LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಭಾರತಿ ಟೀಚರ್ ಏಳನೇ ತರಗತಿ ಹೊಸತನದ ಹಾಡುಗಳು 










     'ಭಾರತಿ ಟೀಚರ್ ಏಳನೇ ತರಗತಿ' ಚಿತ್ರದ ಡಾ.ವಿ.ನಾಗೇಂದ್ರ ಪ್ರಸಾದ್ ಒಡೆತನದ ’ಮ್ಯೂಸಿಕ್ ಬಜಾರ್’ ಹೊರತಂದಿರುವ ಐದು ಗೀತೆಗಳ ಬಿಡುಗಡೆ ಕಾರ್ಯಕ್ರಮ ನ್ಯಾಷನಲ್ ಕಾಲೇಜು, ಡಾ.ಹೆಚ್.ನರಸಿಂಹಯ್ಯ ಸಭಾಂಗಣದಲ್ಲಿ ಅದ್ದೂರಿಯಾಗಿ ಶಾಲಾ ಮಕ್ಕಳ ಸಮ್ಮುಖದಲ್ಲಿ ವಿಶೇಷವಾಗಿ ನಡೆಯಿತು.         ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ದಾವಣಗೆರೆ ಮೂಲದ ಡಾ.ವಿ.ವಿಜಯಲಕ್ಷೀ ಮತ್ತು ಉದ್ಯಮಿ ವೀರಕಪುತ್ರ ಶ್ರೀನಿವಾಸ್ ತಲಾ ಒಂದೊಂದು ಹಾಡುಗಳನ್ನು

ಬಿಡುಗಡೆಗೊಳಿಸಿ ತಂಡಕ್ಕೆ ಶುಭ ಹಾರೈಸಿದರು.

     ಸಿರಗುಪ್ಪ ಮೂಲದ ಉದ್ಯಮಿ ರಾಘವೇಂದ್ರ ರೆಡ್ಡಿ ಅವರು ಪೂಜ್ಯಾಯ ಫಿಲಂಸ್ ಅಡಿಯಲ್ಲಿ ನಿರ್ಮಾಣ ಮಾಡುತ್ತಿರುವುದು ಹೊಸ ಅನುಭವ.  ಕಥೆ,ಚಿತ್ರಕಥೆ,ಸಂಭಾಷಣೆ,ಸಾಹಿತ್ಯ, ಸಂಗೀತ ಮತ್ತು ನಿರ್ದೇಶನವನ್ನು ಎಂ.ಎಲ್.ಪ್ರಸನ್ನ ನಿರ್ವಹಿಸಿದ್ದಾರೆ. ಕ್ರಿಷಿ ಸಂಸ್ಥೆಯ ವೆಂಕಟ್‌ಗೌಡ ಕ್ರಿಯೇಟೀವ್ ಹೆಡ್ ಆಗಿರುತ್ತಾರೆ.

      ಶಿಕ್ಷಕರಾಗಿ ಸಿಹಿಕಹಿಚಂದ್ರು, ಟೈಟಲ್ ರೋಲ್‌ದಲ್ಲಿ ಕು.ಯಶಿಕಾ, ಗೋವಿಂದೇಗೌಡ, ಅಶ್ವಿನ್‌ಹಾಸನ್, ಕಾಮಿಡಿ ಕಿಲಾಡಿಗಳು ಖ್ಯಾತಿಯ ದಿವ್ಯಾ ಅಂಚನ್, ಬೆನಕಾ ನಂಜಪ್ಪ, ರೋಹಿತ್‌ರಾಘವೇಂದ್ರ, ಸೌಜನ್ಯಸುನಿಲ್, ಎಂ.ಜೆ.ರಂಗಸ್ವಾಮಿ ಮುಂತಾದವರು ನಟಿಸಿದ್ದಾರೆ. ಛಾಯಾಗ್ರಹಣ ಎಂ.ಬಿ.ಹಳ್ಳಿಕಟ್ಟಿ, ಸಂಕಲನ ಸುಜಿತ್‌ನಾಯಕ್, ವಾದ್ಯ ಸಂಯೋಜನೆ ಕೆ.ಎಂ.ಇಂದ್ರ, ನೃತ್ಯ ಕಂಬಿರಾಜ್, ಕಾರ್ಯಕಾರಿ ನಿರ್ಮಾಪಕ ರಾಘವ್‌ಸೂರ್ಯ-ದರ್ಶನ್‌ಗೌಡ.

       ರಾಘವೇಂದ್ರ ರೆಡ್ಡಿ ಅವರು ಕನ್ನಡದ ಮೇಲಿನ ಅಭಿಮಾನದಿಂದ ಬಂಡವಾಳ ಹೂಡಿದ್ದಾರೆ. "ನನ್ನದೆ ಆಡಿಯೋ ಕಂಪೆನಿ ’ಮ್ಯೂಸಿಕ್ ಬಜಾರ್’ನಿಂದ ಹಾಡುಗಳು ಹೊರಬರುತ್ತಿದೆ. ಇಲ್ಲಿಯತನಕ ಟ್ರಯಲ್ ಆಗಿದ್ದು, ಇನ್ನು ಮುಂದೆ ಚಿತ್ರದ ಹಾಡುಗಳು, ಆಲ್ಬಂ ಗೀತೆಗಳು ಬರಲಿದೆ. ನಾನು ವ್ಯಾಪರಸ್ಥನಲ್ಲ. ಕಲಾವಿದ. ಕಲಾವಿದನ ಕಂಪೆನಿ ಹೇಗಿರುತ್ತೆ. ಪ್ರೀತಿ ಹೆಚ್ಚು ಇರುತ್ತೆ. ಕಲೆಗೆ ಜಾಸ್ತಿ ಪ್ರೋತ್ಸಾಹ ಕೊಡುತ್ತೇನೆ" ಎಂದು ಡಾ.ವಿ.ನಾಗೇಂದ್ರಪ್ರಸಾದ್ ಹೇಳಿಕೊಂಡರು.

        ನಿರ್ದೇಶಕರು ಮಾತನಾಡಿ "ಭಾರತಿ ಎನ್ನುವ ಏಳನೇ ತರಗತಿ ವಿದ್ಯಾರ್ಥಿಯೊಬ್ಬಳು ತನ್ನ ಊರಿನವರೆಲ್ಲರನ್ನು ಸಾಕ್ಷರನ್ನಾಗಿ ಮಾಡಬೇಕೆಂದು ಕನಸು ಕಾಣುತ್ತಾಳೆ. ಈ ಹಾದಿಯಲ್ಲಿ ಆಕೆ ಎದುರಿಸತಕ್ಕಂತ ನೋವು, ಅವಮಾನ ಎಲ್ಲವು ಆಗಿ, ಕೊನೆಗೆ ಹೇಗೆ ಗೆದ್ದು ನಿಲ್ಲುತ್ತಾಳೆ ಎಂಬುದು ಒಂದು ಎಳೆಯ ಸಾರಾಂಶವಾಗಿದೆ. ಇಲ್ಲಿಯವರೆಗೂ ಮೂವತ್ತ ನಾಲ್ಕು ದಿನಗಳ ಚಿತ್ರೀಕರಣ ನಡೆಸಲಾಗಿದೆ. ಹಾಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಜಿಲ್ಲಾದಿಕಾರಿಯಾಗಿ ಕಾಣಿಸಿಕೊಳ್ಳಲಿದ್ದು, ಅವರ ಭಾಗದ ಮತ್ತು ಕನ್ನಡಿಗ ಹಾಡಿನ ಶೂಟಿಂಗ್ ಬಾಕಿ ಇದೆ. ಒಟ್ಟು ಹತ್ತು ಗೀತೆಗಳು ಇರಲಿದ್ದು, ಎಲ್ಲವನ್ನು ಚಿತ್ರದಲ್ಲಿ ಉಪಯೋಗಿಸಿಕೊಳ್ಳಲಾಗಿದೆ" ಎಂದು ಎಂ.ಎಲ್.ಪ್ರಸನ್ನ ಮಾಹಿತಿ ನೀಡಿದರು.

      ವೆಂಕಟ್‌ಗೌಡ ನಿರ್ಮಾಪಕರ ಕಾರ್ಯವೈಖರಿಯನ್ನು ಮೆಚ್ಚಿಕೊಂಡು, ಇಂತವರು ಚಿತ್ರರಂಗಕ್ಕೆ ಅಗತ್ಯವಾಗಿದೆ. ನವೆಂಬರ್ ತಿಂಗಳಲ್ಲಿ ತೆರೆಗೆ ತರಲು ಯೋಜನೆ ಹಾಕಿಕೊಂಡಿದ್ದೇವೆ ಎಂದರು.









Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್