LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಹೆಜ್ಜೆ ಇಟ್ಟಲ್ಲೆಲ್ಲ ಪ್ರಶ್ನೆ ಕೇಳುತ್ತೇವೆ: ಡಿಸಿಎಂ ಸವಾಲ್

“ಬಿಜೆಪಿ ಹಾಗೂ ಜೆಡಿಎಸ್‌ ಒಗ್ಗೂಡಿ ಪಾದಯಾತ್ರೆ ನಡೆಸಲು ತೀರ್ಮಾನಿಸಿವೆ. ಇಷ್ಟು ದಿನ ಪಾದಯಾತ್ರೆಗೆ ಬೆಂಬಲ ನೀಡಲ್ಲ ಎಂದು ಜೆಡಿಎಸ್‌ ಹೇಳುತ್ತಿತ್ತು. ಈಗ ಎರಡೂ ಪಕ್ಷಗಳು ಒಗ್ಗೂಡಿ ಪಾದಯಾತ್ರೆ ಮಾಡುತ್ತಿವೆ. ಅವರ ಪಾದಯಾತ್ರೆಗೆ ನಮ್ಮ ಅಭ್ಯಂತರ ಇಲ್ಲ. ಆದರೆ, ನಗರದಲ್ಲಿ ಟ್ರಾಫಿಕ್‌ ಜಾಮ್‌ ದೃಷ್ಟಿಯಿಂದ ಅವರು ಪಾದಯಾತ್ರೆ ಮಾಡುವಂತಿಲ್ಲ. ಇನ್ನು, ಬಿಜೆಪಿ ಹಾಗೂ ಜೆಡಿಎಸ್‌ ಹಗರಣಗಳ ಕುರಿತು ನಾಳೆಯಿಂದ ನಮ್ಮ ಸಚಿವರು, ಶಾಸಕರು ಪ್ರಶ್ನೆ ಕೇಳುತ್ತಾರೆ. ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಹೆಜ್ಜೆ ಇಟ್ಟಲ್ಲೆಲ್ಲ ಪ್ರಶ್ನೆ ಕೇಳುತ್ತೇವೆ. ಅವುಗಳಿಗೆ ಅವರು ಉತ್ತರಿಸಿಯೇ ಮುಂದೆ ಹೋಗಬೇಕು” ಎಂದು ಡಿಸಿಎಂ ಹೇಳಿದರು.

“ಬಿಜೆಪಿ ಹಾಗೂ ಜೆಡಿಎಸ್‌ ವಿರುದ್ಧ ಪ್ರಶ್ನೆ ಕೇಳುವ ಅಭಿಯಾನವನ್ನು ಶುಕ್ರವಾರದಿಂದಲೇ (ಆಗಸ್ಟ್‌ 2) ಆರಂಭಿಸುತ್ತೇವೆ. ನಾಳೆ ಬೆಳಗ್ಗೆ 11 ಗಂಟೆಗೆ ಬಿಡದಿಯಲ್ಲಿ ಸಭೆ ಮಾಡುವ ಮೂಲಕ ಪ್ರಶ್ನೆಗಳನ್ನು ಕೇಳುತ್ತೇವೆ. ಇನ್ನು ಆಗಸ್ಟ್‌ 3ರಂದು ರಾಮನಗರ, 4ರಂದು ಚನ್ನಪಟ್ಟಣ, 5ರಂದು ಮದ್ದೂರು, 6ಕ್ಕೆ ಮಂಡ್ಯ, 7 ಹಾಗೂ 9ರಂದು ಮೈಸೂರಿನಲ್ಲಿ ಸಭೆ ನಡೆಸಿ, ಬಿಜೆಪಿ ಹಾಗೂ ಜೆಡಿಎಸ್‌ ನಾಯಕರಿಗೆ ಅವರ ಹಗರಣಗಳ ಕುರಿತು ಪ್ರಶ್ನೆ ಕೇಳುತ್ತೇವೆ. ಅವುಗಳಿಗೆ ಅವರು ಉತ್ತರಿಸಬೇಕು” ಎಂದು ತಿಳಿಸಿದರು.

“ಬಿಜೆಪಿ ಅಧಿಕಾರದಲ್ಲಿದ್ದಾಗ ಏನೆಲ್ಲ ಹಗರಣ ಮಾಡಿದರು ಎಂಬುದರ ಕುರಿತು ಪ್ರತಿಯೊಂದು ಸಭೆಯಲ್ಲೂ ಪ್ರಶ್ನೆಗಳನ್ನು ಕೇಳುತ್ತೇವೆ. ಅವರ ಹಗರಣಗಳ ಕುರಿತು ದಾಖಲೆಗಳನ್ನು ಬಿಡುಗಡೆ ಮಾಡುತ್ತೇವೆ. ಪ್ರತಿಯೊಂದು ಸಭೆಯಲ್ಲೂ ಕಾಂಗ್ರೆಸ್‌ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ನಮ್ಮ ಪ್ರತಿ ಪ್ರಶ್ನೆಗಳಿಗೆ ಅವರು ಉತ್ತರಿಸಿಯೇ ಮುಂದೆ ಹೆಜ್ಜೆ ಇಡಬೇಕು. ಬಿಜೆಪಿಯವರು ಏನು ಸತ್ಯ ಹರಿಶ್ಚಂದ್ರನ ಮೊಮ್ಮಕ್ಕಳಾ” ಎಂದು ಡಿ.ಕೆ.ಶಿವಕುಮಾರ್‌ ಪ್ರಶ್ನಿಸಿದರು.

ಪಾದಯಾತ್ರೆ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾಹಿತಿ ನೀಡಿದ್ದಾರೆ. “ಆಗಸ್ಟ್‌ 3ರ ಶನಿವಾರ ಬೆಳಗ್ಗೆ 8.30ಕ್ಕೆ ನೈಸ್ ರೋಡ್ ಜಂಕ್ಷನ್‌ನಿಂದ ಪಾದಯಾತ್ರೆ ಪ್ರಾರಂಭ ಆಗುತ್ತದೆ. ರಾಜ್ಯದ ಎಲ್ಲ ಬಿಜೆಪಿ ಹಾಗೂ ಜೆಡಿಎಸ್ ಸಂಸದರು, ಶಾಸಕರು ಇರುತ್ತಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ. ಕುಮಾರಸ್ವಾಮಿ ಅವರು ಕೂಡ ಬಂದು ಕಾರ್ಯಕ್ರಮ ಉದ್ಘಾಟನೆ ಮಾಡುತ್ತಾರೆ. ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಂದೋಲನ ಮಾಡುತ್ತಿದ್ದೇವೆ. ಇದನ್ನು ಯಶಸ್ವಿಗೊಳಿಸುತ್ತೇವೆ” ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್