LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಬಳ್ಳಾರಿ: ಲೋಕಾಯುಕ್ತ ಜನಸಂಪರ್ಕ ಸಭೆ ಹಾಗೂ ಕುಂದುಕೊರತೆಗಳ ಅಹವಾಲು ಸ್ವೀಕಾರ


ಬಳ್ಳಾರಿ,ಜೂ.16 : ಕರ್ನಾಟಕ ಲೋಕಾಯುಕ್ತ ಬಳ್ಳಾರಿ ವತಿಯಿಂದ ಜೂನ್ ತಿಂಗಳಿನಲ್ಲಿ ಜಿಲ್ಲೆಯ ವಿವಿಧ ತಾಲ್ಲೂಕು ಕೇಂದ್ರಗಳಲ್ಲಿ ಸಾರ್ವಜನಿಕ ಕುಂದುಕೊರತೆಗಳ ಅಹವಾಲು ಆಲಿಕೆ ಹಾಗೂ ಜನಸಂಪರ್ಕ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ಲೋಕಾಯುಕ್ತ ಬಳ್ಳಾರಿಯ ಪೊಲೀಸ್ ಅಧೀಕ್ಷಕ ವಾಸುದೇವರಾಮ್ ಎನ್. ಅವರ ಮಾರ್ಗದರ್ಶನದಲ್ಲಿ, ಪೊಲೀಸ್ ಉಪಾಧೀಕ್ಷಕ ಎಸ್.ಎಸ್.ಬೀಳಗಿ, ಪೊಲೀಸ್ ನಿರೀಕ್ಷಕರುಗಳಾದ ಸುರೇಶ್ ಎಂ.ಭಾವಿಮನಿ ಮತ್ತು ಗುರಣ್ಣ ಎಸ್.ಹೆಬ್ಬಾಳ್ ಅವರ ನೇತೃತ್ವದಲ್ಲಿ ಈ ಸಭೆಗಳು ನಡೆಯಲಿವೆ.
ಸಾರ್ವಜನಿಕರು ಗೌರವಾನ್ವಿತ ಲೋಕಾಯುಕ್ತರಿಗೆ ಅರ್ಜಿಗಳನ್ನು ಸಲ್ಲಿಸಲು ಅನುಕೂಲವಾಗುವಂತೆ ನಮೂನೆ/ಫಾರಂ ನಂ: 1 ಮತ್ತು 2 ಗಳನ್ನು ಸಹ ನೀಡಲಾಗುತ್ತದೆ.
*ತಾಲ್ಲೂಕುವಾರು ಸಭೆ:*
ಸಂಡೂರು ತಾಲ್ಲೂಕು: ಜೂ.19 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ಗಂಟೆಯ ವರೆಗೆ ಸಂಡೂರಿನ ತಹಶೀಲ್ದಾರರ ಕಚೇರಿ ಸಭಾಂಗಣ.
ಕAಪ್ಲಿ ತಾಲ್ಲೂಕು: ಜೂ.19 ರಂದು ಮಧ್ಯಾಹ್ನ 03 ರಿಂದ ಸಂಜೆ 5.30 ಗಂಟೆಯ ವರೆಗೆ ಕಂಪ್ಲಿಯ ತಹಶೀಲ್ದಾರರ ಕಚೇರಿಯಲ್ಲಿರುವ ಸಭಾಂಗಣ.
ಸಿರುಗುಪ್ಪ ತಾಲ್ಲೂಕು: ಜೂ.20 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಸಿರುಗುಪ್ಪದ ಸಿ.ಡಿ.ಪಿ.ಓ ಕಚೇರಿಯಲ್ಲಿರುವ ಸಭಾಂಗಣ.
ಕುರುಗೋಡು ತಾಲ್ಲೂಕು: ಜೂ.20 ರಂದು ಮಧ್ಯಾಹ್ನ 3 ಗಂಟೆಯಿAದ ಸಂಜೆ 5 ಗಂಟೆಯ ವರೆಗೆ ಕುರುಗೋಡಿನ ತಹಶೀಲ್ದಾರರ ಕಚೇರಿಯಲ್ಲಿರುವ ಸಭಾಂಗಣ.
ಬಳ್ಳಾರಿ ತಾಲ್ಲೂಕು: ಜೂ.23 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಬಳ್ಳಾರಿಯ ಹೊಸ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿರುವ ಸಭಾಂಗಣ.
*ಸಾರ್ವಜನಿಕರಲ್ಲಿ ವಿನಂತಿ:*
ಸಾರ್ವಜನಿಕರು ತಮ್ಮ ವ್ಯಾಪ್ತಿಯಲ್ಲಿ ಸರ್ಕಾರಿ ಕಚೇರಿಗಳ ಕೆಲಸ ಕಾರ್ಯಗಳಿಗೆ ಸಂಬAಧಿಸಿದAತೆ ಯಾವುದೇ ಕುಂದುಕೊರತೆಗಳಿದ್ದಲ್ಲಿ, ಸಾರ್ವಜನಿಕರು ಮೇಲ್ಕಂಡ ದಿನಾಂಕ, ಸಮಯ ಹಾಗೂ ನಿಗದಿತ ಸ್ಥಳಗಳಲ್ಲಿ ಹಾಜರಿದ್ದು, ತಮ್ಮ ಅರ್ಜಿಗಳನ್ನು ಸಲ್ಲಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರ್ನಾಟಕ ಲೋಕಾಯುಕ್ತ ಬಳ್ಳಾರಿಯ ಪೊಲೀಸ್ ಅಧೀಕ್ಷಕ ವಾಸುದೇವರಾಮ್ ಎನ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್