LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಸಾರ್ವಜನಿಕ ಜಾಗೃತಿಯಲ್ಲಿ ಆಶಾ, ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ದೊಡ್ಡದು: ಶಶಿಕಾಂತ್ ಶಿವಪೂರೆ



ಬಳ್ಳಾರಿ,ಜು.20. ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಅತ್ಯಂತ ಪ್ರಮುಖವಾಗಿದ್ದು, ಅರ್ಹ ನಾಗರಿಕರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಿಕೊಳ್ಳಲು ಮತ್ತು ಅಗತ್ಯ ತಿದ್ದುಪಡಿಗಳನ್ನು ತಂದುಕೊಳ್ಳಲು ಇದು ಸಕಾಲವಾಗಿದೆ ಎಂದು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶಶಿಕಾಂತ್ ಶಿವಪೂರೆ ಅವರು ಹೇಳಿದರು.
ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ಮತ್ತು ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರ ಸಹಯೋಗದೊಂದಿಗೆ ಬಿಎಂಸಿಆರ್ಸಿ ಸಭಾಂಗಣದಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗಾಗಿ ಅಪೌಷ್ಟಿಕತೆ ನಿರ್ಮೂಲನಾ ಕಾರ್ಯಕ್ರಮದೊಂದಿಗೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಹಾಗೂ ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣಾ ಭಾಗವಹಿಸುವಿಕೆ ಕುರಿತು ಭಾನುವಾರ ಹಮ್ಮಿಕೊಂಡಿದ್ದ ವಿಶೇಷ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ತಳಮಟ್ಟದಲ್ಲಿ ಸಾರ್ವಜನಿಕರೊಂದಿಗೆ ನೇರ ಸಂಪರ್ಕ ಹೊಂದಿರುವ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಈ ಕುರಿತು ಅರಿವು ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸಬೇಕು ಎಂದು ಅವರು ಕರೆ ನೀಡಿದರು.
ಪ್ರತಿಯೊಬ್ಬ ಅರ್ಹ ಮತದಾರನೂ ಮತದಾನದ ಹಕ್ಕು ಪಡೆಯುವಂತಾಗಲು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ವ್ಯಾಪಕ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಪಂ ಸಹಾಯಕ ನಿರ್ದೇಶಕ ಎಂ. ಬಸವರಾಜ ಹಿರೇಮಠ, ಬಿಎಂಸಿಆರ್ಸಿ ಯ ಮಕ್ಕಳ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕ ಡಾ.ದುರ್ಗಪ್ಪ, ಜಿಲ್ಲಾ ವಿಬಿಡಿಸಿ ಅಧಿಕಾರಿ ಡಾ. ಅಬ್ದುಲ್, ಬಿಎಂಸಿಆರ್ಸಿ ಯ ಪ್ರಾಂಶುಪಾಲ ಡಾ. ಮಲ್ಲಿಕಾರ್ಜುನ, ಐಎಪಿ ಡಾ. ರಾಜೇಶ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನೂರಾರು ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಎಸ್ಐಆರ್ ಮತ್ತು ಸ್ವೀಪ್ ಅಭಿಯಾನದ ಉದ್ದೇಶಗಳನ್ನು ಮನವರಿಕೆ ಮಾಡಿಕೊಡಲಾಯಿತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್