LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಮೇ.೧೧ರಂದು ಬೃಹತ್ ಉದ್ಯೋಗ ಮೇಳ

ಸಿಂದಗಿ: ನಗರದ ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆ, ಸಾರಂಗಮಠದ ಅಂಗ ಸಂಸ್ಥೆಯಾದ ಜಿ.ಪಿ.ಪೋರವಾಲ ಕಲಾ, ವಾಣಿಜ್ಯ ಹಾಗೂ ವಿ.ವಿ.ಸಾಲಿಮಠ ವಿಜ್ಞಾನ ಮಹಾವಿದ್ಯಾಲಯದಲ್ಲಿ ಕಲಬುರ್ಗಿಯ ನಿರ್ಮಾಣ್ ಸಂಸ್ಥೆಯ ಸಹಯೋಗದಲ್ಲಿ ಮೇ.೧೧ರಂದು ಬೆಳಿಗ್ಗೆ ೧೦ ಗಂಟೆಯಿಂದ ಸಾಯಂಕಾಲ ೪ ಗಂಟೆಯವರೆಗೆ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಪ್ರಾಚಾರ್ಯ ಡಿ.ಎಂ.ಸರಶೆಟ್ಟಿ ತಿಳಸಿದ್ದಾರೆ.
ಉದ್ಯೋಗ ಮೇಳದಲ್ಲಿ ಟಾಟಾ, ಹೋಂಡಾ, ಟಿವಿಎಸ್, ಏಷಿಯನ್ ಪೇಂಟ್ಸ್, ಟೊಯೋಟಾ, ಆದಿತ್ಯ ಹೆಲ್ತ್‌ಕೇರ್, ಐಫೋನ್, ? ಹುಂಡೈ, ಲುಮ್ಯಾಕ್ಸ್, ಎಚ್.ಡಿ.ಎಫ್.ಸಿ ಬ್ಯಾಂಕ್, ಆರ್‌ಬಿಎಲ್ ಬ್ಯಾಂಕ್, ಐಸಿಐಸಿಐ ಬ್ಯಾಂಕ್ ಒಳಗೊಂಡಂತೆ ಅನೇಕ ಬೆಂಗಳೂರಿನ ಪ್ರತಿಷ್ಠಿತ ಹಾಗೂ ಇನ್ನುಳಿದ ೨೫ಕ್ಕಿಂತ ಅಧಿಕ ಕಂಪನಿಗಳು ಭಾಗವಹಿಸಲಿವೆ. ಬ್ಯಾಂಕಿಂಗ್, ಉತ್ಪಾದನೆ, ಆರೋಗ್ಯ, ವಾಹನೋದ್ಯಮ ಮತ್ತು ಸೇವಾ ಕ್ಷೇತ್ರಗಳಲ್ಲಿ ಒಟ್ಟು ೫ ಸಾವಿರಕ್ಕಿಂತ ಅಧಿಕ ಉದ್ಯೋಗಾವಕಾಶಗಳಿವೆ. ಕೆಲವು ಕಂಪನಿಗಳು ಸ್ಥಳದಲ್ಲಿಯೇ ಉದ್ಯೋಗ ನೇಮಕಾತಿ ಆದೇಶ ಪತ್ರವು ನೀಡಲಿವೆ. ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಭಾಗವಹಿಸಬಹುದು. ಅಭ್ಯರ್ಥಿಗಳು ಶೈಕ್ಷಣಿಕ ಅರ್ಹತೆಯ ದಾಖಲೆ, ಆಧಾರ ಕಾರ್ಡ್, ಇತ್ತೀಚಿನ ಭಾವಚಿತ್ರ, ವೈಯಕ್ತಿಕ ಪರಿಚಯದೊಂದಿಗೆ ಪ್ರಚಾರ ಭಿತ್ತಿಪತ್ರದಲ್ಲಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಅಥವಾ ಸ್ಥಳದಲ್ಲಿ ನೋಂದಣಿ ಮಾಡಬಹುದು ಎಂದು ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಐಕ್ಯೂಎಸಿ ಸಂಯೋಜಕ  ಬಿ.ಆರ್. ಮಹಾಜನಶೆಟ್ಟಿ, ೯೯೦೧೩೭೯೩೦೯, ಸಂಯೋಜಕರು ಪ್ರಕಾಶ ತೇಜು ೯೮೪೪೯೯೪೯೫೪, ೯೮೪೫೬೧೦೧೮೩ ಇವರನ್ನು ಸಂಪರ್ಕಿಸಲು ಮಾಹಿತಿ ನೀಡಿದ್ದಾರೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್