LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಕಾಂಗ್ರೆಸ್​ ಶಾಸಕ ಹರಿಶ್​ಗೌಡ್ ಗೆ ಬ್ಲ್ಯಾಕ್​ ಮೇಲ್​ ಮಾಡಿದ್ದ ಆರೋಪಿಗಳ ಬಂಧನ

ಬೆಂಗಳೂರು, ಜೂನ್​ 26: ಹನಿಟ್ರ್ಯಾಪ್​  ಮೂಲಕ ಕಾಂಗ್ರೆಸ್​ ಶಾಸಕ ಹರಿಶ್​ಗೌಡ್ ​​ ಅವರಿಗೆ ಬ್ಲ್ಯಾಕ್​ಮೇಲ್  ಮಾಡಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮೈಸೂರು ಮೂಲದ ಸಂತೋಷ್ ಮತ್ತು ಪುಟ್ಟರಾಜು ಬಂಧಿತ ಆರೋಪಿಗಳು. ಆರೋಪಿಗಳ ಗ್ಯಾಂಗ್​ ಮೈಸೂರಿನ ಚಾಮರಾಜ ಕ್ಷೇತ್ರದ ಕಾಂಗ್ರೆಸ್​ ಶಾಸಕ ಹರೀಶ್​ಗೌಡ ಅವರ ವಿರುದ್ಧವೇ ಸುಳ್ಳು ಹನಿಟ್ರ್ಯಾಪ್​ ಮಾದರಿ ವಿಡಿಯೋ ಸೃಷ್ಟಿಸಿ ಬೆದರಿಕೆ ಹಾಕಲು ಮುಂದಾಗಿದ್ದರು. ಅಲ್ಲದೆ, ಕೋಟ್ಯಂತರ ರೂ. ಹಣ ನೀಡುವಂತೆ ಬ್ಲ್ಯಾಕ್​ಮೇಲ್ ಮಾಡಿದ್ದರು. ಬಳಿಕ ಕಾಂಗ್ರೆಸ್ ಶಾಸಕ ಹರೀಶ್​ಗೌಡ ಬೆಂಗಳೂರಿನ ಸಿಸಿಬಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಶಾಸಕರು ನೀಡಿದ ದೂರಿನ ಅನ್ವಯ ಕೇಸ್​ ದಾಖಲು ಮಾಡಿಕೊಂಡ ಸಿಸಿಬಿ ಪೊಲೀಸರು ಹನಿಟ್ರ್ಯಾಪ್​ ಮಾಡುತ್ತಿದ್ದ ಜಾಲವನ್ನು ಬೇಧಿಸಿ, ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ವಿಚಾರಣಗೆ ಒಳಪಡಿಸಿದಾಗ ಹಲವು ವಿಚಾರ ಬೆಳಕಿಗೆ ಬಂದಿದೆ. ಹನಿಟ್ರ್ಯಾಪ್​ ಗ್ಯಾಂಗ್​ನಲ್ಲಿ ಓರ್ವ ಯುವತಿ ಸಹ ಇರುವ ಬಗ್ಗೆ ಮಾಹಿತಿ ದೊರೆತಿದೆ.

ಆರೋಪಿಗಳು ರಾಜ್ಯದಲ್ಲಿನ ಪ್ರಭಾವಿಗಳ ಸಂಪರ್ಕ ಮಾಡಿ ಅವರನ್ನು ಫಾಲೀ ಮಾಡುತ್ತಿದ್ದರು. ಬಳಿಕ ವಿಐಪಿಗಳನ್ನು ಭೇಟಿ ಮಾಡಿ ನಂಬರ್​ ಪಡೆದುಕೊಳ್ಳುತ್ತಿದ್ದಾರು. ನಂತರ, ಆರೋಪಿಗಳು ವಿಐಪಿಗಳ ಚಲನವಲನದ ಮೇಲೆ ಕಣ್ಣಿಡುತ್ತಿದ್ದರು. ಬಳಿಕ, ವಿಐಪಿಗಳು ಉಳಿದುಕೊಳ್ಳುತ್ತಿದ್ದ ಐಷಾರಾಮಿ ಹೋಟೆಲ್​ಗಳ ರೂಮು ಬುಕ್ಕಿಂಗ್​, ಚೆಕ್​-ಇನ್​​ ಹಾಗೂ ಚೆಕ್​-ಔಟ್​ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದರು.\

ಬಳಿಕ, ವಿಐಪಿಗಳು ಹೋಟೆಲ್​ನ ರೂಮ್​ ಖಾಲಿ ಮಾಡಿಕೊಂಡು ಹೋದ ನಂತರ ಅವರು ಉಳಿದುಕೊಂಡಿದ್ದ ರೂಮ್​ ಅನ್ನು ಬಾಡಿಗೆ ಪಡೆದು ಅಲ್ಲಿಯೇ ಉಳಿದುಕೊಳ್ಳುತ್ತಿದ್ದರು. ಈ ರೂಮಿನಲ್ಲಿ ಯುವತಿ ಬಳಸಿಕೊಂಡು ಹಿಡಿನ್​ ಕ್ಯಾಮೆರಾ ಇಟ್ಟಿರುವ ರೀತಿಯಲ್ಲಿ ವಿಡಿಯೋ ರೆಕಾರ್ಡ್​ ಮಾಡುತ್ತಿದ್ದರು.

ಬಳಿಕ ವಿಐಪಿ ಈ ಯುವತಿಯನ್ನು ಬಳಕೆ ಮಾಡಿಕೊಂಡಿದ್ದಾರೆ ಎಂಬ ರೀತಿಯಲ್ಲಿ ವಿಡಿಯೋ ಕ್ರಿಯೇಟ್​ ಮಾಡಿ ಅದನ್ನು ವಿಐಪಿಗಳಿಗೆ ಕಳುಹಿಸಿ, ಹಣ್ಣಕ್ಕಾಗಿ ಬೇಡಿಕೆ ಇಡುತ್ತಿದ್ದರು. ಇಲ್ಲದಿದ್ದರೆ ವಿಡಿಯೋ ವೈರಲ್​ ಮಾಡುವುದಾಗಿ ಹಾಗೂ ಪೊಲೀಸರಿಗೆ ಕೊಡುವುದಾಗಿ ಬೆದರಿಕೆ ಹಾಕಿದ್ದರು. ಇದೇ ರೀತಿ ಕಾಂಗ್ರೆಸ್​ ಶಾಸಕ ಹರೀಶ್​​ಗೌಡ ಅವರಿಗೂ ಮಾಡಿದ್ದು, ಕೂಡಲೆ ಶಾಸಕರು ದೂರು ನೀಡಿದ್ದಾರೆ. ಇದೀಗ ಆರೋಪಿಗಳು ಲಾಕ್​ ಆಗಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್