LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಬಳ್ಳಾರಿ: ಆಗಸ್ಟ್ 2 ರಂದು ಪೊಲೀಸ್ ಕಾನ್‌ಸ್ಟೇಬಲ್ ಲಿಖಿತ ಪರೀಕ್ಷೆ



ಬಳ್ಳಾರಿ01 ಜಿಲ್ಲೆಯಲ್ಲಿ ಪೊಲೀಸ್ ಕಾನ್‌ಸ್ಟೇಬಲ್ (ಸಿವಿಲ್) ಹುದ್ದೆಗಳ ನೇರ ನೇಮಕಾತಿ ಲಿಖಿತ ಪರೀಕ್ಷೆಯು ಆಗಸ್ಟ್ 2 ರಂದು ನಡೆಯಲಿದ್ದು, ಪರೀಕ್ಷೆಯನ್ನು ಅಕ್ರಮ ಮುಕ್ತವಾಗಿ ಹಾಗೂ ಸುಸೂತ್ರವಾಗಿ ನಡೆಸುವ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೆ. ನಾಗೇಂದ್ರ ಪ್ರಸಾದ್ ಅವರು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಹೊರಡಿಸಿದ್ದಾರೆ.
ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023 ರ ಕಲಂ 163 ರಡಿ ಲಭ್ಯವಿರುವ ಅಧಿಕಾರವನ್ನು ಬಳಸಿ ಈ ಆದೇಶವನ್ನು ಹೊರಡಿಸಲಾಗಿದೆ.
ಅಂದು ಬೆಳಿಗ್ಗೆ 10.30 ರಿಂದ 12 ಗಂಟೆಯ ವರೆಗೆ ಪೊಲೀಸ್ ಕಾನ್‌ಸ್ಟೇಬಲ್ (ಸಿವಿಲ್ - ಮಿಕ್ಕುಳಿದ ವೃಂದ) ಪರೀಕ್ಷೆ ಮತ್ತು ಸಂಜೆ 04 ರಿಂದ 05.30 ಗಂಟೆಯ ವರೆಗೆ ಪೊಲೀಸ್ ಕಾನ್‌ಸ್ಟೇಬಲ್ (ಸಿವಿಲ್ - ಸ್ಥಳೀಯ ವೃಂದ) ಪರೀಕ್ಷೆ ನಡೆಯಲಿವೆ.
ಬಳ್ಳಾರಿ ಜಿಲ್ಲೆಯಾದ್ಯಂತ ಒಟ್ಟು 25 ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಪರೀಕ್ಷೆಯ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಲಿನ ಜೆರಾಕ್ಸ್ ಸೆಂಟರ್ ಮತ್ತು ಇಂಟರ್‌ನೆಟ್ ಸೆಂಟರ್‌ಗಳು ಕಾರ್ಯನಿರ್ವಹಿಸದಂತೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿಗಳು ಮತ್ತು ವ್ಯಕ್ತಿಗಳ ಗುಂಪುಗಳ ಪ್ರವೇಶವನ್ನು ಪ್ರತಿಬಂಧಿಸಲಾಗಿದೆ.
ಈ ನಿಷೇಧಾಜ್ಞೆ ಆದೇಶವು ಪರೀಕ್ಷಾ ಕರ್ತವ್ಯದಲ್ಲಿ ನಿರತರಾಗಿರುವ ಮೇಲ್ವಿಚಾರಕರು ಹಾಗೂ ಸಂಬAಧಪಟ್ಟ ಸಿಬ್ಬಂದಿಯವರಿಗೆ ಅನ್ವಯಿಸುವುದಿಲ್ಲ ಎಂದು ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್