LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಬ್ರ್ಯಾಟ್  ಹಾಡು ಗಂಗಿ ಗಂಗಿ   



     ಖ್ಯಾತ ನಿರ್ದೇಶಕ ಶಶಾಂಕ್ ನಿರ್ದೇಶನದ, ಜನಪ್ರಿಯ ನಟ ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರುವ ಹಾಗೂ ಮಂಜುನಾಥ್ ಕಂದಕೂರ್ ನಿರ್ಮಾಣದ 'ಬ್ರ್ಯಾಟ್' ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಪ್ರಸ್ತುತ ಈ ಚಿತ್ರದ ಮತ್ತೊಂದು ಮನಮೋಹಕ ಹಾಡು 'ಗಂಗಿ ಗಂಗಿ' ಅದ್ದೂರಿಯಾಗಿ ಬಿಡುಗಡೆಯಾಗಿದೆ.

     ಉತ್ತರ ಕರ್ನಾಟಕದ ಪ್ರತಿಭೆ ಬಾಳು ಬೆಳಗುಂದಿ ಹಾಗೂ ಇಂದು ನಾಗರಾಜ್ ಹಾಡಿರುವ ಈ ಹಾಡನ್ನು ಬಾಳು ಬೆಳಗುಂದಿ ಅವರೆ ಬರೆದಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಡಾರ್ಲಿಂಗ್ ಕೃಷ್ಣ ಹಾಗೂ ಅನೈರಾ ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ.

       "ಕುರಿಗಾಹಿಯಾಗಿದ್ದ ನಾನು, ಅನೇಕ ಜನಪದ ಗೀತೆಗಳನ್ನು ರಚಿಸಿ ಹಾಡುತ್ತಿದ್ದೆ. ಆನಂತರ ಸರಿಗಮಪ ಸ್ಪರ್ಧಿಯಾದೆ. ಆ  ಕಾರ್ಯಕ್ರಮದಲ್ಲಿ ಅರ್ಜುನ್ ಜನ್ಯ ಅವರು ನಿನ್ನಿಂದ ನನ್ನ ಸಿನಿಮಾವೊಂದರಲ್ಲಿ ಹಾಡಿಸುತ್ತೇನೆ ಅಂತ ಹೇಳಿದ್ದರು. ಈ ಚಿತ್ರದಲ್ಲಿ ಅವಕಾಶ ನೀಡಿದ್ದಾರೆ. ಅವರಿಗೆ, ನಿರ್ಮಾಪಕರಿಗೆ ಹಾಗೂ ನಿರ್ದೇಶಕರಿಗೆ ಈ ಸಂದರ್ಭದಲ್ಲಿ ಧನ್ಯವಾದ ತಿಳಿಸುತ್ತೇನೆ" ಎಂದರು ಗಾಯಕ ಹಾಗೂ ಗೀತರಚನೆಕಾರ ಬಾಳು ಬೆಳಗುಂದಿ.

     "ಬ್ರ್ಯಾಟ್' ಎಂದರೆ ತರ್ಲೆ ಹುಡುಗ ಹಾಗೂ ದಾರಿ ತಪ್ಪಿದ ಮಗ ಎನ್ನಬಹುದು. ನಮ್ಮ ಚಿತ್ರ ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿದ್ದರು, ಅಪ್ಪ - ಮಗನ ಸ್ಟೋರಿಯೂ ಹೌದು. ಒಟ್ಟಿನಲ್ಲಿ ಇಡೀ ಚಿತ್ರದಲ್ಲಿ ನೋಡುಗರಿಗೆ ಬೇಸರವಾಗದ ಹಾಗೆ ಭರಪೂರ ಮನೋರಂಜನೆಯಿದೆ ಎಂದು ಹೇಳಬಹುದು. ಇನ್ನೂ ಸಿದ್ ಶ್ರೀರಾಮ್ ಹಾಡಿರುವ 'ನಾನೇ ನೀನಂತೆ' ಹಾಡಂತೂ ಮಿಲಿಯನ್ ಗಟ್ಟಲೆ ವೀಕ್ಷಣೆಯಾಗಿ ಜನಪ್ರಿಯವಾಗಿದೆ. ಈಗ 'ಗಂಗಿ ಗಂಗಿ' ಹಾಡು ಬಿಡುಗಡೆಯಾಗಿದೆ. ನನ್ನ ಹಾಗೂ ಡಾರ್ಲಿಂಗ್ ಕೃಷ್ಣ ಅವರ ಕಾಂಬಿನೇಷನ್ ನಲ್ಲಿ ಬಂದಿದ್ದ ಕೌಸಲ್ಯ ಸುಪ್ರಜಾ ರಾಮ ಎಲ್ಲರ ಮನ ಗೆದ್ದಿತ್ತು. 'ಬ್ರ್ಯಾಟ್' ಚಿತ್ರ ಕೂಡ ನವೆಂಬರ್ 14 ರಂದು ಬಿಡುಗಡೆಯಾಗುತ್ತಿದ್ದು, ಎಲ್ಲರಿಗೂ ಪ್ರಿಯವಾಗಲಿದೆ" ಎಂದರು ನಿರ್ದೇಶಕ ಶಶಾಂಕ್.

     "ನಾನು ನೃತ್ಯ ಮಾಡಿ ಮೂರುನಾಲ್ಕು ವರ್ಷಗಳೇ ಆಗಿತ್ತು. ಈ ಹಾಡಿಗೆ ಈ ರೀತಿ ನೃತ್ಯ ಮಾಡಿದ್ದೇನೆ ಅಂದರೆ ಅದಕ್ಕೆ ನಿರ್ದೇಶಕ ಶಶಾಂಕ್ ಅವರೆ ಕಾರಣ. ಈ ಚಿತ್ರದಲ್ಲಿ ನನ್ನ ಲುಕ್ ಕೂಡ ಹೊಸತಾಗಿದೆ‌ . ಈ ಎಲ್ಲಾ ಕ್ರೆಡಿಟ್ ನಿರ್ದೇಶಕರಿಗೆ ಸೇರಬೇಕು. ಇನ್ನೂ 'ಗಂಗಿ ಗಂಗಿ' ಹಾಡು ಇಷ್ಟು ಅದ್ದೂರಿಯಾಗಿ ಮೂಡಿ ಬರಲು ನಿರ್ಮಾಪಕ ಮಂಜುನಾಥ್ ಕಂದಕೂರ್ ಅವರಿಗಿರುವ ಸಿನಿಮಾ ಪ್ರೀತಿ. ಇಡೀ ಸಿನಿಮಾ ಇಷ್ಟೇ ಅದ್ದೂರಿಯಾಗಿ ಮೂಡಿಬಂದಿದೆ" ಎಂದು ನಾಯಕ ಡಾರ್ಲಿಂಗ್ ಕೃಷ್ಣ ತಿಳಿಸಿದರು.

     "ಫಸ್ಟ್ ರ‍್ಯಾಂಕ್ ರಾಜು' ಚಿತ್ರದ ನಂತರ ನಾವು ನಿರ್ಮಿಸಿರುವ ಚಿತ್ರ 'ಬ್ರ್ಯಾಟ್'. ಶಶಾಂಕ್ ಅವರ ಕಥೆ ಕೇಳಿ ಬಹಳ ಇಷ್ಟವಾಯಿತು. ಹಾಗಾಗಿ ನಿರ್ಮಾಣಕ್ಕೆ ಮುಂದಾದೆ. ಇಂದು ಬಿಡುಗಡೆಯಾಗಿರುವ ಹಾಡು ಚೆನ್ನಾಗಿದೆ. ಡಾರ್ಲಿಂಗ್ ಕೃಷ್ಣ ಹಾಗೂ ಶಶಾಂಕ್ ಅವರ ಕಾಂಬಿನೇಶನ್ ನ ಮತ್ತೊಂದು ಸೂಪರ್ ಹಿಟ್ ಚಿತ್ರ ಇದಾಗಲಿದೆ" ಎಂದರು ನಿರ್ಮಾಪಕ ಮಂಜುನಾಥ್ ಕಂದಕೂರ್.

     "ನಾನು ಕನ್ನಡದವಳು. ಕನ್ನಡದಲ್ಲಿ ಇದು ನನ್ನ ಮೊದಲ ಚಿತ್ರ. ಈ ಚಿತ್ರದಲ್ಲಿ ನನ್ನದು ಮಧ್ಯಮವರ್ಗದ ಹುಡುಗಿ ಪಾತ್ರ. ಚಿತ್ರದಲ್ಲೂ ನನ್ನ ಪಾತ್ರದ ಹೆಸರು ಮನಿಶಾ. ಇಂದು ಬಿಡುಗಡೆಯಾಗಿರುವ 'ಗಂಗಿ ಗಂಗಿ' ಹಾಡು ಬಹಳ ಚೆನ್ನಾಗಿದೆ" ಎಂದು ನಾಯಕಿ ಮನಿಶಾ ಕಂದಕೂರ್ ಹೇಳಿದರು.

     ಚಿತ್ರದಲ್ಲಿ ನಟಿಸಿರುವ ಡ್ಯಾಗನ್ ಮಂಜು ಅವರು ಸಹ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಕಿದ್ವಾಯ್ ಸಂಸ್ಥೆಯ ವೈದ್ಯ ರಾಮಚಂದ್ರ ಹಾಗೂ ಬದರಿನಾಥ್ ಮುಂತಾದವರು ಅತಿಥಿಗಳಾಗಿ ಆಗಮಿಸಿದ್ದರು. ಆನಂದ್ ಆಡಿಯೋ ಮೂಲಕ 'ಬ್ರ್ಯಾಟ್' ಚಿತ್ರದ ಹಾಡುಗಳು ಬಿಡುಗಡೆಯಾಗಿದೆ. ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಮೂಡಿಬರುತ್ತಿರುವ ಈ ಚಿತ್ರ ಈಗಾಗಲೇ ಟೀಸರ್ ಹಾಗೂ ಹಾಡಿನ ಮೂಲಕ ಎಲ್ಲರ ಗಮನ ಸೆಳೆದಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್