LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಬಸ್ ಪಾಸ್ ವಿಸ್ತರಣೆ: ಪದವಿ ವಿದ್ಯಾರ್ಥಿಗಳ ಪರೀಕ್ಷೆ ಹಿನ್ನೆಲೆ ಕೆಎಸ್‌ಆರ್‌ಟಿಸಿ ನಿರ್ಧಾರ

ಬೆಂಗಳೂರು, ಏಪ್ರಿಲ್05: 2023-24ನೇ ಸಾಲಿನ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಆರಂಭವಾಗುತ್ತಿದೆ. ಇದೇ ವೇಳೆ ಕೆಎಸ್‌ಆರ್‌ಟಿಸೊ, ಬಿಎಂಟಿಸಿಯ ವಿದ್ಯಾರ್ಥಿಗಳ ಬಸ್‌ಪಾಸ್ ಅವಧಿ ಕಳೆದ ತಿಂಗಳ ಅಂತ್ಯಕ್ಕೆ ಮುಕ್ತಾಯವಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಮತ್ತೆ ಅವಧಿಯನ್ನು ವಿಸ್ತರಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಈ ಬಗ್ಗೆ ಎಲ್ಲಾ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಪತ್ರ ಬರೆದಿದ್ದು, ಹಲವು ಸೂಚನೆಗಳನ್ನು ನೀಡಿದೆ. "ಪದವಿ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ದಿನಾಂಕ: 31.03.2024ಕ್ಕೆ ಮುಕ್ತಾಯಗೊಂಡಿದ್ದು, ಸದರಿ ಬಸ್ ಪಾಸ್ ಅವಧಿಯನ್ನು ವಿಸ್ತರಿಸುವಂತೆ ವಿಭಾಗಗಳಿಂದ ದೂರವಾಣಿ ಮುಖೇನ ಕೋರುತ್ತಿರುವುದನ್ನು ಪರಿಶೀಲಿಸಲಾಗಿದೆ" ಎಂದು ತಿಳಿಸಿದೆ.

"ಈಗಾಗಲೇ ಉಲ್ಲೇಖ-1 ರ ಸಾಮಾನ್ಯ ಸ್ಥಾಯಿ ಆದೇಶದ ಅನ್ವಯ ವಿದ್ಯಾರ್ಥಿ ಬಸ್ ಪಾಸ್ ಮಾನ್ಯತಾ ಅವಧಿ ಮುಕ್ತಾಯಗೊಂಡ ನಂತರ ಒಂದು ಅಥವಾ ಎರಡು ತಿಂಗಳ ಅವಧಿಗೆ ಬಸ್ ಪಾಸ್ ಅವಧಿ ವಿಸ್ತರಿಸಿ ನೀಡಲು ಅವಕಾಶವಿದೆ. ತಮ್ಮ ಹಂತದಲ್ಲಿಯೇ ಬಸ್ ಪಾಸ್ ವಿತರಿಸಲು ಕ್ರಮ ಕೈಗೊಳ್ಳದೇ, ವಿದ್ಯಾರ್ಥಿಗಳಿಗೆ ಅನಾನುಕೂಲ ಮಾಡುತ್ತಿರುವುದು ಸಮಂಜಸವಿರುವುದಿಲ್ಲ. ಆದಾಗ್ಯೂ ಈ ನಿಟ್ಟಿನಲ್ಲಿ ಕೆಳಕಂಡಂತೆ ಕ್ರಮವಹಿಸುವಂತೆ ತಿಳಿಸಲಾಗಿದೆ" ಎಂದು ಹೇಳಿದೆ.

1. ದಿನಾಂಕ 31.03.2024 ರಂದು ಮುಕ್ತಾಯವಾಗುವ ವಿದ್ಯಾರ್ಥಿ ಬಸ್ ಪಾಸುಗಳನ್ನು, ಪರೀಕ್ಷೆ ವೇಳಾಪಟ್ಟಿಗೆ ಅನುಗುಣವಾಗಿ ಮಾನ್ಯತಾ ಅವಧಿಯನ್ನು ಒಂದು ತಿಂಗಳು ಅಥವಾ ಗರಿಷ್ಠ ಎರಡು ತಿಂಗಳ ಅವಧಿಗೆ ವಿಸ್ತರಣೆ ಮಾಡುವುದು. 2. ಪಾಸ್‌ಗಳ ವಿಸ್ತರಣೆಗಾಗಿ ನಿಯಮಾವಳಿಯಂತೆ ಒಂದು / ಎರಡು ತಿಂಗಳ ಶುಲ್ಕ ಹಾಗೂ ಸಂಸ್ಕರಣ ಶುಲ್ಕವನ್ನು ಪಾವತಿಸಿಕೊಂಡು, ಸದರಿ ರಶೀದಿಯಲ್ಲಿ ವಿದ್ಯಾರ್ಥಿಯ ಹೆಸರು ಹಾಗೂ ಬಸ್ ಪಾಸಿನ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸುವುದು. 3. 2023-24ನೇ ಸಾಲಿನ ಬಸ್‌ಪಾಸ್ ಮತ್ತು ಶುಲ್ಕ ಪಾವತಿ ರಶೀದಿ ಎರಡನ್ನೂ ತೋರಿಸಿ, ಪಾಸಿನಲ್ಲಿರುವ ಮಾರ್ಗದಲ್ಲಿ ವಿದ್ಯಾರ್ಥಿಗಳು ಪ್ರಯಾಣಿಸಲು ಅವಕಾಶ ಕಲ್ಪಿಸುವುದು.

4. ಮೇಲ್ಕಂಡ ಅಂಶಗಳನ್ವಯ ಮಾನ್ಯತಾ ಅವಧಿ ವಿಸ್ತರಿಸಿರುವ ಬಸ್ ಪಾಸ್‌ಗಳ ಸಂಖ್ಯೆಯ ವಿವರಗಳನ್ನು ಈ ಕಚೇರಿಗೆ ಒದಗಿಸಬೇಕು ಎಂದಿದೆ. ಈ ವಿವರಗಳನ್ನು ಚಾಲಕ ಮತ್ತು ನಿರ್ವಾಹಕರುಗಳಿಗೆ ಅಗತ್ಯ ಮಾಹಿತಿ ನೀಡಿ ಸೂಕ್ತ ಕ್ರಮವಹಿಸಲು ತಿಳಿಸಲಾಗಿದೆ ಎಂದು ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ.


 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್