LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ವೈಯಕ್ತಿಕ ಶೌಚಾಲಯ ಹೊಂದಲು ಫಲಾನುಭವಿಗಳನ್ನು ಪ್ರೋತ್ಸಾಹಿಸಿ: ಜಿ.ಪಂ. ಸಿಇಓ ಭುವನೇಶ ಪಾಟೀಲ

ಧಾರವಾಡ : ಗ್ರಾಮೀಣ ಭಾಗದಲ್ಲಿ ಸ್ವಚ್ಛ ಭಾರತ ಮಿಷನ್ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಗ್ರಾಮ ಪಂಚಾಯತ ಅಧಿಕಾರಿಗಳು ಶ್ರಮಿಸಬೇಕು. ವೈಯಕ್ತಿಕ ಶೌಚಾಲಯಗಳನ್ನು ಹೊಂದಲು ಫಲಾನುಭವಿಗಳಿಗೆ ಪ್ರೋತ್ಸಾಹಿಸಬೇಕೆಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಹೇಳಿದರು.


 ಧಾರವಾಡ ತಾಲ್ಲೂಕು ಪಂಚಾಯತ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವಿವಿಧ ಯೋಜನೆಗಳ ಕುರಿತು ಧಾರವಾಡ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಜರುಗಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.


ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ, ವಸತಿ ಯೋಜನೆ, ತೆರಿಗೆ ವಸೂಲಾತಿ, ಕೂಸಿನ ಮನೆ ಮತ್ತು ಶುದ್ಧ ಕುಡಿಯುವ ನೀರಿನ ಘಟಕಗಳ ಕಾರ್ಯನಿರ್ವಹಣೆಯ ಕುರಿತು ಪ್ರಗತಿ ಪರಿಶೀಲನೆ ಮಾಡಿದರು. ಸಮರ್ಪಕವಾಗಿ ಮತ್ತು ಗುರಿಗೆ ಅನುಗುಣವಾಗಿ ಪ್ರಗತಿ ಸಾಧಿಸಲು ಅವರು ಸೂಚಿಸಿದರು.


ಸ್ವಚ್ಚ ಭಾರತ ಮಿಷನ್ (ಗ್ರಾ) ಯೋಜನೆಯಡಿ ವೈಯಕ್ತಿಕ ಶೌಚಾಲಯದ ನಿರ್ಮಾಣ ಕಾಮಗಾರಿಗಳನ್ನು ಪೂರ್ಣಗೊಳಿಸಲು ಅಗತ್ಯ ಕ್ರಮ ವಹಿಸಬೇಕು ಎಂದು ಅವರು ತಿಳಿಸಿದರು.


 ತಾಲ್ಲೂಕಿನಲ್ಲಿ ಗ್ರಂಥಾಲಯ ಉಪ ಕರ ವಸೂಲಾತಿ ಪ್ರಗತಿ ಕುಂಠಿತವಾಗಿದ್ದು, ಪ್ರತಿ ತಿಂಗಳು ಶೇ.10 ರಷ್ಟು ಗುರಿ ನಿಗದಿಪಡಿಸಿಕೊಂಡು ಪ್ರಗತಿ ಸಾಧಿಸಬೇಕು ಮತ್ತು ಐಪಿಜಿಆರ್‍ಎಸ್-ಇ-ಗ್ರಾಮಸ್ವರಾಜ್ ತಂತ್ರಾಂಶದಲ್ಲಿ ಅನುಮೋದಿತ ಕ್ರಿಯಾ ಯೋಜನೆಯನ್ನು ಅಳವಡಿಸಬೇಕು. ಅಗತ್ಯವಿರುವಲ್ಲಿ ಹೊಸ ಕೂಸಿನ ಮನೆ ಪ್ರಾರಂಭಿಸಲು ಪಿಡಿಒಗಳಿಗೆ ಅವರು ತಿಳಿಸಿದರು.


ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಗೆ ಸಂಬಂಧಿಸಿದಂತೆ 2025-26 ನೇ ಸಾಲಿನ ವಾರ್ಷಿಕ ಗುರಿಗೆ ಅನುಗುಣವಾಗಿ ಪ್ರಗತಿ ಸಾಧಿಸದೇ ಕನಿಷ್ಟ ಪ್ರಗತಿ ಸಾಧಿಸಿರುವ ಗ್ರಾಮ ಪಂಚಾಯತಿಗಳ ಪಂಚಾಯತ ಅಭಿವೃದ್ದಿ ಅಧಿಕಾರಿಗಳು ಈ ಬಗ್ಗೆ ಹೆಚ್ಚಿನ ಗಮನ ಹರಿಸಿ ಕೂಲಿಕಾರರಿಗೆ ಸ್ಥಳೀಯವಾಗಿ ಕೆಲಸ ಒದಗಿಸಿ ಪ್ರಗತಿ ಸಾಧಿಸಬೇಕು ಮತ್ತು ಮಹಿಳಾ ಭಾಗವಹಿಸುವಿಕೆ ಪ್ರಮಾಣವನ್ನು ಸರಕಾರದಿಂದ ನಿಗದಿಪಡಿಸಿದ ಶೇ.50 ರಷ್ಟು ಗುರಿ ಸಾಧಿಸಲು ಹಾಗೂ ಬೂದು ನೀರು ನಿರ್ವಹಣೆ ಕಾಮಗಾರಿಗಳ ಡಿಪಿಆರ್‍ಗಳನ್ನು ತಯಾರಿಸಿ ಸಲ್ಲಿಸಲು ಮತ್ತು ಜಿಲ್ಲೆಯಲ್ಲಿ ದಾಖಲಾಗಿರುವ ಸಾಮಾಜಿಕ ಲೆಕ್ಕ ಪರಿಶೋಧನಾ ಆಕ್ಷಪಣೆ ಮತ್ತು ವಸೂಲಾತಿ ಮಾಡಿ ಇತ್ಯರ್ಥ ಪಡಿಸಬೇಕು ಎಂದು ಜಿಲ್ಲಾ ಪಂಚಾಯತ ಸಿಇಓ ಅವರು ಹೇಳಿದರು.


ಸಭೆಯಲ್ಲಿ ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಗಂಗಾಧರ ಕಂದಕೂರ, ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಸಹಾಯಕ ನಿರ್ದೇಶಕ ಚಂದ್ರು ಪೂಜಾರ, ತಾಲೂಕಾ  ಯೋಜನಾಧಿಕಾರಿಗಳು, ತಾಲೂಕಾ ಲೆಕ್ಕಾಧಿಕಾರಿಗಳು, ಎಲ್ಲ ಗ್ರಾಮ ಪಂಚಾಯತಗಳ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ನರೇಗಾ ಅನುಷ್ಠಾನ ಕುರಿತು ಹಾಜರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್