LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ವಿಡಿಯೋದಲ್ಲಿ ಹಲವರ ವಿರುದ್ಧ ಆರೋಪಿಸಿ ಬಿಜೆಪಿ ಕಾರ್ಯಕರ್ತ ಸೂಸೈಡ್‌

ಅನೇಕಲ್, ಏಪ್ರಿಲ್ 18: ಬೆಂಗಳೂರಿನ ನಾಗವಾರದಲ್ಲಿ ಬಿಜೆಪಿ ಕಾರ್ಯಕರ್ತ  ವಿನಯ್ ಸೋಮಯ್ಯ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ನೆನಪು ಹಸಿಯಾಗಿರುವಾಗಲೇ ಬೆಂಗಳೂರು ನಗರ ಜಿಲ್ಲೆ ಆನೇಕಲ್ ಟ್ಟಣದ ಎಸ್.ವಿ.ಎಂ ಸ್ಕೂಲ್ ಬಳಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ಗೌಡ ಬೇಲೂರು (35) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಫೇಸ್​​ಬುಕ್ ವಿಡಿಯೋ ಮಾಡಿ ಹಲವರ ಹೆಸರುಗಳನ್ನು ಪ್ರಸ್ತಾಪಿಸಿದ ಅವರು, ಆ ನಂತರ ಮರಕ್ಕೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ತಮ್ಮ ಸಾವಿಗೆ ಇವರೇ ಕಾರಣ ಎಂದು ಹಲವರನ್ನು ಹೆಸರಿಸಿರುವ ಅವರು, ಆ ಪೈಕಿ ಕಿರಣ್ ಎಂಬಾತನ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ಸಮಂದೂರ್ ಕಿರಣ್, ಗೋಕುಲ್ ಫ್ಯಾಷನ್ ಹರೀಶ್​​, ಭಾಸ್ಕರ್, ನಾರಾಯಣಪ್ಪ, ದೊಡ್ಡಹಾಗಡೆ ಮಧುಗೌಡ, ಸರವಣ ಇವರೇ ನನ್ನ ಸಾವಿಗೆ ಕಾರಣ. ಯಾರನ್ನು ಬಿಟ್ಟರೂ ಕಿರಣ್​​​​​ನನ್ನು ದಯವಿಟ್ಟು ಬಿಡಬೇಡಿ. ಕಿರಣ್ ಹಲವು ಹೆಣ್ಣು ಮಕ್ಕಳಿಗೆ ಫೋನ್ ಮಾಡಿ ಟಾರ್ಚರ್ ಕೊಡುತ್ತಿದ್ದಾನೆ. ಕಿರಣ್​​ ಮಾಡಿರುವ ಇಂತಹ ಕೆಲಸಗಳೆಲ್ಲಾ ನನ್ನ ಮೇಲೆ ಬಂದಿವೆ. ಹಣದ ವಿಚಾರವಾಗಿ ಮಾತುಕತೆಗೆ ಕರೆಸಿಕೊಂಡು ಹಲ್ಲೆ ನಡೆಸಿದ್ದಾರೆ ಎಂದು ಫೇಸ್​​ಬುಕ್ ವಿಡಿಯೋದಲ್ಲಿ ಪ್ರವೀಣ್ ಗೌಡ ಆರೋಪಿಸಿದ್ದಾರೆ.

ಆನೇಕಲ್ ಬಿಜೆಪಿ ಮಂಡಲ ಅಧ್ಯಕ್ಷ ಮುನಿರಾಜುಗೌಡ ವಿರುದ್ಧವೂ ಆರೋಪ ಮಾಡಲಾಗಿದೆ. ಬಿಜೆಪಿ ಮುಖಂಡ ನಾಯನಹಳ್ಳಿ ಮುನಿರಾಜು ಮನೆಗೆ ಕರೆದಿದ್ದರು. ಆ ಸಂದರ್ಭದಲ್ಲಿ ಆನೇಕಲ್ ಕೌನ್ಸಿಲರ್ ಭಾಗ್ಯಮ್ಮ ಹಾಗೂ ಆಕೆಯ ಪತಿ ಶ್ರೀನಿವಾಸ್ ಇದ್ದರು. ಏಕಾಏಕಿ ಹತ್ತಾರು ಮಂದಿಯನ್ನು ಕರೆಸಿಕೊಂಡಿದ್ದ ಭಾಗ್ಯಮ್ಮ ಶ್ರೀನಿವಾಸ್, ಮೊಬೈಲ್ ಕಿತ್ತುಕೊಂಡು 2 ಗಂಟೆಗಳ ಕಾಲ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಮನಸೋ ಇಚ್ಛೆ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆಂದು ಪ್ರವೀಣ್ ಆರೋಪಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್