LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಭಾರತಿ ಟೀಚರ್ ಏಳನೇ ತರಗತಿ  ಹಾಡುಗಳು ಟ್ರೇಲರ್...



     'ಭಾರತಿ ಟೀಚರ್ ಏಳನೇ ತರಗತಿ' ಚಿತ್ರದ ಬಾ ಬಾ ಕನ್ನಡಿಗ, ಎಳೆ ಜೀವ ಹಾಡುಗಳು ಮತ್ತು ಟ್ರೇಲರ್ ಬಿಡುಗಡೆ ಸಮಾರಂಭವು ಅದ್ದೂರಿಯಾಗಿ ನಡೆಯಿತು.

     ಕೆಎಸ್‌ಎಸ್‌ಎ ಸಂಘದ ಅಧ್ಯಕ್ಷ ಎನ್.ಸಿ.ಪ್ರಕಾಶ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ತಂಡಕ್ಕೆ ಶುಭ ಹಾರೈಸಿದರು.

ಆನಂತರ ವೀರಲೋಕ ಪ್ರಕಾಶನ ಸಂಸ್ಥೆ ಜಯನಗರದ ಶಾಲಿನಿ ಮೈದಾನದಲ್ಲಿ ನಡೆಸುತ್ತಿದ್ದ ಪುಸ್ತಕ ಸಂತೆಯ ವೇದಿಕೆಯಲ್ಲಿ ಶಿಕ್ಷಣ ಮಂತ್ರಿಗಳಾದ ಮಧುಬಂಗಾರಪ್ಪನವರ ಹಾರೈಕೆಗಳೊಂದಿಗೆ ಲೋಕಾರ್ಪಣೆಗೊಂಡಿತು. ಸಚಿವರು ಆಸಕ್ತಿಯಿಂದ ಕಥೆ ಕೇಳಿ ಶಿಕ್ಷಣದ ಪ್ರಾಮುಖ್ಯತೆ ಬಗ್ಗೆ ಇರುವುದರಿಂದ ಚಿತ್ರವನ್ನು ನೋಡಲೇಬೇಕು ಎಂಬ ಆಶಯವನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ನಿರ್ದೇಶಕ ರಾಜೇಂದ್ರಸಿಂಗ್‌ಬಾಬು ಇತರರು ಹಾಜರಿದ್ದರು.

      ಸಿರಗುಪ್ಪ ಮೂಲದ ಉದ್ಯಮಿ ರಾಘವೇಂದ್ರ ರೆಡ್ಡಿ ಅವರು ಪೂಜ್ಯಾಯ ಫಿಲಂಸ್ ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ. ಕಥೆ,ಚಿತ್ರಕಥೆ,ಸಂಭಾಷಣೆ,

ಸಾಹಿತ್ಯ, ಸಂಗೀತ ಮತ್ತು ನಿರ್ದೇಶನವನ್ನು ಎಂ.ಎಲ್.ಪ್ರಸನ್ನ ನಿರ್ವಹಿಸಿದ್ದಾರೆ. ಕ್ರಿಷಿ ಸಂಸ್ಥೆಯ ವೆಂಕಟ್‌ಗೌಡ ಕ್ರಿಯೇಟೀವ್ ಹೆಡ್ ಆಗಿರುತ್ತಾರೆ.

     ಕನ್ನಡ ಪರ ಹೋರಾಟಗಾರನಾಗಿ ರೋಹಿತ್ ರಾಘವೇಂದ್ರ ನಾಯಕ. ಶಿಕ್ಷಕರಾಗಿ ಸಿಹಿಕಹಿಚಂದ್ರು, ಟೈಟಲ್ ರೋಲ್‌ದಲ್ಲಿ ಕು.ಯಶಿಕಾ, ಕಾಮಿಡಿ ಕಿಲಾಡಿಗಳು ಖ್ಯಾತಿಯ ಗೋವಿಂದೇಗೌಡ ಮೊದಲಬಾರಿ ಖಳನಾಗಿ ಕಾಣಿಸಿಕೊಂಡರೆ, ಇನ್ಸ್‌ಪೆಕ್ಟರ್ ಆಗಿ ಅಶ್ವಿನ್‌ಹಾಸನ್. ಉಳಿದಂತೆ ದಿವ್ಯಾ ಅಂಚನ್, ಬೆನಕಾ ನಂಜಪ್ಪ, ಸೌಜನ್ಯಸುನಿಲ್, ಎಂ.ಜೆ.ರಂಗಸ್ವಾಮಿ ಮುಂತಾದವರು ನಟಿಸಿದ್ದಾರೆ. ಛಾಯಾಗ್ರಹಣ ಎಂ.ಬಿ.ಹಳ್ಳಿಕಟ್ಟಿ, ಸಂಕಲನ ಸುಜಿತ್‌ನಾಯಕ್, ವಾದ್ಯ ಸಂಯೋಜನೆ ಕೆ.ಎಂ.ಇಂದ್ರ, ನೃತ್ಯ ಕಂಬಿರಾಜ್, ಕಾರ್ಯಕಾರಿ ನಿರ್ಮಾಪಕರು ರಾಘವ್‌ಸೂರ್ಯ-ದರ್ಶನ್‌ಗೌಡ.

        ನಿರ್ದೇಶಕರು ಮಾತನಾಡಿ "ಭಾರತಿ ಎನ್ನುವ ಏಳನೇ ತರಗತಿ ವಿದ್ಯಾರ್ಥಿಯೊಬ್ಬಳು ಟೀಚರ್ ಕನಸನ್ನು ಹೇಗೆ ನನಸು ಮಾಡುತ್ತಾಳೆ. ಇದು ಮುಂದಕ್ಕೆ ಕರ್ನಾಟಕದಲ್ಲಿ ಕನ್ನಡ ಹಾಗೂ ಶಿಕ್ಷಣ ಎಷ್ಟು ಮುಖ್ಯವಾಗುತ್ತೆ. ಜತೆಗೆ  ಆ ವಿದ್ಯಾರ್ಥಿನಿ  ತನ್ನ ಹಾಗೆ ಲಕ್ಷಾಂತರ ಮಕ್ಕಳು ಕನಿಷ್ಟ ಹತ್ತು ಜನರಿಗೆ ಕನ್ನಡ ಕಲಿಸಬೇಕೆನ್ನುವುದಕ್ಕೊಂದು ಯೋಜನೆ ಬೇಕು. ಇವರೆಡು ಅಂಶಗಳನ್ನು ಕ್ಲೈಮಾಕ್ಸ್‌ದಲ್ಲಿ ಹೇಳಲಾಗಿದೆ. ಚಿತ್ರವು ಕನ್ನಡ ಕಾಳಜಿಯ ಕಥೆಯಾಗಿದೆ. ಹಾಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹಾಗೂ ಆದಿತ್ಯ ಕೂಡ ವಿಶೇಷ ಪಾತ್ರದಲ್ಲಿ ಅಭಿನಯಿಸಲಿದ್ದಾರೆ. ಇವರೆಡು ವಿಷಯಗಳನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು" ಎಂದು ಎಂ.ಎಲ್.ಪ್ರಸನ್ನ ಮಾಹಿತಿ ನೀಡಿದರು.

ವೆಂಕಟ್‌ಗೌಡ ಸಾರಥ್ಯದಲ್ಲಿ ಚಿತ್ರವು ಮುಂದಿನ ತಿಂಗಳು ತೆರೆಗೆ ಬರುವ ಸಾಧ್ಯತೆ ಇದೆ.


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್