LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಸಾಂಗ್ಲಿಯ ಎರಂಡೋಲಿಯಲ್ಲಿ ಸೇನಾ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ!

ಸಾಂಗ್ಲಿ,04: ಇಂದು  ಮುಂಜಾನೆ ಸಾಂಗ್ಲಿಯ ಎರಂಡೋಲಿಯಲ್ಲಿ ಸೇನಾ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದೆ. ಸಿಕ್ಕಿರುವ ಮಾಹಿತಿಯ ಪ್ರಕಾರ, ನಾಸಿಕ್‌ನಿಂದ ಬೆಳಗಾವಿಗೆ ತೆರಳುತ್ತಿದ್ದಾಗ ಹಠಾತ್ ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಸಾಂಗ್ಲಿಯ ಎರಂಡೋಲಿಯ ಜಮೀನಿನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

 ತಾಂತ್ರಿಕ ದೋಷದಿಂದ ತುರ್ತು ಭೂಸ್ಪರ್ಷ ಮಾಡಿದ ಹೆಲಿಕಾಪ್ಟರ್​ ಸುದ್ದಿ ಕೇಳಿ ಸುತ್ತ ಮುತ್ತಲಿನ ಗ್ರಾಮಸ್ಥರು ಸ್ಥಳಕ್ಕೆ ದೌಡಾಯಿಸತೊಡಗಿದರು. ಹೆಲಿಕಾಪ್ಟರ್​ ನೋಡಿದ ಗ್ರಾಮಸ್ಥರು ಅದರ ಬಳಿ ಹೋಗಿ ಸೆಲ್ಫಿ ತೆಗೆದುಕೊಳ್ಳಲು ಮುಗಿ ಬಿದ್ದರು. ಈ ವೇಳೆ ಸೇನೆಯ ಸಿಬ್ಬಂದಿ ಹೆಲಿಕಾಪ್ಟರ್​ ಹತ್ತಿರ ಸುಳಿಯ ಬೇಡಿ ಅಂತಾ ಎಷ್ಟೇ ಮನವಿ ಮಾಡಿದ್ರೂ ಗ್ರಾಮಸ್ಥರು ಖ್ಯಾರೇ ಎನ್ನದೇ ಫೋಟೋಗೆ ಮುಗಿ ಬೀಳುತ್ತಿರುವುದು ವಿಡಿಯೋದಲ್ಲಿ ಕಾಣಬಹುದಾಗಿದೆ.

ಇನ್ನು ಈ ಸುದ್ದಿಯನ್ನು ಮೇಲಧಿಕಾರಿಗಳಿಗೆ ರವಾನಿಸಲಾಗಿದ್ದು, ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶವಾದ ಸ್ಥಳಕ್ಕೆ ಸೇನೆಯ ಇತರ ಸಿಬ್ಬಂದಿ ದೌಡಾಯಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಘಟನೆ ಕುರಿತು ಇನ್ನಷ್ಟು ಮಾಹಿತಿ ತಿಳಿದುಬರಬೇಕಾಗಿದ್ದು, ಇನ್ನು ಹೆಲಿಕಾಪ್ಟರ್​ ಲ್ಯಾಂಡ್​ ಆದ ಸ್ಥಳದಲ್ಲಿ ಜನಸಾಗರವೇ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್