LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಜಾತ್ರೆಗಳಿಂದ ಬಾಂದವ್ಯ, ಸಂಸ್ಕಾರ ಹೆಚ್ಚಳ : ಬಾಬಾಸಾಹೇಬ ಪಾಟೀಲ 

 
ನೇಸರಗಿ. ದೇಶದಲ್ಲಿ ನಡೆಯುವ ಜಾತ್ರೆ, ಆದ್ಯಾತ್ಮಿಕ ಪ್ರವಚನ, ಅನ್ನ ದಾಸೋಹ ಪರಸ್ಪರ ಮನುಷ್ಯ ಮನುಷ್ಯರು ಬೆರೆತು ಹಬ್ಬ ಜಾತ್ರೆಗಳನ್ನು ಆಚರಿಸಿ, ಸ್ನೇಹಿತರು, ಸಂಬಂದಿಕರು, ಹೊರ ದೂರದ ಊರುಗಳಲ್ಲಿ ವಾಸಿಸುವ ಗ್ರಾಮದ ಜನರು ಇಂತಹ ಜಾತ್ರೆಗಳಲ್ಲಿ ಪಾಲ್ಗೊಂಡು ಬಾಂದವ್ಯ, ಸಂಸ್ಕಾರ ಹೆಚ್ಚಿಸುವ ಸತ್ಕಾರ್ಯ ಆಗುತ್ತದೆ ಎಂದು ಚನ್ನಮ್ಮನ ಕಿತ್ತೂರು ಶಾಸಕರಾದ ಬಾಬಾಸಾಹೇಬ ಪಾಟೀಲ ಹೇಳಿದರು.

     ಅವರು ಶುಕ್ರವಾರದಂದು ಗ್ರಾಮದ ಶ್ರೀ ಚನ್ನವೃಷಬೇಂದ್ರ ದೇವರಕೊಂಡ ಅಜ್ಜನವರ ಜಾತ್ರಾ ಮಹೋತ್ಸವದ ನಿಮಿತ್ಯ ಇಂದು ನಡೆದ ರಥೋತ್ಸವದಲ್ಲಿ ಪಾಲ್ಗೊಂಡು, ದೇವರ ದರ್ಶನ ಪಡೆದು,  ದೇವಸ್ಥಾನದ ಆವರಣದಲ್ಲಿ ನೂತನ ಕೋಣೆ ಉದ್ಘಾಟನೆ ನೆರವೇರಿಸಿ ಮಾತನಾಡಿ ಶ್ರೀ ಚನ್ನವೃಷಬೇಂದ್ರ ಅಜ್ಜನವರ ದೇವಸ್ಥಾನಕ್ಕೆ ಈಗಾಗಲೇ ಅನುಧಾನ ನೀಡಿದ್ದು ಮುಂದಿನ ದಿನಗಳಲ್ಲಿ ಮಠದ ಅಭಿವೃದ್ಧಿಗೆ ಸದಾ ಸಹಕರಿಸುತ್ತೇನೆ ಎಂದರು.

    ಸಾನಿಧ್ಯ ವಹಿಸಿ ನೇಸರಗಿ ಮಲ್ಲಾಪೂರ ಗಾಳೇಶ್ವರ ಮಠದ ಚಿದಾನಂದ ಮಹಾಸ್ವಾಮಿಗಳು ಮಾತನಾಡಿ ಶ್ರೀ ಚನ್ನವೃಷಬೇಂದ್ರ ಅಜ್ಜನವರ ಮಠವು ದಿನದಿಂದ ದಿನಕ್ಕೆ ಅಭಿವೃದ್ಧಿ ಹೊಂದುತ್ತಿದ್ದು ಇದಕ್ಕೆ ಸದ್ಭಕ್ತರ ಭಕ್ತಿಯ ಸೇವೆ, ರಾಜಕೀಯ ಮುಖಂಡರ ಸಹಕಾರ ಎಂದರು.

    ಈ ಸಂದರ್ಭದಲ್ಲಿ ಗ್ರಾಮದ ಮತ್ತು ಸುತ್ತಮುತ್ತಲಿನ ಗ್ರಾಮಗಳ ಮುಖಂಡರು, ಎಲ್ಲ ಸಮಾಜದ ಮುಖಂಡರು, ನೇಸರಗಿ ಗ್ರಾಮಸ್ಥರು,ಸಕಲ  ಸದ್ಭಕ್ತರು  ಭಾಗವಹಿಸಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್