LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಬಳ್ಳಾರಿ: 406 ಕ್ವಿಂಟಾಲ್ ಅಕ್ರಮ ಪಡಿತರ ಅಕ್ಕಿ ಜಪ್ತಿ, 3 ಪ್ರಕರಣ ದಾಖಲು


ಬಳ್ಳಾರಿ,ಮೇ 29: ಜಿಲ್ಲೆಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಂಗ್ರಹಿಸಿ, ಸಾಗಾಣಿಕೆ ಮಾಡುತ್ತಿದ್ದ ಜಾಲದ ವಿರುದ್ಧ ತೀವ್ರ ನಿಗಾ ವಹಿಸಿದ್ದು, ಜಿಲ್ಲೆಯ ವಿವಿಧೆಡೆ ದಾಳಿ ನಡೆಸಿ ಲಕ್ಷಾಂತರ ರೂಪಾಯಿ ಮೌಲ್ಯದ ಅಕ್ಕಿ ಹಾಗೂ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕ ಕೆ.ಆರ್ ದೇವರಾಜ್ ಅವರು ತಿಳಿಸಿದ್ದಾರೆ.
ಮೇ 27 ರಂದು ಜಿಲ್ಲೆಯ ಮೂರು ಪ್ರತ್ಯೇಕ ಕಡೆಗಳಲ್ಲಿ ಅಗತ್ಯ ವಸ್ತುಗಳ ಕಾಯ್ದೆಯಡಿ (ಇ.ಸಿ ಕಾಯ್ದೆ) ಪ್ರಕರಣಗಳನ್ನು ದಾಖಲಿಸಲಾಗಿದೆ.
ಕುರುಗೋಡು ತಾಲೂಕಿನ ಬಾದನಹಟ್ಟಿ ಗ್ರಾಮದ ನಂದಿ ಲೇಔಟ್‌ನಲ್ಲಿ ಕಾರ್ಡುದಾರರಿಂದ ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಿ ಲಾರಿಗೆ ತುಂಬಿಸುತ್ತಿದ್ದ ವೇಳೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಕೆ.ಎ-36/ಸಿ-5899 ಸಂಖ್ಯೆಯ ಲಾರಿ ಹಾಗೂ ಅದರಲ್ಲಿದ್ದ 226 ಕ್ವಿಂಟಾಲ್ ಅಕ್ಕಿಯನ್ನು ಜಪ್ತಿ ಮಾಡಲಾಗಿದೆ. ಈ ಸಂಬಂಧ ಕುರುಗೋಡು ನಿವಾಸಿಗಳಾದ ಯರಿಸ್ವಾಮಿ, ಉಮಾಶಂಕರ್, ಮಾನ್ವಿ ತಾಲೂಕಿನ ವೀರಭದ್ರಪ್ಪ, ಚಾಲಕ ವಿನೋದ್ ಹಾಗೂ ಲಾರಿ ಮಾಲೀಕ ಪಂಪನಗೌಡ ಎಂಬುವವರ ವಿರುದ್ಧ ಕುರುಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಸಿರುಗುಪ್ಪ ತಾಲ್ಲೂಕಿನ ಬಂಡ್ರಾಳ್ ಗ್ರಾಮದಲ್ಲಿ ಮಾರುತಿ ಓಮಿನಿ ವಾಹನ (ಸಂಖ್ಯೆ: ಕೆ.ಎ-34/ಎನ್-7709) ಮೂಲಕ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಜಾಲವನ್ನು ಪತ್ತೆಹಚ್ಚಲಾಗಿದ್ದು, ವಾಹನ ಸೇರಿದಂತೆ 150 ಕ್ವಿಂಟಾಲ್ ಅಕ್ಕಿಯನ್ನು ಸಿರುಗುಪ್ಪ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಬಳ್ಳಾರಿ ತಾಲ್ಲೂಕಿನ ಚೆಳಗುರ್ಕಿ ಗ್ರಾಮದಲ್ಲಿ ಕಾರ್ಡುದಾರರಿಂದ ಅಕ್ರಮವಾಗಿ ಸಂಗ್ರಹಿಸಿ ಸಾಗಿಸುತ್ತಿದ್ದ 30 ಕ್ವಿಂಟಾಲ್ ಅಕ್ಕಿ ಮತ್ತು ಸಾಗಾಣಿಕೆಗೆ ಬಳಸಿದ್ದ ವಾಹನವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಪಿ.ಡಿ.ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಮೂರೂ ಕಾರ್ಯಾಚರಣೆಗಳಲ್ಲಿ ಒಟ್ಟು 406 ಕ್ವಿಂಟಾಲ್ ಪಡಿತರ ಅಕ್ಕಿ ಹಾಗೂ ಸಾಗಾಣಿಕೆಗೆ ಬಳಸಲಾಗಿದ್ದ 3 ವಾಹನಗಳನ್ನು ಜಪ್ತಿ ಮಾಡಲಾಗಿದ್ದು, ಇವುಗಳ ಅಂದಾಜು ಒಟ್ಟು ಮೌಲ್ಯ ರೂ.14,33,800 ಆಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಅಕ್ರಮ ದಂಧೆಕೋರರ ವಿರುದ್ಧ ಇಲಾಖೆಯು ಕಠಿಣ ಕ್ರಮ ಮುಂದುವರಿಸಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್