LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ನಿಮ್ಮ ಹೆಂಡತಿಯರ ಸೀರೆಗಳನ್ನು ಸುಟ್ಟುಹಾಕಿ: ವಿಪಕ್ಷದವರಿಗೆ ಬಾಂಗ್ಲಾ ಪ್ರಧಾನಿ ಸವಾಲು

ಢಾಕಾ, ಏಪ್ರಿಲ್.02 : ಬಾಂಗ್ಲಾದೇಶದಲ್ಲಿ ಭಾರಿ ಸದ್ದು ಮಾಡುತ್ತಿರುವ ವಿಪಕ್ಷ ನಾಯಕರ #BoycotIndia ಅಭಿಯಾನಕ್ಕೆ ಖಡಕ್ ತಿರುಗೇಟು ನೀಡಿರುವ ಪ್ರಧಾನಿ ಶೇಖ್ ಹಸೀನಾ, #india-Out ಎನ್ನುವ ಮೊದಲು ನಿಮ್ಮ ಪತ್ನಿಯರು ಉಟ್ಟಿರುವ ಭಾರತೀಯ ಸೀರೆಗಳನ್ನು ಸುಟ್ಟು ಹಾಕಿ ಎಂದು ಸವಾಲೆಸೆದಿದ್ದಾರೆ.

ಭಾರತೀಯ ಉತ್ಪನ್ನಗಳನ್ನು ಬಹಿಷ್ಕರಿಸಬೇಕೆಂದು ಒತ್ತಾಯಿಸುವ ಪ್ರತಿ ಪಕ್ಷದ ನಾಯಕರು ತಮ್ಮ ಪತ್ನಿಯರು ಮನೆಯಲ್ಲಿ ಪೆಟ್ಟಿಗೆಯಲ್ಲಿರುವ ಮೇಡ್​ ಇನ್​ ಇಂಡಿಯಾ ಸೀರೆಗಳನ್ನು  ಮೊದಲು ಸುಟ್ಟು ಹಾಕಬೇಕು ಎಂದು ‘ಇಂಡಿಯಾ ಔಟ್​’ (India-Out) ಅಭಿಯಾನ ನಡೆಸುತ್ತಿರುವ ವಿರೋಧ ಪಕ್ಷಗಳ ನಾಯಕರಿಗೆ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಟಾಂಗ್ ಕೊಟ್ಟಿದ್ದಾರೆ.

ಅಂತೆಯೇ ಭಾರತ ವಿರೋಧಿ ಅಭಿಯಾನ ನಡೆಸುತ್ತಿರುವ ಅವರ ಕ್ರಮವನ್ನು ಖಂಡಿಸಿರುವ ಶೇಖ್ ಹಸೀನಾ, ತಾವು ಅಧ್ಯಕ್ಷರಾಗಿರುವ ಆಡಳಿತಾರೂಢ ಅವಾಮಿ ಲೀಗ್​ನ  ಸಭೆಯನ್ನುದ್ದೇಶಿಸಿ ಮಾತನಾಡಿ India-Out ಅಭಿಯಾನವನ್ನು ವಿರೋಧಿಸಿದರು. ಈ ವೇಳೆ ಭಾರತದ ಬೆನ್ನಿಗೆ ನಿಂತ ಅವರು, 'ಭಾರತೀಯ ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಕರೆ ನೀಡಿದ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್​ಪಿ) ನಾಯಕರನ್ನು ತರಾಟೆಗೆ ತೆಗೆದುಕೊಂಡರು.

“ನನ್ನ ಪ್ರಶ್ನೆಯೆಂದರೆ, ನಿಮ್ಮ ಹೆಂಡತಿಯರು ಎಷ್ಟು ಭಾರತೀಯ ಸೀರೆಗಳನ್ನು ಹೊಂದಿಲ್ಲ? ಮೊದಲು ನಿಮ್ಮ ನಿಮ್ಮ ಹೆಂಡತಿಯರಿಂದ ಸೀರೆಗಳನ್ನು ತೆಗೆದುಕೊಂಡು ಅದನ್ನು ಸುಟ್ಟು ಹಾಕಿ. ಬಳಿಕ ಉಳಿದ ಅಭಿಯಾನ ನಡೆಸಿ ಎಂದು ಸವಾಲು ಹಾಕಿದರು.

'ಬಿಎನ್​ಪಿ ಅಧಿಕಾರದಲ್ಲಿದ್ದಾಗ, ಸಚಿವರು ಮತ್ತು ಅವರ ಪತ್ನಿಯರು ಭಾರತ ಪ್ರವಾಸ ಮಾಡುತ್ತಿದ್ದರು. ಈ ವೇಳೆ ಅಲ್ಲಿ ಸೀರೆಗಳನ್ನು ಖರೀದಿಸಿ ಬಾಂಗ್ಲಾದೇಶದಲ್ಲಿ ತಂದು ಮಾರಾಟ ಮಾಡುತ್ತಿದ್ದರು. ಇನ್ನು ಕೆಲವರು ಸೀರೆಗಳನ್ನು ಕೂಡಿಟ್ಟಿದ್ದಾರೆ. ಇದೀಗ ಎಲ್ಲರೂ ಭಾರತ ವಿರೋಧಿ ಘೋಷಣೆ ಕೂಗುತ್ತಿದ್ದಾರೆ. ಭಾರತವನ್ನು ವಿರೋಧ ಮಾಡುವ ನಾಯಕರು ಭಾರತದಿಂದ ಬರುವ ಗರಂ ಮಸಾಲಾ, ಈರುಳ್ಳಿ, ಬೆಳ್ಳುಳ್ಳಿ, ಶುಂಠಿ ಸೇರಿದಂತೆ ಮಸಾಲೆ ಪದಾರ್ಥಗಳನ್ನು ತಮ್ಮ ಮನೆಗೆ ತರಬಾರದು. ಅವರ ಮನೆಯ ಅಡುಗೆ ಮನೆಯಲ್ಲಿ ಇವುಗಳಿಗೆ ಸ್ಥಾನ ಕೊಡಬಾರದು ಎಂದು ಹೇಳಿದರು.

ಭಾರತೀಯ ಉತ್ಪನ್ನಗಳ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ಬಿಎನ್ ಪಿ ನಾಯಕ ರುಹುಲ್ ಕಬೀರ್ ರಿಜ್ವಿ ತಮ್ಮ ಕಾಶ್ಮೀರಿ ಶಾಲನ್ನು ರಸ್ತೆಗೆ ಎಸೆದು ಇಂಡಿಯಾ ಔಟ್ ಅಭಿಯಾನಕ್ಕೆ ಚಾಲನೆ ನೀಡಿದ್ದರು. ಬಾಂಗ್ಲಾದೇಶದಲ್ಲಿ ‘ಇಂಡಿಯಾ-ಔಟ್’ ಅಭಿಯಾನದ ಹಿನ್ನೆಲೆಯಲ್ಲಿ ಹಲವಾರು ಬೆಳವಣಿಗೆಗಳು ನಡೆಯುತ್ತಿವೆ.

ಕೆಲವು ಕಾರ್ಯಕರ್ತರು ಮತ್ತು ಸೋಶಿಯಲ್ ಮೀಡಿಯಾ ಇನ್​ಫ್ಲ್ಯುಯೆನ್ಸರ್​ಗಳು ಈ ಅಭಿಯಾನ ನಡೆಸುತ್ತಿದ್ದಾರೆ. ಪ್ರತಿಭಟನೆಯ ಅಂಗವಾಗಿ ಆಡಳಿತಾರೂಢ ಅವಾಮಿ ಲೀಗ್​ ಮೇಲೆಯೂ ಮಾತಿನ ದಾಳಿ ನಡೆಸಲಾಗುತ್ತಿದೆ. ತನ್ನ ಹಿತಾಸಕ್ತಿಗಳಿಗೆ ಸರಿಹೊಂದುವುದರಿಂದ ಶೇಖ್ ಹಸೀನಾ ಅವರು ಅಧಿಕಾರದಲ್ಲಿ ಮುಂದುವರಿಯುವುದನ್ನು ಭಾರತ ಬಯಸುತ್ತಿದೆ ಎಂದು ಅಭಿಯಾನದಲ್ಲಿ ಭಾಗಿಯಾಗಿರುವವರು ಹೇಳಿಕೆ ನೀಡಿದ್ದಾರೆ.

ಇನ್ನು ರಿಜ್ವಿ ಅವರಂತಹ ಕೆಲವು ಬಿಎನ್ ಪಿ ನಾಯಕರು ಅಭಿಯಾನಕ್ಕೆ ಬೆಂಬಲ ವ್ಯಕ್ತಪಡಿಸಿದ್ದರೂ, ಪಕ್ಷವು ತನ್ನ ನಿಲುವು ಸ್ಪಷ್ಟಪಡಿಸಿಲ್ಲ. ಬಹಿಷ್ಕಾರದ ಕರೆ ಕುರಿತು ಪಕ್ಷದ ನಿಲುವಿನ ಬಗ್ಗೆ ಕೆಲವು ನಾಯಕರಿಗೆ ಸ್ಪಷ್ಟತೆ ಇಲ್ಲ. ಇಲ್ಲಿಯವರೆಗೆ ನಮ್ಮ ಪಕ್ಷವು ಈ ಬಗ್ಗೆ ಯಾವುದೇ ಅಧಿಕೃತ ನಿಲುವನ್ನು ಹೊಂದಿಲ್ಲ. ಆದರೆ ಇದು ಜನರ ಕರೆ ಮತ್ತು ನಮ್ಮ ಕೆಲವು ನಾಯಕರು ಇದನ್ನು ಬೆಂಬಲಿಸುತ್ತಿದ್ದಾರೆ” ಎಂದು ಬಿಎನ್ಪಿಯ ಮಾಧ್ಯಮ ಘಟಕದ ಸದಸ್ಯ ಸೈರುಲ್ ಕಬೀರ್ ಖಾನ್ ಹೇಳಿದ್ದಾರೆ.

 

 

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್