LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

*ಬಳ್ಳಾರಿ: ಜೂ.28 ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ*

ಬಳ್ಳಾರಿ,ಜೂ.27: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಆಸ್ಪತ್ರೆ ಇವರ ಸಂಯುಕ್ತಾಶ್ರಯದಲ್ಲಿ ಜೂನ್ 28 ರಂದು ಬೆಳಿಗ್ಗೆ 9.30 ಗಂಟೆಗೆ ನಗರದ ಜಿಲ್ಲಾ ಆಸ್ಪತ್ರೆಯ ಮುಂಭಾಗದಲ್ಲಿರುವ ಎಮ್.ಸಿ.ಹೆಚ್ ಆಸ್ಪತ್ರೆಯ ಆವರಣದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ನಾರಾ ಭರತ್‌ರೆಡ್ಡಿ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದಾರೆ.
ಬಳ್ಳಾರಿ ಲೋಕಸಭಾ ಕ್ಷೇತ್ರದ ಸಂಸದ ಈ. ತುಕಾರಾಮ್, ಕೊಪ್ಪಳ ಸಂಸದ ಕೆ.ರಾಜಶೇಖರ ಬಸವರಾಜ ಹಿಟ್ನಾಳ್ ಹಾಗೂ ರಾಜ್ಯಸಭಾ ಸದಸ್ಯ ಡಾ. ಸೈಯದ್ ನಾಸೀರ್ ಹುಸೇನ್, ಕಂಪ್ಲಿ ಕ್ಷೇತ್ರದ ಶಾಸಕರು ಹಾಗೂ ಕಾವೇರಿ ಹ್ಯಾಂಡ್‌ಲೂಮ್ಸ್ ಅಧ್ಯಕ್ಷರಾದ ಜೆ.ಎನ್.ಗಣೇಶ್, ಬಳ್ಳಾರಿ ಗ್ರಾಮೀಣ ಕ್ಷೇತ್ರದ ಶಾಸಕ ಬಿ. ನಾಗೇಂದ್ರ, ಸಿರುಗುಪ್ಪ ಕ್ಷೇತ್ರದ ಶಾಸಕ ಬಿ. ಎಮ್.ನಾಗರಾಜ, ಸಂಡೂರು ಕ್ಷೇತ್ರದ ಶಾಸಕರಾದ ಈ. ಅನ್ನಪೂರ್ಣ ಮತ್ತು ವಿಧಾನಪರಿಷತ್ ಸದಸ್ಯರುಗಳಾದ ಡಾ.ಚಂದ್ರಶೇಖರ ಬಿ. ಪಾಟೀಲ, ಶಶೀಲ್ ಜಿ ನಮೋಶಿ, ವೈ.ಎಂ.ಸತೀಶ್, ಡಾ. ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಪಿ. ಗಾದೆಪ್ಪ, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ ಲಿಮಿಟೆಡ್‌ನ ಉಪಾಧ್ಯಕ್ಷ ಹೆಚ್. ಲಕ್ಷ್ಮಣ ಹಾಗೂ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ ಚಿದಾನಂದಪ್ಪ ಅವರು ಪಾಲ್ಗೊಳ್ಳಲಿದ್ದಾರೆ.
ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೇರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ.ಪಿ., ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಮಹಾನಗರ ಪಾಲಿಕೆ ಆಯುಕ್ತ ಮಂಜುನಾಥ್ ಪಿ.ಎಸ್ ಅವರು ಉಪಸ್ಥಿತರಿರಲಿದ್ದಾರೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಯಲ್ಲಾ ರಮೇಶ್‌ ಬಾಬು, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ ಹಾಗೂ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಹನುಮಂತಪ್ಪ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್