LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bellary

ಬಳ್ಳಾರಿ: ಗಾಂಧಿನಗರದಲ್ಲಿ ಸ್ವಚ್ಛತಾ ಕಾರ್ಯದೊಂದಿಗೆ 80ನೇ ಸ್ವಾತಂತ್ರö್ಯ ದಿನಾಚರಣೆ


ಬಳ್ಳಾರಿ,ಆ.18 ಭಾರತ ಸರ್ಕಾರದ ಮೇರಾ ಯುವ ಭಾರತ (ಬಳ್ಳಾರಿ), ಶುಭಮಸ್ತು ಮಹಿಳಾ ಸಂಘ ಹಾಗೂ ಮಹಾನಗರ ಪಾಲಿಕೆಯ ಸಂಯುಕ್ತಾಶ್ರಯದಲ್ಲಿ ‘ಸ್ವಚ್ಛತಾ ಪಕ್ವಾಡಾ' ಅಭಿಯಾನದ ಅಂಗವಾಗಿ ಶನಿವಾರ ಗಾಂಧಿನಗರದ ಕೆ.ಹೆಚ್.ಬಿ. ಕಾಲೋನಿ ಪಾರ್ಕ್ನಲ್ಲಿ 80ನೇ ಸ್ವಾತಂತ್ರö್ಯ ದಿನಾಚರಣೆಯನ್ನು ಸ್ವಚ್ಛತಾ ಕಾರ್ಯ ನಡೆಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಮಹಾನಗರ ಪಾಲಿಕೆಯ 22ನೇ ವಾರ್ಡ್ ನ ಸದಸ್ಯ ಕೆ. ಹನುಮಂತಪ್ಪ ಅವರು, ನಗರದಲ್ಲಿ ಸ್ವಚ್ಛತೆಯ ಅರಿವು ಮೂಡಿಸುವುದು ಪ್ರತಿಯೊಬ್ಬರ ಕರ್ತವ್ಯ. ಎಲ್ಲೆಂದರಲ್ಲಿ ಬಿದ್ದಿರುವ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಗ್ರಹಿಸಿ ಸಮರ್ಪಕವಾಗಿ ವಿಲೇವಾರಿ ಮಾಡಬೇಕು. ಸಾರ್ವಜನಿಕರು ಹಾಗೂ ಅಂಗಡಿ-ಮುAಗಟ್ಟುಗಳ ಮಾಲೀಕರು ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ತ್ಯಜಿಸಿ, ಪರಿಸರಸ್ನೇಹಿ ಬಟ್ಟೆ ಚೀಲಗಳನ್ನು ಬಳಸುವ ಮೂಲಕ ಪರಿಸರ ರಕ್ಷಣೆಗೆ ಸಹಕರಿಸಬೇಕು ಎಂದು ಕರೆ ನೀಡಿದರು.
ಶುಭಮಸ್ತು ಮಹಿಳಾ ಸಂಘದ ಕಾರ್ಯದರ್ಶಿ ಸುಮಾರೆಡ್ಡಿ ಅವರು ಮಾತನಾಡಿ, ಮಹಾತ್ಮ ಗಾಂಧೀಜಿಯವರು ಸ್ವಾತಂತ್ರö್ಯ ಪೂರ್ವದಿಂದಲೂ ಸ್ವಚ್ಛತೆಗೆ ನೀಡಿದ ಮಹತ್ವ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಆರಂಭವಾದ ಸ್ವಚ್ಛ ಭಾರತ ಅಭಿಯಾನದ ಆಶಯಗಳ ಕುರಿತು ವಿವರಿಸಿದರು.
ಈ ಸಂದರ್ಭದಲ್ಲಿ ಬನ್ನಿ ಗಿಡ ಪಾರ್ಕ್ ನಾಗರಿಕರ ವೇದಿಕೆಯ ಗೌರವಾಧ್ಯಕ್ಷ ನಾರಾಯಣಪ್ಪ, ಅಧ್ಯಕ್ಷ ರಾಮೇಶ್ವರ ಹಾಗೂ ಪ್ರಮುಖರಾದ ರಾಜು, ಶಿವು, ಶಿವರಾಜ್ ಗೌಡ, ತಿಪ್ಪೇಸ್ವಾಮಿ, ರಜಾಕ್ ಸಾಬ್, ಸೂರ್ಯದೇವ, ಸುಂಕಣ್ಣ, ಮಹಾನಗರ ಪಾಲಿಕೆಯ ಪೌರಕಾರ್ಮಿಕರು, ಸ್ವಚ್ಛ ಭಾರತ್ ಪದಾಧಿಕಾರಿಗಳು ಮತ್ತು ಬಡಾವಣೆಯ ನಾಗರಿಕರು ಶ್ರಮದಾನದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಕಾರ್ಯಕ್ರಮದ ಕೊನೆಯಲ್ಲಿ ವೇದಿಕೆಯ ಅಧ್ಯಕ್ಷ ರಾಮೇಶ್ವರ ಅವರು ವಂದನಾರ್ಪಣೆ ಮಾಡಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಂಕರಗೌಡ ಪಾಟೀಲಗೆ ಶಿಕ್ಷಣ ಸೇವಾರತ್ನ ಪ್ರಶಸ್ತಿ ಪ್ರದಾನಹತಾಷಭಾವನೆಯಿಂದ ನಡಹಳ್ಳಿ ಹೋರಾಟ-ಪ್ರಭುಗೌಡಕಂಟೆಪ್ಪಗೌಡ ಪಾಟೀಲ ನಿಧನವಿದ್ಯಾರ್ಥಿಗಳು ಕಲಿಕಾ ಮಟ್ಟ ಸುಧಾರಿಸಿಕೊಳ್ಳಬೇಕು: ಜಮಗೊಂಡಿಕೃಷಿ ಸಖಿ ಮಾಡ್ಯೂಲ್-ಗಿ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ*27 ದಿನಗಳಲ್ಲಿ 40 ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚಾರ; ಎಐಸಿಸಿ ಸಂಯೋಜಕರಾಗಿ ಮೃಣಾಲ್ ಹೆಬ್ಬಾಳಕರ್ ಸಕ್ರಿಯ ಭಾಗಿ*ಕಾಗವಾಡ ಬರಪೀಡಿತ ಪಟ್ಟಿಯಿಂದ ಹೊರಕ್ಕೆ: ನಿರಂತರ ವಿದ್ಯುತ್ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತರ ಬೃಹತ್ ರಸ್ತೆ ತಡೆ ಪ್ರತಿಭಟನೆಗುಡದಳ್ಳಿ ಗ್ರಾಮದಲ್ಲಿ ಅಂತರಾಷ್ಟಿçÃಯ ಹಾವು ಕಡಿತ ಜಾಗೃತಿ ದಿನ ಕಾರ್ಯಕ್ರಮಕಿತ್ತೂರು ಬಸ್ ನಿಲ್ದಾಣಕ್ಕೆ ಟ್ರ್ಯಾಕ್ಟರ್ ಅಡ್ಡಹಾಕಿ ಗ್ರಾಮಸ್ಥರು, ವಿದ್ಯಾರ್ಥಿಗಳ ಪ್ರತಿಭಟನೆರಾಮದುರ್ಗವನ್ನು ಸಂಪೂರ್ಣ ಬರಪೀಡಿತ ತಾಲೂಕು ಎಂದು ಘೋಷಿಸಲು ಸರ್ಕಾರಕ್ಕೆ ಮನವಿ