LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಏಷ್ಯನ್ ಅಥ್ಲೆಟಿಕ್ಸ್ ನಲ್ಲಿ ಬೆಳ್ಳಿ ಪದಕ ವಿಜೇತೆ ಸುದೀಕ್ಷಾಗೆ ಬಳ್ಳಾರಿ ಜಿಲ್ಲಾಡಳಿತದಿಂದ ಅದ್ಧೂರಿ ಸನ್ಮಾನ


ಬಳ್ಳಾರಿ,ಜು.17 : ಏಷ್ಯನ್ ಚಾಂಪಿಯನ್‌ಶಿಪ್ ಅಂಡರ್-23 ಅಥ್ಲೆಟಿಕ್ಸ್ ನ 4*100 ಮೀಟರ್ ರಿಲೇಯಲ್ಲಿ ಬೆಳ್ಳಿ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದ ಬಳ್ಳಾರಿ ಜಿಲ್ಲೆಯ ಹೆಮ್ಮೆಯ ಪ್ರತಿಭೆ ಸುದೀಕ್ಷಾ ಅವರಿಗೆ ಬಳ್ಳಾರಿ ಜಿಲ್ಲಾಡಳಿತದಿಂದ ಗುರುವಾರ ಹೊಸ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆತ್ಮೀಯವಾಗಿ ಸನ್ಮಾನಿಸಲಾಯಿತು.
ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು, ಸುದೀಕ್ಷಾ ಅವರ ಈ ಸಾಧನೆ ಇಡೀ ದೇಶಕ್ಕೆ ಹಾಗೂ ವಿಶೇಷವಾಗಿ ನಮ್ಮ ಬಳ್ಳಾರಿ ಜಿಲ್ಲೆಗೆ ಅತ್ಯಂತ ಸಂತೋಷ ಮತ್ತು ಹೆಮ್ಮೆಯ ವಿಷಯವಾಗಿದೆ. ಅವರ ಅಪೂರ್ವ ಪ್ರತಿಭೆಯನ್ನು ಗೌರವಿಸುವ ಸಲುವಾಗಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಇಂದು ಸನ್ಮಾನ ಮಾಡಲಾಗಿದೆ. ಇದರೊಂದಿಗೆ ಸಾಂಕೇತಿಕವಾಗಿ ಜಿಲ್ಲಾ ಕ್ರೀಡಾ ಇಲಾಖೆ ವತಿಯಿಂದ ರೂ.50 ಸಾವಿರ ಚೆಕ್ ಕೂಡ ನೀಡಲಾಗಿದೆ ಎಂದು ತಿಳಿಸಿದರು.
ಸುದೀಕ್ಷಾ ಅವರು, ಬಳ್ಳಾರಿಯ ಜಿಲ್ಲಾ ಕ್ರೀಡಾಂಗಣದಲ್ಲಿಯೇ ಶ್ರೀ ರಾಮಸ್ವಾಮಿ ಅವರ ಮಾರ್ಗದರ್ಶನದಲ್ಲಿ ತಮ್ಮ ಅಥ್ಲೆಟಿಕ್ಸ್ ತರಬೇತಿ ಹಾಗೂ ಸಿದ್ಧತೆಗಳನ್ನು ನಡೆಸಿದ್ದರು ಎಂಬುದು ಜಿಲ್ಲೆಗೆ ಹೆಮ್ಮೆಯ ಸಂಗತಿಯಾಗಿದೆ. ಬಳ್ಳಾರಿಯ ಇತರ ಉದಯೋನ್ಮುಖ ಕ್ರೀಡಾ ಪ್ರತಿಭೆಗಳಿಗೆ ಸುದೀಕ್ಷಾ ಅವರು ದೊಡ್ಡ ಮಾದರಿಯಾಗಿದ್ದಾರೆ. ಅವರು ತಮ್ಮ ಜೀವನದಲ್ಲಿ ಇನ್ನೂ ಎತ್ತರದ ಸಾಧನೆಗಳನ್ನು ಮಾಡಲಿ ಹಾಗೂ ಮುಂಬರುವ ದಿನಗಳಲ್ಲಿ ದೇಶಕ್ಕೆ ಒಲಿಂಪಿಕ್ ಪದಕವನ್ನು ತರಲಿ ಎಂದು ಹಾರೈಸಿದರು.
*ಅಥ್ಲೆಟಿಕ್ಸ್ ಕ್ರೀಡಾಪಟುಗಳಿಗೆ ಆರ್ಥಿಕ ನೆರವು ಮತ್ತು ಸ್ಪಾನ್ಸರ್‌ಶಿಪ್ ಒದಗಿಸಲು ಸಕಾರಾತ್ಮಕ ಭರವಸೆ:*
ದೇಶವನ್ನು ಪ್ರತಿನಿಧಿಸುವ ಅಥ್ಲೆಟಿಕ್ಸ್ ಕ್ರೀಡಾಪಟುಗಳು ಕ್ರೀಡಾರಂಗದಲ್ಲಿ ಮತ್ತಷ್ಟು ಸಾಧನೆ ಮಾಡಲು ಮತ್ತು ಆರ್ಥಿಕವಾಗಿ ಸಬಲರಾಗಲು ಅಗತ್ಯವಿರುವ ಎಲ್ಲಾ ರೀತಿಯ ಬೆಂಬಲವನ್ನು ಒದಗಿಸಲು ಜಿಲ್ಲಾಡಳಿತ ಬದ್ಧವಾಗಿದೆ ಎಂದು ಹೇಳಿದರು.
ಕ್ರೀಡಾಪಟುಗಳಿಗೆ ಅಗತ್ಯವಿರುವ ಸ್ಪಾನ್ಸರ್‌ಶಿಪ್ ಮತ್ತು ಅವರು ಆರ್ಥಿಕವಾಗಿ ಮುಂದೆ ಬರಲು ಅಥ್ಲೆಟಿಕ್ಸ್ ನಲ್ಲಿ ಏನೇನು ಅಗತ್ಯತೆಗಳಿವೆಯೋ, ಅವುಗಳನ್ನು ಒದಗಿಸುವ ನಿಟ್ಟಿನಲ್ಲಿ ಖಾಸಗಿ ಕಂಪನಿಗಳ ಸಹಯೋಗದೊಂದಿಗೆ ಎಲ್ಲಾ ರೀತಿಯ ಸಕಾರಾತ್ಮಕ ಕ್ರಮಗಳನ್ನು ಖಂಡಿತವಾಗಿಯೂ ಕೈಗೊಳ್ಳಲಾಗುವುದು ಎಂದು ಈ ಸಂದರ್ಭದಲ್ಲಿ ತಿಳಿಸಿದರು.
ಕ್ರೀಡಾಪಟುಗಳ ಪ್ರತಿಭೆಗೆ ಸೂಕ್ತ ಪ್ರೋತ್ಸಾಹ ಹಾಗೂ ಧನಸಹಾಯವನ್ನು ಒದಗಿಸುವ ಮೂಲಕ ಅವರ ಕ್ರೀಡಾ ವೃತ್ತಿಜೀವನಕ್ಕೆ ಬಲ ತುಂಬುವ ನಿಟ್ಟಿನಲ್ಲಿ  ಜಿಲ್ಲಾಡಳಿತದಿಂದ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್. ಎನ್., ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ., ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜು

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ