LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಹೆಚ್‌ಐವಿ ಪೀಡಿತ ವ್ಯಕ್ತಿಗಳೊಂದಿಗೆ ಮಾನವೀಯತೆಯಿಂದ ವರ್ತಿಸಿ : ಗಿರೀಶ್




ಬಳ್ಳಾರಿ,ಫೆ.18- ಹೆಚ್‌ಐವಿ ಪೀಡಿತ ವ್ಯಕ್ತಿಗಳೊಂದಿಗೆ ಮಾನವೀಯತೆಯಿಂದ ವರ್ತಿಸಿ ಅವರ ಮನೋಬಲವನ್ನು ಹೆಚ್ಚಿಸಬೇಕು ಎಂದು ಹೆಚ್‌ಐವಿ ಜಿಲ್ಲಾ ಮೇಲ್ವಿಚಾರಕ ಗಿರೀಶ್ ಅವರು ಹೇಳಿದರು.
ನಗರದ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರ್‌ವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ನಿರ್ವಾಹಕ ಘಟಕ ವತಿಯಿಂದ ಏಡ್ಸ್ ತಡೆ, ಹಾರೈಕೆ ಬೆಂಬಲ ಹಾಗೂ ಚಿಕಿತ್ಸೆ ಮತ್ತು ಸೇವೆಗಳ ಕುರಿತು ಮಂಗಳವಾರ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸಕರಾಗಿ ಭಾಗವಹಿಸಿ ಅವರು ಮಾತನಾಡಿದರು.
ಏಡ್ಸ್ ಹರಡಲು ಪ್ರಮುಖ ಕಾರಣಗಳು ಮತ್ತು ಏಡ್ಸ್ ಹರಡದಂತೆ ವಹಿಸಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಇಂದಿನ ಯುವ ಪೀಳಿಗೆಯಾದ ವಿದ್ಯಾರ್ಥಿಗಳು ವಿಶೇಷ ಜಾಗೃತಿ ಹೊಂದಬೇಕು ಎಂದರು.


18 ವರ್ಷ ತುಂಬಿದವರು ರಕ್ತದಾನ ಮಾಡಿದರೆ ಅವರ ಆರೋಗ್ಯ ಅವರ ಆಯಸ್ಸು, ನೆನಪಿನ ಶಕ್ತಿ ವೃದ್ಧಿಸುತ್ತದೆ. ಹಾಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಗಳು ತಮ್ಮ ಆರೋಗ್ಯಕ್ಕೆ ಅನುಗುಣವಾಗಿ ರಕ್ತದಾನ ಮಾಡಬೇಕೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಪ್ರೊ.ಇಸ್ಮಾಯಿಲ್ ಮಕಂದಾರ್, ಉಪನ್ಯಾಸಕರಾದ ಡಾ.ದಸ್ತಗಿರಿಸಾಬ್, ಬಸಪ್ಪ.ಕೆ., ಮಾರೆಪ್ಪ, ಡಾ.ಮಹಾಂತೇಶ್, ಕುಮಾರ್  ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.



Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್