LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಬಳ್ಳಾರಿ: ತಾಳೂರು ರಸ್ತೆ ಬಸ್ ಸಂಚಾರ ಮಾರ್ಗ ತಾತ್ಕಾಲಿಕ ಬದಲಾವಣೆ – ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶ


ಬಳ್ಳಾರಿ,ಜು.18 ತಾಳೂರು ಗ್ರಾಮಕ್ಕೆ ಸಂಪರ್ಕಿಸುವ ಮುಖ್ಯ ರಸ್ತೆಯಲ್ಲಿ ಸೇತುವೆ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಸಾರ್ವಜನಿಕ ಸುರಕ್ಷತೆ ಹಾಗೂ ಸುಗಮ ಸಂಚಾರದ ಹಿತದೃಷ್ಟಿಯಿಂದ ಈ ಮಾರ್ಗದಲ್ಲಿ ಚಲಿಸುವ ಬಸ್ಸುಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿ, ಪರ್ಯಾಯ ಮಾರ್ಗಗಳಲ್ಲಿ ಸಂಚರಿಸುವAತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ಅವರು ಆದೇಶ ಹೊರಡಿಸಿದ್ದಾರೆ.
*ಕಾಮಗಾರಿಯ ಹಿನ್ನೆಲೆ:*
ಲೋಕೋಪಯೋಗಿ ಇಲಾಖೆಯ ಕೆಎಂಇಆರ್‌ಸಿ ಯೋಜನೆ ಅಡಿಯಲ್ಲಿ ರಾಜ್ಯ ಹೆದ್ದಾರಿ-61 ಮತ್ತು ಹೆದ್ದಾರಿ-128 ಕ್ಕೆ ಸೇರುವ ದೇವದುರ್ಗ-ಅಮರಾಪುರ-ಭೋಗಾವತಿ-ಹಿರೇಕೋಟ್ನೇಕಲ್-ತಾಳೂರು-ಬಳ್ಳಾರಿ-ರೂಪನಗುಡಿ-ಚೆಳ್ಳಗುರ್ಕಿ ರಸ್ತೆಯ ಚತುಷ್ಪಥ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಕೋರ್ರಗುಂದಿ ಮತ್ತು ಹಂದ್ಯಾಳ್ ಗ್ರಾಮಗಳ ಮಧ್ಯೆ ಬರುವ ಎಲ್.ಎಲ್.ಸಿ ಕಾಲುವೆಗೆ ಅಡ್ಡಲಾಗಿ ಹೊಸ ಸೇತುವೆ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ. ಈ ಸೂಕ್ಷö್ಮ ರಸ್ತೆಯಲ್ಲಿ ಭಾರಿ ಗಾತ್ರದ ಸರ್ಕಾರಿ ಬಸ್ಸುಗಳು ನಿರಂತರವಾಗಿ ಸಂಚರಿಸುವುದರಿAದ ಸೇತುವೆ ಕಾಮಗಾರಿಗೆ ತೀವ್ರ ಅಡಚಣೆಯಾಗುತ್ತಿತ್ತು. ಇದನ್ನು ಪರಿಗಣಿಸಿ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರು ವರದಿ ನೀಡಿದ್ದರು.
ಹಾಗಾಗಿ ಮೋಟಾರ್ ವಾಹನ ಕಾಯ್ದೆ 1988ರ ಅಧಿನಿಯಮ 115 ಹಾಗೂ ಕರ್ನಾಟಕ ಮೋಟಾರ್ ವಾಹನ ನಿಯಮಗಳು 1989ರ ನಿಯಮ 221 ಎ (5) ರನ್ವಯ ಈ ಕ್ರಮ ಕೈಗೊಳ್ಳಲಾಗಿದೆ.
*ಪರ್ಯಾಯ ಮಾರ್ಗಗಳು:*
ಬಳ್ಳಾರಿಯಿಂದ ಹೊರಡುವ ಬಸ್ಸುಗಳು ಕೋಳೂರು ಕ್ರಾಸ್ – ದಮ್ಮೂರು – ಡಿ. ಕಗ್ಗಲ್ – ಚಾನಾಳು – ಚಾನಾಳು ಕ್ರಾಸ್ ಮಾರ್ಗವಾಗಿ ತಾಳೂರು ಗ್ರಾಮವನ್ನು ತಲುಪುವುದು.
ಪರ್ಯಾಯವಾಗಿ ಬಳ್ಳಾರಿಯಿಂದ ಮೋಕಾ – ಬಸರಕೋಡು – ಹಿರೇಹಡಗಲಿ ಮಾರ್ಗವಾಗಿ ತಾಳೂರು ಗ್ರಾಮಕ್ಕೆ ಸಂಚರಿಸಬಹುದಾಗಿದೆ.
ಈ ಆದೇಶವು ಆಗಸ್ಟ್ 06 ರವರೆಗೆ ಮಾತ್ರ ಜಾರಿಯಲ್ಲಿರುತ್ತದೆ. ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ರಸ್ತೆಯ ಪರ್ಯಾಯ ತಿರುವುಗಳಲ್ಲಿ ಸೂಕ್ತ ಸಂಕೇತ ಫಲಕಗಳನ್ನು ಅಳವಡಿಸಲು ಹಾಗೂ ಅಗತ್ಯ ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಸಂಬAಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಯವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಈ ತಾತ್ಕಾಲಿಕ ಬದಲಾವಣೆಗೆ ಸಾರ್ವಜನಿಕರು ಹಾಗೂ ಪ್ರಯಾಣಿಕರು ಸಹಕರಿಸಬೇಕು ಎಂದು ಅವರು ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್