LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ರೇವ್ ಪಾರ್ಟಿಯಲ್ಲಿ ಪೋಷಕ ನಟಿ ಭಾಗಿ: ಐವರ ಬಂಧನ

ಬೆಂಗಳೂರು,21 : ನಗರದ ಹೊರವಲಯದ ಫಾರ್ಮ್ ಹೌಸ್​​ನಲ್ಲಿ ರೇವ್ ಪಾರ್ಟಿ ನಡೆಸಿದ ಪ್ರಕರಣದಲ್ಲಿ ಐವರನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ತಿಳಿಸಿದ್ದಾರೆ. ನಗರದಲ್ಲಿ ಮಂಗಳವಾರ ಈ ಬಗ್ಗೆ ಮಾಧ್ಯಮಗೋಷ್ಟಿ ನಡೆಸಿ ಮಾಹಿತಿ ನೀಡಿದ ಅವರು, ರೇವ್ ಪಾರ್ಟಿಯಲ್ಲಿ ತೆಲುಗಿನ ಪೋಷಕ ನಟಿ ಸಹ ಭಾಗಿಯಾಗಿದ್ದರು. ಆದರೆ, ಯಾವುದೇ ಜನಪ್ರತಿಧಿಗಳು ಭಾಗಿಯಾಗಿರಲಿಲ್ಲ ಎಂದು ಇದೇ ಸಂದರ್ಭದಲ್ಲಿ ಆಯುಕ್ತರು ಸ್ಪಷ್ಟಪಡಿಸಿದ್ದಾರೆ.


ಪಾರ್ಟಿ ನಡೆಯುತ್ತಿರುವುದನ್ನು ತಿಳಿದುಕೊಂಡು ಸಿಸಿಬಿ ಪೊಲೀಸರು, ಸ್ಥಳೀಯ ಪೊಲೀಸರೊಂದಿಗೆ ಸೇರಿ ದಾಳಿ ನಡೆಸಿದ್ದಾರೆ. ಮಾದಕ ವಸ್ತು ಪತ್ತೆಗೆ ತರಬೇತಿ ಪಡೆದಿರುವ ಶ್ವಾನದಳದ ನೆರವು ಪಡೆಯಲಾಗಿದೆ. ನೂರಕ್ಕೂ ಅಧಿಕ ಜನ ಪಾರ್ಟಿಯಲ್ಲಿ ಭಾಗಿಯಾಗಿದ್ದರು. ದಾಳಿ ವೇಳೆ ಮಾದಕ ಪದಾರ್ಥಗಳು ಪತ್ತೆಯಾಗಿವೆ. ಕೆಲವರು ಬಳಸುತ್ತಿದ್ದ ಮಾದಕ ಪದಾರ್ಥಗಳನ್ನು ಸ್ವಿಮ್ಮಿಂಗ್ ಪೂಲ್ ಮತ್ತಿತರ ಕಡೆ ಎಸೆದಿದ್ದಾರೆ. ಘಟನೆ ಸಂಬಂಧ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಐವರನ್ನು ಬಂಧಿಸಲಾಗಿದೆ. ಘಟನಾ ಸ್ಥಳದ ಬೆಂಗಳೂರು ಗ್ರಾಮಾಂತರದ ಹೆಬ್ಬಗೋಡಿ ಠಾಣಾ ವ್ಯಾಪ್ತಿಗೆ ಬರುವುದರಿಂದ ಪ್ರಕರಣವನ್ನು ಅಲ್ಲಿಗೆ ವರ್ಗಾವಣೆ ಮಾಡಲಾಗುತ್ತದೆ.


ದಾಳಿ ಸಂದರ್ಭದಲ್ಲಿ ಪೋಷಕ ನಟಿಯೊಬ್ಬರು ವಿಡಿಯೋ ಮಾಡಿರುವುದರ ಕುರಿತು 'ಅವರು ಯಾವ ಸಂದರ್ಭದಲ್ಲಿ ವಿಡಿಯೋ ಮಾಡಿದ್ದಾರೆ ಎಂಬುದು ಗೊತ್ತಿಲ್ಲ, ಆ ಬಗ್ಗೆ ಸಹ ತನಿಖೆ ಮಾಡಲಾಗುತ್ತಿದೆ. ಅಲ್ಲದೇ ಪಾರ್ಟಿಯಲ್ಲಿ ಭಾಗಿಯಾಗಿದ್ದ ಎಲ್ಲರನ್ನೂ ವೈದ್ಯಕೀಯ ತಪಾಸಣೆಗೊಳಪಡಿಸಲಾಗಿದ್ದು, ಅದರ ವರದಿ ಬಂದ ತಕ್ಷಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರು ಸ್ಪಷ್ಟಪಡಿಸಿದ್ದಾರೆ‌.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್