LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಭೀಮ್​ ಸೇನಾ ಮುಖ್ಯಸ್ಥ ಸತ್ಪಾಲ್ ಗೆ ಬಿಷ್ಣೋಯಿ ಜೀವ ಬೆದರಿಕೆ


ಗುರುಗ್ರಾಮ್​: ವಿದೇಶದಿಂದಲೇ ಭೀಮ್​ ಸೇನಾ ಮುಖ್ಯಸ್ಥ ಸತ್ಪಾಲ್​ ತನ್ವಾರ್ ಎಂಬವರಿಗೆ ಜೀವ ಬೆದರಿಕೆ ಹಾಕಿದ ಆರೋಪದಡಿ ಗ್ಯಾಂಗ್​ಸ್ಟರ್​ ಲಾರೆನ್ಸ್​ ಬಿಷ್ಣೋಯಿ ಸಹೋದರ ಅನ್ಮೊಲ್​ ಬಿಷ್ಣೋಯಿ ವಿರುದ್ಧ ಗುರುಗ್ರಾಮ್​ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಜಿಂಬಾಬ್ವೆ ಮತ್ತು ಕೀನ್ಯಾ ದೇಶಗಳ ಸಂಖ್ಯೆಗಳನ್ನು ಬಳಸಿಕೊಂಡು ಯುಎಸ್ಎ ಮತ್ತು ಕೆನಡಾದಿಂದ ಬೆದರಿಕೆ ಕರೆಗಳನ್ನು ಮಾಡುತ್ತಿದ್ದಾನೆ ಎಂದು ಆರೋಪಿಸಲಾಗಿದೆ. ಈ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ತನಿಖೆಗಾಗಿ ಎಸ್‌ಟಿಎಫ್, ಕ್ರೈಂ ಮತ್ತು ಸೈಬರ್ ಕ್ರೈಂ ಘಟಕಗಳ ಸದಸ್ಯರ ತಂಡ ರಚಿಸಿದ್ದಾರೆ. ಅನ್ಮೋಲ್​ ಬಿಷ್ಣೋಯಿಯನ್ನು ಭಾರತಕ್ಕೆ ಕರೆತರಲು ಪ್ರಯತ್ನಿಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.


ಅಕ್ಟೋಬರ್​​ 30ರಂದು ಸತ್ಪಾಲ್ ತನ್ವಾರ್​​ಗೆ ಕರೆ ಮಾಡಿ, ಆತನನ್ನು ತುಂಡು ತುಂಡಾಗಿ ಕತ್ತರಿಸುವುದಾಗಿ ಬೆದರಿಕೆ ಹಾಕಿದ್ದಾರೆ. 6 ನಿಮಿಷ 41 ಸೆಕೆಂಡ್​ಗಳ ಕಾಲ ಕರೆ ಮಾಡಲಾಗಿದ್ದು, ಮೊದಲಿಗೆ ತನ್ವರ್ ಅವರ ಮಹಿಳಾ ಸೆಕ್ರೆಟರಿ ಫೋನ್​ ಸ್ವೀಕರಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.






ಸೆಕ್ಟರ್​ 37 ಪೊಲೀಸ್​ ಠಾಣೆಯಲ್ಲಿ ಅನ್ಮೋಲ್​ ಬಿಷ್ಣೋಯಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಅಡಿ ಪ್ರಕರಣ ದಾಖಲಿಸಲಾಗಿದೆ.


ಅಮೆರಿಕದಲ್ಲಿ ತಲೆಮರೆಸಿಕೊಂಡಿರುವ ಅನ್ಮೋಲ್​ ಬಿಷ್ಣೋಯಿ ಸುಳಿವು ನೀಡಿದವರಿಗೆ/ಆತನನ್ನು ಸೆರೆ ಹಿಡಿಯಲು ಸಹಾಯ ಮಾಡಿದವರಿಗೆ 10 ಲಕ್ಷ ರೂ ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ ಘೋಷಿಸಿದೆ.(ಪಿಟಿಐ)



Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ