LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ವಿಶೇಷ ಮತದಾರರ ಪರಿಷ್ಕರಣೆಗೆ ವಿದ್ಯಾರ್ಥಿಗಳಿಂದ ಜಾಗೃತಿ ಅಭಿಯಾನ

ಬೆಳಗಾವಿ: ನಗರದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗ ಹಾಗೂ ಮತದಾರರ ಸಾಕ್ಷರತಾ ಕ್ಲಬ್  ನೇತೃತ್ವದಲ್ಲಿ ಮಂಗಳವಾರದಂದು "ವಿಶೇಷ ಮತದಾರರ ಪರಿಷ್ಕರಣೆ–2026"ರ ಕುರಿತು ನಗರದಲ್ಲಿ ಜಾಥಾ ಆಯೋಜಿಸಲಾಗಿತ್ತು.
ಜಾಥಾ ಉದ್ಘಾಟಿಸಿ ಮಾತನಾಡಿದ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ. ಎಸ್. ಸಿ. ಪಾಟೀಲ್ ಅವರು ಓದು ವ್ಯಕ್ತಿಯನ್ನು ರೂಪಿಸಿದರೆ, ಮತದಾನ ಸುದೃಢ ದೇಶವನ್ನು ರೂಪಿಸುತ್ತದೆ. ಮತದಾನ ಪ್ರತಿಯೊಬ್ಬ ನಾಗರಿಕರ ಪರಮ ಕರ್ತವ್ಯ. ಹದಿನೆಂಟು ವರ್ಷ ಪೂರ್ಣಗೊಂಡ ಪ್ರತಿಯೊಬ್ಬ ಅರ್ಹ ನಾಗರಿಕರೂ ಕಡ್ಡಾಯವಾಗಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು. ಪ್ರಜಾಪ್ರಭುತ್ವವನ್ನು ಬಲಪಡಿಸಲು ಪ್ರತಿಯೊಬ್ಬರೂ ಮತದಾರರಾಗುವುದು ಅತ್ಯಂತ ಮುಖ್ಯ ಎಂದು ಕರೆ ನೀಡಿದರು.
 
ಪ್ರಸ್ತುತ ಕರ್ನಾಟಕದಲ್ಲಿ ವಿಶೇಷ ಮತದಾರರ ಪರಿಷ್ಕರಣೆ ಕಾರ್ಯ ನಡೆಯುತ್ತಿದೆ. ಈ ಸಂದರ್ಭದಲ್ಲಿ ಅದರ ಕುರಿತು ನಮ್ಮ ವಿದ್ಯಾರ್ಥಿಗಳು ಜಾಥಾ ನಡೆಸಿ, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವುದು ಅತ್ಯುತ್ತಮ ಕಾರ್ಯ. ಮತ ಪರಿಷ್ಕರಣೆ ಸಂದರ್ಭದಲ್ಲಿ ಮತದಾರರು  ಅದಕ್ಕೆ ಬೇಕಾದ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ತಮ್ಮ ಮತದಾರರ ಚೀಟಿಯನ್ನು ಪರಿಷ್ಕರಿಸಿಕೊಳ್ಳುವಂತೆ ಹೇಳಿದರು.
ಜಾಥಾದಲ್ಲಿ ವಿದ್ಯಾರ್ಥಿಗಳು ಮತದಾನದ ಮಹತ್ವ, ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ಹೆಸರು ತಿದ್ದುಪಡಿ, ವಿಳಾಸ ಬದಲಾವಣೆ ಸೇರಿದಂತೆ ವಿಶೇಷ ಮತದಾರರ ಪರಿಷ್ಕರಣೆ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿ, ಹದಿನೆಂಟು ವರ್ಷ ಪೂರ್ಣಗೊಂಡ ಪ್ರತಿಯೊಬ್ಬ ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳುವಂತೆ ಮನವಿ ಮಾಡಿದರು. "ಮತಚಲಾವಣೆ ನಮ್ಮ ಹಕ್ಕು–ನಮ್ಮ ಜವಾಬ್ದಾರಿ", "ಅರ್ಹರೆಲ್ಲರೂ ಮತದಾರರಾಗಿ ನೋಂದಾಯಿಸಿಕೊಳ್ಳಿ" ಎಂಬ ಘೋಷಣೆಗಳ ಮೂಲಕ ಜಾಗೃತಿ ಮೂಡಿಸಿದರು.
ವಿದ್ಯಾರ್ಥಿಗಳು ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದಿಂದ ಜಾಥಾ ಆರಂಭಿಸಿ, ಮಾಳಮಾರುತಿ ಬಡಾವಣೆ,  ಅಶೋಕ ನಗರ, ರಾಮತೀರ್ಥ ನಗರ, ಆಂಜನೇಯ ನಗರದ ಮೂಲಕ ಸಾಗಿ ಜಾಗೃತಿ ಮೂಡಿಸಿ, ಮರಳಿ ಕಾಲೇಜಿಗೆ ಬಂದು ಸಮಾಪ್ತಿಗೊಳಿಸಿದರು.
ವಿದ್ಯಾರ್ಥಿಗಳ ಜಾಥಾದಲ್ಲಿ ವಿಶ್ವವಿದ್ಯಾಲಯದ ಮತದಾರರ ಸಾಕ್ಷರತಾ ಕ್ಲಬ್ ಸಂಯೋಜಕರಾದ ಡಾ. ಮಲ್ಲೇಶ್ ದೊಡ್ಡಲಕ್ಕಣ್ಣವರ, ಕಾಲೇಜಿನ ಮತದಾರರ ಸಾಕ್ಷರತಾ ಕ್ಲಬ್ ಸಂಯೋಜಕರಾದ ಪ್ರಕಾಶ ಎಸ್. ಕಮತಿ, ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ