LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಬಯಲಾಟವು ಗ್ರಾಮೀಣ ಸಂಸ್ಕೃತಿಯ ಸೊಬಗು : ಎಂ.ಮೃತ್ಯುಂಜಯ ಸ್ವಾಮಿ

ಸಿರುಗುಪ್ಪ, ಮಾ.14::..ತಾಲೂಕಿನ ಬಂಡ್ರಾಳ್ ಗ್ರಾಮದಲ್ಲಿ ಶ್ರೀ ಪೊಂಪಯ್ಯ ತಾತನವರ 34ನೇ ಪುಣ್ಯಸ್ಮರಣೆಯ ಅಂಗವಾಗಿ ಶ್ರೀ ಪೊಂಪಯ್ಯತಾತ ಸೇವಾ ಟ್ರಸ್ಟ್ ವತಿಯಿಂದ “ಪಾಂಡು ವಿಜಯ” ಅರ್ಥಾತ್ “ಕೀಚಕನ ವಧೆ” ಬಯಲಾಟ ನಾಟಕವನ್ನು ಗುರುವಾರ ಸಂಜೆ ಆಯೋಜಿಸಲಾಯಿತು.

ಸಂಜೆ 8.30 ಗಂಟೆಗೆ ಆರಂಭವಾದ ಬಯಲಾಟ ಕಾರ್ಯಕ್ರಮವು ಗ್ರಾಮಸ್ಥರ ಹಾಗೂ ಸದ್ಭಕ್ತರ ಸಹಕಾರದಿಂದ ಭಕ್ತಿಪೂರ್ವಕವಾಗಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಡ್ರಾಳ್ ಗ್ರಾಮದ ಎಂ. ಮೃತ್ಯುಂಜಯ ಸ್ವಾಮಿ (ವಕೀಲರು) ವಹಿಸಿದ್ದರು.

ಅವರು ಮಾತನಾಡಿ, ಬಯಲಾಟವು ಬಳ್ಳಾರಿ ಜಿಲ್ಲೆಯ ಜನರಿಗೆ ಬಹಳ ಮೆಚ್ಚಿನ ಜನಪದ ಕಲೆಯಾಗಿದ್ದು ಸಮಾಜವನ್ನು ತಿದ್ದುವ ಶಕ್ತಿ ಹೊಂದಿದೆ ಎಂದು ಹೇಳಿದರು. ಬಯಲಾಟಗಳ ಮೂಲಕ ಗ್ರಾಮೀಣ ಭಾಗದ ಅನಕ್ಷರಸ್ಥ ಪ್ರತಿಭಾವಂತ ಕಲಾವಿದರು ಹೊರಹೊಮ್ಮಿದ್ದು, ಈ ಕಲೆಯನ್ನು ಉಳಿಸಿ ಬೆಳೆಸಲು ಸರ್ಕಾರದಿಂದ ಹೆಚ್ಚಿನ ಪ್ರೋತ್ಸಾಹ ದೊರೆಯಬೇಕೆಂದು ಅಭಿಪ್ರಾಯಪಟ್ಟರು. ಶ್ರೀ ಪೊಂಪಯ್ಯ ತಾತನವರ ಪುಣ್ಯಸ್ಮರಣೆಯ ಅಂಗವಾಗಿ ಬಯಲಾಟ ಆಯೋಜಿಸಿರುವುದು ಸಂತಸದ ಸಂಗತಿಯಾಗಿದೆ ಎಂದು ಹೇಳಿದರು.

ಕಾರ್ಯಕ್ರಮವನ್ನು ಸಮಾಜ ಸೇವಕರೂ ಉದ್ಯಮಿಗಳೂ ಆದ ಆರ್. ಸದಾಶಿವ ಅವರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಬಯಲಾಟಗಳಲ್ಲಿ ಮಹಾಭಾರತ ಹಾಗೂ ರಾಮಾಯಣದಂತಹ ಐತಿಹಾಸಿಕ ಕಥೆಗಳು ಜೀವಂತವಾಗಿ ಮೂಡಿ ಬರುತ್ತವೆ. ಇವು ಜನರ ಮನಸ್ಸಿನ ಮೇಲೆ ದೊಡ್ಡ ಪ್ರಭಾವ ಬೀರುತ್ತವೆ. ಆದ್ದರಿಂದ ಎಲ್ಲರೂ ಬಯಲಾಟಗಳಿಗೆ ಪ್ರೋತ್ಸಾಹ ನೀಡುವ ಮೂಲಕ ಈ ಕಲೆಯನ್ನು ಉಳಿಸಿ ಬೆಳೆಸಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಿವೃತ್ತ ಶಿಕ್ಷಕರಾದ ನರಸಿಂಹ ಜೋಶಿ ಮತ್ತು ವೆಂಕಟೇಶ್ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಊರಿನ ಪ್ರಮುಖರಾದ ಮರೆಗೌಡ (ತಾ.ಪಂ. ಮಾಜಿ ಸದಸ್ಯರು), ಹನುಮಯ್ಯ, ಸಣ್ಣಪ್ಪ, ದಬಾಡಿ ಮಲ್ಲಯ್ಯ, ವೆಂಕಟೇಶ್ ರೆಡ್ಡಿ, ಬಸವರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ರಾತ್ರಿ 8.30 ಗಂಟೆಯಿಂದ ಬೆಳಗಿನ ಜಾವ 6 ಗಂಟೆಯವರೆಗೆ ನಡೆದ “ಪಾಂಡು ವಿಜಯ (ಕೀಚಕನ ವಧೆ)” ಬಯಲಾಟವನ್ನು ಬಂಡ್ರಾಳ್ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಂದ ಆಗಮಿಸಿದ ಸಾವಿರಕ್ಕೂ ಹೆಚ್ಚು ಪ್ರೇಕ್ಷಕರು ಕಣ್ತುಂಬಿಕೊಂಡರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್