LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಬಳ್ಳಾರಿ: ಮುಂದುವರೆದ ಸರ್ಕಾರಿ ಜಾಗ ಒತ್ತುವರಿ ತೆರವು ಕಾರ್ಯಾಚರಣೆ


ಬಳ್ಳಾರಿ,ಜು.03 ನಗರದ ವಿವಿಧ ವಾರ್ಡ್ಗಳಲ್ಲಿರುವ ಕೋಟ್ಯಂತರ ರೂಪಾಯಿ ಮೌಲ್ಯದ ಸರ್ಕಾರಿ ಜಾಗ ಹಾಗೂ ಅಂಗನವಾಡಿ ಕೇಂದ್ರಗಳಿಗೆ ಕಾಯ್ದಿರಿಸಿದ ಜಾಗಗಳಲ್ಲಿ ಅತಿಕ್ರಮವಾಗಿ ಆಕ್ರಮಿಸಿಕೊಂಡಿರುವುದನ್ನು ಖಚಿತಪಡಿಸಿಕೊಂಡು ಜಿಲ್ಲಾಡಳಿತ ಗುರುವಾರ ಒತ್ತುವರಿ ಕಾರ್ಯಾಚರಣೆ ನಡೆಸಿದೆ.
ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರ ನಿರ್ದೇಶನದಂತೆ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ ಹಾಗೂ ತಹಶೀಲ್ದಾರ್ ಟಿ.ರೇಖಾ ನೇತೃತ್ವದ ಅಧಿಕಾರಿಗಳ ತಂಡವು ನಗರದ ವಿವಿಧೆಡೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸಾರ್ವಜನಿಕ ಮತ್ತು ಸರ್ಕಾರಿ ಜಾಗಗಳನ್ನು ರಕ್ಷಿಸಲಾಯಿತು.
ಬೆಳ್ಳಂಬೆಳಗ್ಗೆ ವಿವಿಧ ಯಂತ್ರೋಪಕರಣಗಳ ಮೂಲಕ ಸರ್ಕಾರಕ್ಕೆ ಸೇರಬೇಕಾದ ಜಾಗಗಳನ್ನು ಜಿಲ್ಲಾಡಳಿತದ ವತಿಯಿಂದ ತೆರವುಗೊಳಿಸಲಾಯಿತು.
ಬಳ್ಳಾರಿ ನಗರದ ಸಿಟಿಎಸ್ ವಾರ್ಡ್ ನಂ. 21, ಬ್ಲಾಕ್ ನಂ. 03 ರ ಟಿ.ಎಸ್ ನಂ. 41 ರಲ್ಲಿದ್ದ 0.08 ಸೆಂಟ್ಸ್ ಜಾಗವನ್ನು ಅಂಗನವಾಡಿ ಕೇಂದ್ರಕ್ಕೆ ನಿಗದಿಪಡಿಸಲಾಗಿದ್ದು, ಇಲ್ಲಿ ಅತಿಕ್ರಮಣಗೊಂಡ ಜಾಗವನ್ನು ಸುಪರ್ದಿಗೆ ಪಡೆದುಕೊಂಡು ಅತಿಕ್ರಮಣದಾರರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಬೋರ್ಡ್ ಹಾಕಲಾಗಿದೆ.
ವಾರ್ಡ್ ನಂ. 22, ಬ್ಲಾಕ್ ನಂ. 11 ರ ಟಿ.ಎಸ್ ನಂ. 94 ವಿ ಯಲ್ಲಿರುವ ಸುಮಾರು 0.49.6 ಸೆಂಟ್ಸ್ ವಿಸ್ತೀರ್ಣದ ಕರ್ನಾಟಕ ಸರ್ಕಾರದ ಬಯಲು ಜಾಗವನ್ನು ಜಿಲ್ಲಾಡಳಿತ ತೆರವುಗೊಳಿಸಿದೆ.
ಅದೇ ರೀತಿ ವಾರ್ಡ್ ನಂ. 21, ಬ್ಲಾಕ್ ನಂ. 03 ರ ಟಿ.ಎಸ್ ನಂ. 43 ರ ಪೈಕಿ ವಿ ಯಲ್ಲಿರುವ 0.75 ಸೆಂಟ್ಸ್ ಜಾಗವು ಸಂಪೂರ್ಣ ಸರ್ಕಾರಿ ಸ್ವತ್ತಾಗಿದ್ದು, ಅಕ್ರಮ ಪ್ರವೇಶ ಅಥವಾ ಒತ್ತುವರಿ ಮಾಡುವವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಲಾಗಿದೆ.
ನಗರದ ಬುಡಾ ಪಾರ್ಕ್, ನಾರಾಯಣಪ್ಪ ಕಾಂಪೌAಡ್, ಕೋಟೆ ಪ್ರದೇಶ ಹಾಗೂ ಸಿದ್ದಾರ್ಥ ನಗರ, ದೇವಿ ನಗರದ ಸರ್ಕಾರಿ ಜಾಗಗಳಿಗೆ ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತಾಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿಗಳೊAದಿಗೆ ಭೇಟಿ ನೀಡಿ ಒತ್ತುವರಿ ತೆರವು ಹಾಗೂ ರಕ್ಷಣಾ ಕಾರ್ಯ ಕೈಗೊಂಡರು.
ಸರ್ಕಾರಿ ಆಸ್ತಿಯನ್ನು ಸಾರ್ವಜನಿಕರ ಹಿತಬಲಿಗಾಗಿ ಕಾಯ್ದಿರಿಸಲಾಗಿದ್ದು, ಯಾವುದೇ ವ್ಯಕ್ತಿ ಅಥವಾ ಸಂಸ್ಥೆಗಳು ಇದನ್ನು ಅಕ್ರಮವಾಗಿ ವಶಪಡಿಸಿಕೊಳ್ಳಲು ಯತ್ನಿಸಿದರೆ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದೆ.
ತೆರವು ಕಾರ್ಯಾಚರಣೆ ಸಂದರ್ಭದಲ್ಲಿ ಡಿಡಿಎಲ್‌ಆರ್ ಪ್ರಮೋದ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಜಿ.ಖಲೀಲ್ ಸಾಬ್ ಸೇರಿದಂತೆ ಇತರರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್