂಬದ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿಂದ ಹಿಡಿದು ಹಳ್ಳಿಯ ಪಂಚಾಯಿತಿಗಳವರೆಗೆ ನಮ್ಮ ದೈನಂದಿನ ಜೀವನದಲ್ಲಿ ಪೋಷಕರು ಮತ್ತು ಹಿರಿಯರು ಮಧ್ಯಸ್ಥಿಕೆ ವಹಿಸುತ್ತಾ ಬಂದಿದ್ದಾರೆ. ಇಂದು ನಾವು ಸಾಂಸ್ಥಿಕ ನ್ಯಾಯದಾನದ ವ್ಯವಸ್ಥೆಗೆ ಬದಲಾಗಿದ್ದರೂ, ನಮ್ಮ ಇತಿಹಾಸ ಮತ್ತು ಪುರಾಣಗಳಲ್ಲಿ ಮಧ್ಯಸ್ಥಿಕೆಗೆ ಅಗ್ರಸ್ಥಾನವಿದೆ ಎಂದರು.
ಮಧ್ಯಸ್ಥಿಕೆಯು ಕೇವಲ ಪ್ರಕರಣಗಳನ್ನು ಇತ್ಯರ್ಥಪಡಿಸುವುದಿಲ್ಲ, ಬದಲಿಗೆ ಕರಗಿಹೋದ ಸಂಬAಧಗಳನ್ನು ಬೆಸೆಯುತ್ತದೆ. ಉಭಯ ಪಕ್ಷಗಳ ನಡುವಿನ ದ್ವೇಷವನ್ನು ತಣಿಸಿ, ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಯಿಂದ ಬದುಕಲು ದಾರಿ ಮಾಡಿಕೊಡುತ್ತದೆ ಎಂದು ಆಶಿಸುತ್ತಾ ತರಬೇತಿ ಶಿಬಿರಕ್ಕೆ ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ನ್ಯಾಯಾಧೀಶರು ಅಂತರಾಷ್ಟಿçÃಯ ಯೋಗ ದಿನ ಹಾಗೂ ವಿಶ್ವ ತಂದೆಯAದಿರ ದಿನದ ಶುಭಾಶಯ ತಿಳಿಸಿದರು.
ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರು ಹಾಗೂ ಕೊಪ್ಪಳ ಜಿಲ್ಲೆಯ ಆಡಳಿತಾತ್ಮಕ ನ್ಯಾಯಾಧೀಶರಾದ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರು ವರ್ಚುವಲ್ ಮೂಲಕ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿ, ನ್ಯಾಯಾಲಯಗಳ ಮೇಲಿರುವ ಅಗಾಧವಾದ ಕೆಲಸದ ಹೊರೆಯನ್ನು ಕಡಿಮೆ ಮಾಡಲು ಮತ್ತು ಕಕ್ಷಿದಾರರ ನಡುವಿನ ಬಾಂಧವ್ಯವನ್ನು ಉಳಿಸಲು ಪರ್ಯಾಯ ವಿವಾದ ಬಗೆಹರಿಕೆ ವ್ಯವಸ್ಥೆ, ಅದರಲ್ಲೂ ವಿಶೇಷವಾಗಿ ಮಧ್ಯಸ್ಥಿಕೆ ಇಂದಿನ ತುರ್ತು ಅಗತ್ಯವಾಗಿದೆ ಎಂದು ಹೇಳಿದರು.
ಮಧ್ಯಸ್ಥಿಕೆಯು ಈಗ ಕೇವಲ ಒಂದು ಆಯ್ಕೆಯಾಗಿ ಉಳಿದಿಲ್ಲ, ಬದಲಿಗೆ ಅದೊಂದು ಶಾಸನಬದ್ಧ ಆದೇಶವಾಗಿದೆ. ನ್ಯಾಯಾಂಗ ವ್ಯವಸ್ಥೆಯು ಇಂದು ಎದುರಿಸುತ್ತಿರುವ ಅತಿ ದೊಡ್ಡ ಸವಾಲೆಂದರೆ ಪ್ರಕರಣಗಳ ಅಗಾಧ ಬಾಕಿ. ಇಂತಹ ಸಂದರ್ಭದಲ್ಲಿ ನ್ಯಾಯಾಧೀಶರು ಪ್ರಕರಣಗಳನ್ನು ಮಧ್ಯಸ್ಥಿಕೆಗೆ ಒಪ್ಪಿಸುವ ಮೂಲಕ ನ್ಯಾಯಾಲಯದ ಹೊರೆಯನ್ನು ಗಣನೀಯವಾಗಿ ತಗ್ಗಿಸಬಹುದು ಎಂದು ತಿಳಿಸಿದರು.
ನ್ಯಾಯಾಂಗ ಅಧಿಕಾರಿಗಳು ಕೇವಲ ತೀರ್ಪು ನೀಡುವುದಕ್ಕೆ ಸೀಮಿತವಾಗದೆ, ಪ್ರಕರಣಗಳನ್ನು ಆರಂಭಿಕ ಹಂತದಲ್ಲೇ ಮಧ್ಯಸ್ಥಿಕೆಗೆ ಪ್ರೇರೇಪಿಸುವ ಮುಂಚೂಣಿ ಪಾತ್ರ ವಹಿಸಬೇಕು. ಈ ಮೂಲಕ ಸಮಾಜದಲ್ಲಿ ಸೌಹಾರ್ದತೆ ಕಾಯ್ದುಕೊಳ್ಳಬಹುದು ಎಂದು ಕರೆ ನೀಡಿದರು.
ಬೆಂಗಳೂರಿನ ಕರ್ನಾಟಕ ಮಧ್ಯಸ್ಥಿಕೆ ಕೇಂದ್ರದ ತರಬೇತುದಾರರಾದ ಬೃಂದಾ ನಂದಕುಮಾರ್ ಹಾಗೂ ಜೋ ಜೋಸೆಫ್ ಅವರು ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡು ‘ಮಧ್ಯಸ್ಥಿಕೆ’ ಕುರಿತು ನ್ಯಾಯಾಧೀಶರಿಗೆ ತರಬೇತಿ ನೀಡಿದರು.
ಈ ಸಂದರ್ಭದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಸಿ ಚಂದ್ರಶೇಖರ್, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ವಿಜಯನಗರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಕೆ.ಎಂ. ರಾಜಶೇಖರ್, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಬಳ್ಳಾರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಸಿದ್ದಲಿಂಗ ಪ್ರಭು ಸೇರಿದಂತೆ ಬಳ್ಳಾರಿ, ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಗಳ ವಿವಿಧ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ಮೂರು ಜಿಲ್ಲೆಗಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳ ಸದಸ್ಯ ಕಾರ್ಯದರ್ಶಿಗಳು ಸೇರಿದಂತೆ ನ್ಯಾಯಾಂಗ ಅಧಿಕಾರಿಗಳು ಭಾಗವಹಿಸಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್