LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಖಾಸಗಿ ಹೋಟೆಲ್​​ಗೆ ಬಾಂಬ್ ಬೆದರಿಕೆ ಪತ್ರ: ಪೊಲೀಸರಿಂದ ಪರಿಶೀಲನೆ

ಬೆಂಗಳೂರು, ಏಪ್ರಿಲ್​ 23: ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬಾಂಬ್​ ಸ್ಪೋಟ ಪ್ರಕರಣ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿತ್ತು. ಇದೀಗ ನಗರದ ಖಾಸಗಿ ಹೋಟೆಲ್​​ಗೆ ಬಾಂಬ್ ಬೆದರಿಕೆ ಪತ್ರ ರವಾನಿಸಲಾಗಿದೆ. ಪೋಸ್ಟ್ ಮೂಲಕ ಹೋಟೆಲ್​ಗೆ ಬಾಂಬ್​ ಬೆದರಿಕೆ ಪತ್ರ ರವಾನೆ ಮಾಡಿದ್ದು, ಖಾಸಗಿ ಹೋಟೆಲ್​ನಲ್ಲಿದ್ದ  ಗ್ರಾಹಕರನ್ನು ಹೊರಕಳಿಸಿ ಜಾಲಹಳ್ಳಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮೂಲಗಳ ಪ್ರಕಾರ, ಎಚ್‌ಎಂಟಿ ಮೈದಾನ ಬಳಿಯ ಕದಂಬ ಹೋಟೆಲ್ ಸುತ್ತಮುತ್ತ ಬಾಂಬ್ ಇರಿಸಲಾಗಿದೆ ಎಂದು ಜಾಲಹಳ್ಳಿ ಪೊಲೀಸ್ ಠಾಣೆಗೆ ಅನಾಮಧೇಯ ಪತ್ರ ಬಂದಿದೆ.

ಕಳೆದ ಮಾರ್ಚ್ 1 ರಂದು ಬೆಂಗಳೂರಿನ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಮಟ ಮಟ ಮಧ್ಯಾಹ್ನ ಬಾಂಬ್ ಸ್ಫೋಟವಾಗಿತ್ತು. ಕಿಕ್ಕಿರಿದು ತುಂಬಿದ್ದ ಜನರ ಮಧ್ಯೆ ಗ್ರಾಹಕರಂತೆ ಬಂದು ಬಾಂಬ್ ಇಟ್ಟು ಹೋಗಿದ್ದ ಶಂಕಿತ ಬಾಂಬರ್ ಕೊನೆಗೂ ಲಾಕ್ ಆಗಿದ್ದ. ಬರೋಬ್ಬರಿ 43 ದಿನಗಳ ಬಳಿಕ ಪಶ್ಚಿಮ ಬಂಗಾಳದಲ್ಲಿ NIA ತೋಡಿದ ಖೆಡ್ಡಾಗೆ ಬಾಂಬರ್ ಬಿದ್ದಿದ್ದ. ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟಿದ್ದ ಶಂಕಿತ ಉಗ್ರ ಮುಸಾವಿರ್ ಹುಸೇನ್ ಮತ್ತು ಆತನಿಗೆ ಮಾರ್ಗದರ್ಶನ ನೀಡಿದ್ದ ಮತೀನ್ ತಾಹನನ್ನು ಬಂಧಿಸಲಾಗಿತ್ತು.

ತಮಿಳುನಾಡಿನ ಕಡಲೂರಿನಲ್ಲಿ ಶಂಕಿತರ ಬಾಂಬರ್ ಮುಸಾವಿರ್ ಮತ್ತು ಮತೀನ್ ಬಾಂಬ್ ತಯಾರಿಸಿದ್ದರು. ಅದೇ ಬಾಂಬ್ ಎತ್ತಿಕೊಂಡು ಬೆಂಗಳೂರಿನ ಕೆ.ಆರ್‌.ಪುರಂ ಮೂಲಕ ರಾಮೇಶ್ವರಂ ಕೆಫೆಗೆ ಮುಸಾವಿರ್ ಬಂದಿದ್ದನಂತೆ. ಮತೀನ್ ಮಾಡಿದ್ದ ಪ್ಲ್ಯಾನ್‌ನಂತೆಯೇ ಬಾಂಬ್ ಇಟ್ಟು ಹೋಗಿದ್ದ. ಬಾಂಬ್ ಇಟ್ಟ ಬಳಿಕ ಉಗ್ರ ಮುಸಾವಿರ್ ಪಶ್ಚಿಮಬಂಗಾಳಕ್ಕೆ ಪರಾರಿಯಾಗಿದ್ದ.

ಇನ್ನು ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಸಂಭವಿಸಿದ ಕೆಲವೇ ದಿನಗಳ ಬಳಿಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​ ಮತ್ತು ಗೃಹ ಸಚಿವ ಜಿ. ಪರಮೇಶ್ವರ್​ ಸೇರಿದಂತೆ ಸಂಪುಟದ ಇತರೆ ಸಚಿವರಿಗೆ ಬಾಂಬ್ ಬೆದರಿಕೆ ಇಮೇಲ್ ಕೂಡ ಬಂದಿತ್ತು.

[email protected]’ ಎಂಬ ಐಡಿಯಿಂದ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದು, 2.5 ಮಿಲಿಯನ್ ಡಾಲರ್‌ಗೆ ಬೇಡಿಕೆ ಇಡಲಾಗಿತ್ತು. ಸರ್ಕಾರ ಹಣ ಪಾವತಿಸಲು ವಿಫಲವಾದರೆ ರಾಜ್ಯದಲ್ಲಿ ಬಾಂಬ್ ಸ್ಫೋಟಿಸುವುದಾಗಿ ಇಮೇಲ್ ಬೆದರಿಕೆ ಹಾಕಲಾಗಿತ್ತು.

ಅಷ್ಟೇ ಅಲ್ಲದೆ ಇತ್ತೀಚೆಗೆ ಬೆಂಗಳೂರಿನ 15ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಕೂಡ ಬಾಂಬ್ ಬೆದರಿಕೆ ಹಾಕಲಾಗಿತ್ತು. ಬಸವೇಶ್ವರ ನಗರದ ಖಾಸಗಿ ಶಾಲೆಗಳಿಗೆ ಹಾಗೂ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಗೂ ಕಿಡಿಗೇಡಿಗಳು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್