Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಾರ್ಮಾಡಿ ಘಾಟಿನಲ್ಲಿ ಬಸ್‌ ಪಲ್ಟಿ; ಕೂದಲೆಳೆ ಅಂತರದಿಂದ ಪಾರಾದ ಪ್ರಯಾಣಿಕರು

ಬೆಳ್ತಂಗಡಿ,

ದಕ್ಷಿಣ ಕನ್ನಡ ಜಿಲ್ಲೆಯ ಚಾರ್ಮಾಡಿ ಘಾಟಿಯ ಅಪಾಯಕಾರಿ ತಿರುವಿನಲ್ಲಿ ಖಾಸಗಿ ಬಸ್ಸು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ. ಧರ್ಮಸ್ಥಳದಲ್ಲಿ ಮದುವೆ ಮುಗಿಸಿಕೊಂಡು ಮೂಡಿಗೆರೆಯತ್ತ ಸಾಗುತ್ತಿದ್ದ ಬಸ್ ಅಪಘಾತಕ್ಕೀಡಾಗಿದ್ದು, ಬಸ್ಸಿನಲ್ಲಿದ್ದ 25 ಪ್ರಯಾಣಿಕರು ಗಾಯಗೊಂಡಿದ್ದಾರೆ.

ಧರ್ಮಸ್ಥಳದಲ್ಲಿ ನಡೆದ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ, ಅಲ್ಲಿಂದ ಪ್ರಯಾಣಿಕರನ್ನು ಹೊತ್ತು ಮೂಡಿಗೆರೆಯತ್ತ ಖಾಸಗಿ ಬಸ್ಸು ಹೊರಟಿತ್ತು. ಚಾರ್ಮಾಡಿ ಘಾಟಿಯ ನಾಲ್ಕನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್ಸು ರಸ್ತೆಯಲ್ಲೇ ಪಲ್ಟಿಯಾಗಿದೆ. ಘಾಟಿ ಪ್ರದೇಶವಾದ್ದರಿಂದ ಬಸ್ ಪ್ರಪಾತಕ್ಕೆ ಬೀಳುವ ಅಪಾಯವಿತ್ತಾದರೂ, ರಸ್ತೆಯಲ್ಲೇ ಪಲ್ಟಿಯಾಗಿರುವುದರಿಂದ ಭೀಕರ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದಂತಾಗಿದೆ. ಬಸ್ಸಿನಲ್ಲಿ ಸುಮಾರು 25 ಮಂದಿ ಪ್ರಯಾಣಿಕರಿದ್ದರು. ಅಪಘಾತದ ರಭಸಕ್ಕೆ ಎಲ್ಲರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗಳಿಗೆ ಮತ್ತು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

ಘಟನೆ ನಡೆದ ತಕ್ಷಣ ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಪಲ್ಟಿಯಾದ ಬಸ್ಸನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಘಾಟಿ ಪ್ರದೇಶದ ಕಡಿದಾದ ತಿರುವುಗಳಲ್ಲಿ ಚಾಲಕರು ಅತಿ ವೇಗ ಮತ್ತು ಅಜಾಗರೂಕತೆಯಿಂದ ಚಲಿಸುವುದೇ ಇಂತಹ ಅಪಘಾತಗಳಿಗೆ ಕಾರಣ ಎಂದು ಶಂಕಿಸಲಾಗಿದೆ.

 

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*