LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಮಾನ್ಸೂನ್ ವೇಳೆಗೆ ಭಗೀರಥ ಆಗಮನ

     ಧರೆಗೆ ತನ್ನ ತಪ್ಪಿಸಿನಿಂದ ಗಂಗೆಯನ್ನು ತಂದವರು ಭಗೀರಥ.ಆದ್ದರಿಂದ  ಗಂಗೆಗೆ ಭಾಗೀರಥಿ ಎಂಬ ಹೆಸರು ಉಂಟು. ತುಂಬಾ ಅಸಾಧ್ಯವಾದ್ದುದ್ದನ್ನು ಕಷ್ಟಪಟ್ಟು ಸಾಧ್ಯವಾಗಿಸಿದರೆ ಅದನ್ನು 'ಭಗೀರಥ' ಪ್ರಯತ್ನ ಎನ್ನುತ್ತಾರೆ. ಇಂತಹ ಒಂದು  ವಿಭಿನ್ನ ಕಥೆಯನ್ನಿಟ್ಟಿಕೊಂಡು 'ಭಗೀರಥ' ಸಿನಿಮಾ ಬರುತ್ತಿದೆ. ಮುಂದಿನ ತಿಂಗಳು ಜೂನ್(ಮಾನ್ಸೂನ್ ವೇಳೆ)ನಲ್ಲಿ ಚಿತ್ರ ಬಿಡುಗಡೆಯಾಗಲಿದೆ.


     ಸಾಯಿ ರಮೇಶ್ ಪ್ರೊಡಕ್ಷನ್ ಲಾಂಛನದಲ್ಲಿ ಕೆ ರಮೇಶ್ ಹಾಗೂ ಬಿ ಭೈರಪ್ಪ ಮೈಸೂರು ನಿರ್ಮಿಸಿರುವ ಹಾಗೂ ರಾಮ್ ಜನಾರ್ದನ್ ನಿರ್ದೇಶನದ ಈ ಚಿತ್ರದ ಟೀಸರ್ ಇತ್ತೀಚಿಗೆ ಬಿಡುಗಡೆಯಾಯಿತು‌. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾತನಾಡಿದರು.


     "ಕಳೆದ ಸೆಪ್ಟೆಂಬರ್ ನಲ್ಲಿ ನಮ್ಮ ಚಿತ್ರದ ಮುಹೂರ್ತ ಸಮಾರಂಭ ನೆರವೇರಿತ್ತು. ಈಗ ಚಿತ್ರೀಕರಣ ಮುಕ್ತಾಯವಾಗಿ, ತೆರೆಗೆ ಬರಲು ಅಣಿಯಾಗಿದೆ. ಮಂದಿನ ತಿಂಗಳಲ್ಲಿ ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ‌. ಚಿತ್ರತಂಡದ ಸಹಕಾರದಿಂದ ಉತ್ತಮವಾಗಿ ಮೂಡಿಬಂದಿದೆ. 'ಬಾಯ್ ಫ್ರೆಂಡ್' ಚಿತ್ರದಿಂದ ನಾನು ನಿರ್ದೇಶಕನಾದೆ. 'ಭಗೀರಥ' ನನ್ನ ನಿರ್ದೇಶನದ ಐದನೇ ಚಿತ್ರ. ಇದೊಂದು ಪ್ರಸ್ತುತ ರಾಜಕಾರಣದ ಕಥಾಹಂದರ ಹೊಂದಿರುವ ಹಾಗೂ ಪತ್ರಕರ್ತರೊಬ್ಬರ ಸುತ್ತ ನಡೆಯುವ ಕಥೆ" ಎಂದರು ನಿರ್ದೇಶಕ ರಾಮ್ ಜನಾರ್ದನ್‌.


     "ಜರ್ನಿಲಿಸಂ ಮಾಡಿ ಪತ್ರಕರ್ತನಾಗಿದ್ದ ನಾನು, ಜಮಾನ ಚಿತ್ರದ ಮೂಲಕ ನಟನಾದೆ" ಎಂದು ಮಾತನಾಡಿದ ನಾಯಕ ಜಯಪ್ರಕಾಶ್ "ಭಗೀರಥ' ನನ್ನ ಮೂರನೇಯ ಚಿತ್ರ. ಸೂರ್ಯಪ್ರಕಾಶ್ ನನ್ನ ಪಾತ್ರದ ಹೆಸರು. ನಿರ್ದೇಶಕರು ಒಳ್ಳೆಯ ಕಥೆ ಮಾಡಿಕೊಂಡಿದ್ದಾರೆ. 'ಭಗೀರಥ' ಹೆಸರಿಗೆ ತಕ್ಕಂತೆ ನೀರಿಗೆ ಸಂಬಂಧಿಸಿದ ಕಥೆಯೂ ಈ ಚಿತ್ರದಲ್ಲಿದೆ" ಎಂದರು.


     "ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು. ಹಾಗಾಗಿ ನಿರ್ಮಾಣಕ್ಕೆ ಮುಂದಾದೆವು. ಸದ್ಯದಲ್ಲೇ ಚಿತ್ರ ಬಿಡುಗಡೆ ಮಾಡುತ್ತೇವೆ. ಪ್ರೋತ್ಸಾಹ ನೀಡಿ" ಎಂಬುದು ನಿರ್ಮಾಪಕರಾದ ಕೆ ರಮೇಶ್ ಹಾಗೂ ಬಿ ಭೈರಪ್ಪ.


    "ನಾನು ನಾಯಕನ ಸೋದರತ್ತೆಯ ಮಗಳ ಪಾತ್ರದಲ್ಲಿ ನಟಿಸಿದ್ದೇನೆ" ಎಂದು ನಟಿ ಶ್ರೀಯಾ ಪಾವನಿ ತಿಳಿಸಿದರು. ಹಾಡುಗಳ ಬಗ್ಗೆ ಸಂಗೀತ ನಿರ್ದೇಶಕ ಪ್ರದೀಪ್ ವರ್ಮ ಹಾಗೂ ಛಾಯಾಗ್ರಹಣದ ಕುರಿತು ಸೂರಿ ಚಿತ್ತೂರು ಮಾಹಿತಿ ನೀಡಿದರು.


     ಜಯಪ್ರಕಾಶ್, ಚಂದನ ರಾಘವೇಂದ್ರ, ಸುಧಾ ಬೆಳವಾಡಿ, ಶಿವರಾಜ್ ಕೆ.ಆರ್ ಪೇಟೆ, ರವಿಕಾಳೆ, ಶ್ರೀನಿವಾಸಪ್ರಭು, ಬಾಲ ರಾಜವಾಡಿ, ನಯನ, ಸುರಭಿ ರವಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್