LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ನೇಹಾ ಕೊಲೆ ಖಂಡಿಸಿ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ

ಬೆಂಗಳೂರು, ಏಪ್ರಿಲ್ 22: ನೇಹಾ ಕೊಲೆ ಪ್ರಕರಣದ ಪ್ರತಿಭಟನೆಯ ಕಿಚ್ಚು ದಿನದಿಂದ ದಿನಕ್ಕೆ ಭುಗಿಲೇಳುತ್ತಲೇ ಇದೆ. ಇದೀಗ ರಾಜ್ಯಾದ್ಯಂತ ಪ್ರತಿಭಟನೆಯ ಕಿಚ್ಚು ವ್ಯಾಪಿಸಿದ್ದು, ಹತ್ಯೆ ಖಂಡಿಸಿ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರೂ ಸಹ ಪ್ರತಿಭಟನೆ ಮುಂದುವರಿಸಿದ್ದಾರೆ.

ಹುಬ್ಬಳ್ಳಿಯಲ್ಲಂತೂ ಬಿಜೆಪಿ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ಭಾವಚಿತ್ರ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಷ್ಟೇ ಅಲ್ಲದೆ, ‘ಸಿದ್ರಾಮುಲ್ಲಾಖಾನ್, ಡಿಕೆ ಬ್ರದರ್ಸ್​ಗೆ ಧಿಕ್ಕಾರ’ ಎಂದು ಘೋಷಣೆ ಕೂಗಿದ್ದಾರೆ.

ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಭಾರೀ ಪ್ರತಿಭಟನೆ ನಡೆಸಿದರು. ಟೈರ್​​ಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸಿದ್ರಾಮುಲ್ಲಾಖನ್, ಡಿಕೆ ಬ್ರದರ್ಸ್​ಗೆ ಧಿಕ್ಕಾರ ಎಂದು ಘೋಷಣೆ ಕೂಗಿದರು. ಇಷ್ಟೇ ಅಲ್ಲ, ರಸ್ತೆ ಬಂದ್​ ಮಾಡಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದರು.

ಹುಬ್ಬಳ್ಳಿಯ ಹಳೇ ಹುಬ್ಬಳ್ಳಿ ವೃತ್ತದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಟೈರ್​​ಗೆ ಬೆಂಕಿ ಹಚ್ಚಿ ಫಯಾಜ್​ ಫೋಟೋ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು. ಇಷ್ಟೇ ಅಲ್ಲ, ಮಹಿಳಾ ಕಾರ್ಯಕರ್ತರು ಆರೋಪಿ ಫಯಾಜ್ ಫೋಟೋಗೆ ಚಪ್ಪಲಿಯಿಂದ ಹೊಡೆದು ಸಿಟ್ಟು ತೀರಿಸಿಕೊಂಡರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್