LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಆಡಳಿತ ನಿರ್ವಹಣೆಯಲ್ಲಿ ಕೃತಕ ಬುದ್ಧಿಮತ್ತೆ ಅನಿವಾರ್ಯ: ಡಾ. ಎಸ್.ಎಂ. ಶಶಿಧರ್ ಅಭಿಮತ

ಬಳ್ಳಾರಿ: 09:."ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಮ್ಯಾನೇಜ್‌ಮೆಂಟ್ ಪದವೀಧರರು ಕೃತಕ ಬುದ್ಧಿಮತ್ತೆಯನ್ನು  ಕೇವಲ ಒಂದು ತಾಂತ್ರಿಕ ವಿಷಯವಾಗಿ ನೋಡದೆ, ಉದ್ಯಮದ ಉಳಿವು ಮತ್ತು ಕಾರ್ಯತಂತ್ರದ ಪ್ರಮುಖ ಅಂಗವಾಗಿ ಅಳವಡಿಸಿಕೊಳ್ಳಬೇಕು" ಎಂದು ತಾಂತ್ರಿಕ ತಜ್ಞರು ಹಾಗೂ ಲೇಖಕರು ಆದ ಡಾ. ಎಸ್.ಎಂ. ಶಶಿಧರ್ ಅವರು ತಿಳಿಸಿದರು.
ನಗರದ ರಾವ್ ಬಹದ್ದೂರ್ ವೈ. ಮಹಾಬಲೇಶ್ವರಪ್ಪ ಎಂಜಿನಿಯರಿಂಗ್ ಕಾಲೇಜಿನ (RYMEC) ಎಂ.ಬಿ.ಎ. ವಿಭಾಗದಲ್ಲಿ ಹಮ್ಮಿಕೊಳ್ಳಲಾಗಿದ್ದ "ಆಡಳಿತ ನಿರ್ವಹಣೆಯಲ್ಲಿ ಕೃತಕ ಬುದ್ಧಿಮತ್ತೆ: ಭವಿಷ್ಯವನ್ನು ರೂಪಿಸುವ ತಂತ್ರಜ್ಞಾನಗಳು" ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.
ನೋಕಿಯಾ ಮತ್ತು ಕೊಡಾಕ್‌ನಂತಹ ಜಾಗತಿಕ ಕಂಪನಿಗಳ ಉದಾಹರಣೆಗಳನ್ನು ನೀಡಿದ ಅವರು, "ಬದಲಾಗುವ ತಂತ್ರಜ್ಞಾನಕ್ಕೆ ತಕ್ಕಂತೆ ತಮ್ಮ ಆಲೋಚನಾ ಶೈಲಿಯನ್ನು ಬದಲಾಯಿಸಿಕೊಳ್ಳದ ಉದ್ಯಮಗಳು ಮಾರುಕಟ್ಟೆಯಿಂದ ನಿರ್ನಾಮವಾಗುತ್ತವೆ. ಎಐ ತಂತ್ರಜ್ಞಾನವು ನಿಮ್ಮ ಆಲೋಚನಾ ಸಾಮರ್ಥ್ಯವನ್ನು ವಿಸ್ತರಿಸಬೇಕೇ ಹೊರತು, ನಿಮ್ಮ ಸ್ವತಂತ್ರ ಯೋಚನಾ ಶಕ್ತಿಯನ್ನು ಕಸಿದುಕೊಳ್ಳಬಾರದು." ಎಂದು ಎಚ್ಚರಿಸಿದರು.
ಕಾರ್ಯಕ್ರಮದ ಆರಂಭದಲ್ಲಿ ಎಂ.ಬಿ.ಎ ವಿಭಾಗದ ಮುಖ್ಯಸ್ಥರಾದ ಡಾ. ತಿಮ್ಮನಗೌಡ ಅವರು ಕಾಲೇಜಿನ ಪರವಾಗಿ ಎಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸಿ, ಕಾರ್ಯಕ್ರಮದ ಮುಖ್ಯ ಅತಿಥಿಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿದರು.
ಕಾರ್ಯಕ್ರಮದಲ್ಲಿ ಬೋಧಕ ಸಿಬ್ಬಂದಿ ಉಪಸ್ಥಿತರಿದ್ದರು. ವಿಭಾಗದ ೧೦೦ಕ್ಕೂ ಹೆಚ್ಚು ಎಂ.ಬಿ.ಎ ವಿದ್ಯಾರ್ಥಿಗಳು ಈ ವಿಶೇಷ ಉಪನ್ಯಾಸದಲ್ಲಿ ಸಕ್ರಿಯವಾಗಿ ಭಾಗವಹಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್