LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಬಳ್ಳಾರಿ: ಹವಂಬಾವಿ ಪ್ರದೇಶದ 1.33 ಎಕರೆ ಸರ್ಕಾರಿ ಜಾಗ ಒತ್ತುವರಿ ತೆರವು


ಬಳ್ಳಾರಿ,ಜೂ.22 ನಗರದ ಹವಂಬಾವಿ ಪ್ರದೇಶದ ಸಿರುಗುಪ್ಪ ರಸ್ತೆಯ ಕಾಲುವೆ ಬಳಿ ಅಕ್ರಮವಾಗಿ ಒತ್ತುವರಿಯಾಗಿದ್ದ ಸರ್ಕಾರಿ ಜಾಗವನ್ನು ಕಂದಾಯ ಇಲಾಖೆ ಅಧಿಕಾರಿಗಳು ಶನಿವಾರ ಯಶಸ್ವಿಯಾಗಿ ವಶಕ್ಕೆ ಪಡೆದಿದ್ದಾರೆ.
ಬಳ್ಳಾರಿ (ಗ್ರಾಮೀಣ) ವ್ಯಾಪ್ತಿಯ ಸರ್ವೆ ನಂಬರ್ 275 ರಲ್ಲಿ ಬರುವ ಸುಮಾರು 1.33 ಎಕರೆ ವಿಸ್ತೀರ್ಣದ ಜಾಗ ಸರ್ಕಾರಕ್ಕೆ ಸೇರಿದ್ದಾಗಿದೆ. ಇದನ್ನು ಕೆಲವರು ಕಾನೂನುಬಾಹಿರವಾಗಿ ಒತ್ತುವರಿ ಮಾಡಿಕೊಂಡಿದ್ದರು.
ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಅವರ ನೇತೃತ್ವದಲ್ಲಿ ಬಳ್ಳಾರಿ ತಹಶೀಲ್ದಾರ್ ರೇಖಾ ಅವರು, ಪೊಲೀಸ್ ಸಿಬ್ಬಂದಿ ಹಾಗೂ ಕಂದಾಯ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಒತ್ತುವರಿಯನ್ನು ತೆರವುಗೊಳಿಸಿದ್ದಾರೆ. ಸ್ಥಳದಲ್ಲಿ ತಹಶೀಲ್ದಾರ್ ಕಚೇರಿಯಿಂದ ಅಧಿಕೃತ ಜಾಗೃತಿ ಹಾಗೂ ಎಚ್ಚರಿಕೆ ಫಲಕವನ್ನು ಅಳವಡಿಸಲಾಗಿದೆ.
ಇದೇ ವೇಳೆ ಹವಂಬಾವಿ ಪ್ರದೇಶದ ಸಿರುಗುಪ್ಪ ರಸ್ತೆಯ ಎಡಬದಿಯಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ವಾಣಿಜ್ಯ ಮತ್ತು ಇತರೆ ಕಟ್ಟಡಗಳನ್ನು ಜೆಸಿಬಿ ಯಂತ್ರಗಳ ಸಹಾಯದಿಂದ ನೆಲಸಮಗೊಳಿಸಲಾಯಿತು. ಕಾನೂನು ಬಾಹಿರವಾಗಿ ನಿರ್ಮಾಣಗೊಂಡಿದ್ದ ಗೋಡೆಗಳು ಹಾಗೂ ಶೆಡ್‌ಗಳನ್ನು ಯಶಸ್ವಿಯಾಗಿ ದ್ವಂಸಗೊಳಿಸಿದರು.
ಈ ಕಾರ್ಯಾಚರಣೆಯ ಸಂದರ್ಭದಲ್ಲಿ ಸ್ಥಳೀಯ ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದು ಸೂಕ್ತ ಬಂದೋಬಸ್ತ್ ಒದಗಿಸಿದ್ದರು.
ಸರ್ಕಾರಿ ಸ್ವತ್ತನ್ನು ರಕ್ಷಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತವು ಇನ್ನು ಮುಂದೆಯೂ ಇಂತಹ ಕಠಿಣ ಕ್ರಮಗಳನ್ನು ಮುಂದುವರಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್