LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಪುಸ್ತಕಗಳು ಸಂಸ್ಕೃತಿ ಜೀವಾಳ - ಡಾ.ಕಿಲಾರಿ. 

ಕೊಪ್ಪಳ: ಇಂದಿನ ಯುಗದಲ್ಲಿ ಯುವ ಪೀಳಿಗೆ ಪಾಶ್ಚಾತ್ಯ ಸಂಸ್ಕೃತಿಗೆ ಮಾರು ಹೋಗಿ ನಮ್ಮ ಸಂಸ್ಕೃತಿಯ ಹಿರಿಮೆಯನ್ನು ಮರೆಯುತ್ತಿದ್ದಾರೆ. ನಮ್ಮ ಸಂಸ್ಕೃತಿಯ ಪಳೆಯುಳಿಕೆಗಳು ಉಳಿಯಬೇಕಾದರೆ ಪುಸ್ತಕದ ಮಾರು ಹೋಗಬೇಕಾದ ಅನಿವಾರ್ಯತೆ ಇದೆ ಎಂದರು.   ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವೇತನ ಕನ್ನಡ ವಿಭಾಗದ ವತಿಯಿಂದ ಆಯೋಜಿಸಲಾಗಿದ್ದ ನನ್ನ ಮೆಚ್ಚಿನ ಪುಸ್ತಕ ಕಾರ್ಯಕ್ರಮ ಉದ್ಘಾಟಿಸಿ ಡಾ. ನಾಗಣ್ಣ ಕಿಲಾರಿ ಮಾತನಾಡಿದರು. ಮೊಬೈಲ್ ಬಿಡಿ ಪುಸ್ತಕ ಇಡಿ ಸರ್ಕಾರದ ಸದಾಶಯವಾಗಿದೆ. ವಿದ್ಯಾರ್ಥಿಗಳ ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಪುಸ್ತಕಗಳು ಸಹಕಾರಿಯಾಗಲಿವೆ ಎಂದರು.   ಕಾರ್ಯಕ್ರಮದ ಆಶಯ ನುಡಿಗಳನ್ನಾಡಿದ ಸಂಚಾಲಕ ಡಾ.ನಿಂಗಪ್ಪ ಕಂಬಳಿ ಅವರು ವಿದ್ಯಾರ್ಥಿಗಳ ಸರ್ವತೋಮುಖ ಏಳಿಗೆಗಾಗಿ ಪ್ರಾಧಿಕಾರವು ಹಾಕಿಕೊಂಡ ಮಹತ್ವಪೂರ್ಣ ಯೋಜನೆ ಇದಾಗಿದೆ ಪ್ರಾಧಿಕಾರದ ಸದಾಶಯ ಇಡೇರಬೇಕಾದರೆ ಮನಸ್ಸು ಕೆಡಿಸುವ ಹಲವು ವಸ್ತುಗಳನ್ನು ಮೆಚ್ಚುವುದನ್ನು ಬಿಟ್ಟು ಪುಸ್ತಕ ಮೆಚ್ಚುವ ಕೆಲಸವಾಗಬೇಕು. ಕನ್ನಡ ಸಾಹಿತ್ಯ ಸಮೃದ್ಧವಾಗಿದ್ದು ಬಹಳಷ್ಟು ಪುಸ್ತಕಗಳು ಬದುಕಿಗೆ ದಾರಿ ದೀಪವಾಗಲಿವೆ ಎಂದರು. ಕಾರ್ಯಕ್ರಮದ ವಿಶೇಷ ಉಪನ್ಯಾಸಕರಾಗಿ ಆಗಮಿಸಿದ ಡಾ.ತಿಪ್ಪೇರುದ್ರ ಸಂಡೂರು ಅವರು ಇಡೀ ಕನ್ನಡ ಸಾಹಿತ್ಯದ ಮಹತ್ವದ ಗ್ರಂಥಗಳನ್ನು ಪರಿಚಯಿಸುತ್ತಾ ನಾವೆಲ್ಲ ಪುಸ್ತಕಗಳನ್ನು ಸ್ನೇಹಿತರನ್ನಾಗಿ ಮಾಡಿಕೊಳ್ಳಬೇಕು ಇವತ್ತು ಹಲವಾರು ಮಹನೀಯರ ಬದುಕಿನ ಏರಿಳಿತಗಳನ್ನು ಗಮನಿಸಿದಾಗ ಅವರನ್ನು ಮಹತ್ವದ ಸ್ಥಾನ ದಲ್ಲಿರಿಸಿದ್ದು ಪುಸ್ತಕಗಳು ಎಂಬುದನ್ನು ನಾವು ಮರೆಯುವಂತಿಲ್ಲ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಬಸವರಾಜ ಟಿ ಎಚ್ ಅವರು ಇಂತಹ ಕಾರ್ಯಕ್ರಮಗಳು ಹೆಚ್ಚು ಹೆಚ್ಚು ಆಗುವ ಅನಿವಾರ್ಯತೆ ಇದೆ.ಯುವ ಪೀಳಿಗೆಗಳು ಒಳ್ಳೆಯ ವ್ಯಕ್ತಿತ್ವ ರೂಪಿಸಿಕೊಳ್ಳಬೇಕಾದರೆ ಇಂಥ ಕಾರ್ಯಕ್ರಮಗಳು ಸಹಕಾರಿಯಾಗಲಿವೆ. ವಿದ್ಯಾರ್ಥಿಗಳು ಇಂತಹ ಕಾರ್ಯಕ್ರಮದ ಸದುಪಯೋಗ ಪಡೆದು ಒಳ್ಳೆಯ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದರು. ಇದೇ ಸಂದರ್ಭದಲ್ಲಿ ನನ್ನ ಮೆಚ್ಚಿದ ಪುಸ್ತಕ ಅಭಿಪ್ರಾಯ ಮಂಡನಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ವಿಜಯಲಕ್ಷ್ಮಿ ದ್ವಿತೀಯ ಸ್ಥಾನ ಚೈತ್ರ ತೃತೀಯ ಸ್ಥಾನ ಸಿಂಧು ವಿದ್ಯಾರ್ಥಿನಿಯರಿಗೆ ಬಹುಮಾನ ನೀಡಲಾಯಿತು . ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ನೀಡಲಾಯಿತು. ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಚಿಗಟೇರಿ ಗಜೇಂದ್ರಗಡ ಇರಿ ಸ್ವಾಮಿ ಕವಿತಾ ಸೋಮನಾಥ ವಿಶ್ವನಾಥ ಆಂಜನೇಯ ವೆಂಕಟೇಶ ಪ್ರಿಯ ಮುಂತಾದವರು ಉಪಸ್ಥಿತರಿದ್ದರು. ಚಂದ್ರಶೇಖರ ನಿರೂಪಿಸಿದರು ಕವಿತಾ ಪ್ರಾರ್ಥಿಸಿದರು ಈರಯ್ಯ ವಕ್ಕುಂದಮಠ ಸ್ವಾಗತಿಸಿದರು ಪೂಜಾ ಸುಬೇದಾರ  ವಂದಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್