LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಕೇಡರ್​ ವರ್ಗಾವಣೆ ಮಾಡಿಸಿಕೊಂಡ್ರೆ ಹೊಡೆತ ಗ್ಯಾರೆಂಟಿ: ಸುಪ್ರೀಂ

ನವದೆಹಲಿ, ಮಾರ್ಚ್ 26: ಮಹತ್ವದ ಬೆಳವಣಿಗೆಯೊಂದರಲ್ಲಿ, ಸರ್ಕಾರಿ ಉದ್ಯೋಗಿಯ ಮನವಿಯ ಮೇರೆಗೆ ಮಾಡಲಾಗುವ ವರ್ಗಾವಣೆಯನ್ನು ಸಾರ್ವಜನಿಕ ಹಿತಾಸಕ್ತಿಯ ವರ್ಗಾವಣೆ ಎಂದು ಪರಿಗಣಿಸಲಾಗುವುದಿಲ್ಲ ಎಂಬುದಾಗಿ ಸುಪ್ರೀಂ ಕೋರ್ಟ್ ಹೇಳಿದೆ. ಇದರಿಂದಾಗಿ, ಉದ್ಯೋಗಿಯ ಮನವಿ ಮೇರೆಗೆ ಇನ್ನೊಂದು ಕೇಡರ್ ಅಥವಾ ಇಲಾಖೆಗೆ  ವರ್ಗಾವಣೆ ಮಾಡಿದಲ್ಲಿ, ಆತ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಇಲಾಖೆಯಲ್ಲಿನ ಹಿರಿತನವನ್ನು ಪರಿಗಣಿಸಲಾಗುವುದಿಲ್ಲ. ಸುಪ್ರೀಂ ಕೋರ್ಟ್ ಈ ಆದೇಶ ಪ್ರಕಟಿಸಿರುವುದು ಅನೇಕ ಸರ್ಕಾರಿ ಉದ್ಯೋಗಿಗಳ ಮೇಲೆ ಪರಿಣಾಮ ಬೀರಲಿದೆ.





ಸಾರ್ವಜನಿಕ ಹಿತಾಸಕ್ತಿಯ ಮೇರೆಗೆ ನಿರ್ದಿಷ್ಟ ಹುದ್ದೆಯನ್ನು ಹೊಂದಿರುವ ಸರ್ಕಾರಿ ನೌಕರನನ್ನು ಬೇರೆ ಇಲಾಖೆ ಅಥವಾ ಕೇಡರ್​​ಗೆ ವರ್ಗಾವಣೆ ಮಾಡಿದರೆ, ಆತ ಈಗಾಗಲೇ ಕಾರ್ಯನಿರ್ವಹಿಸುತ್ತಿದ್ದ ಹುದ್ದೆಯ ಹಿರಿತನ ಸೇರಿದಂತೆ ಅಸ್ತಿತ್ವದಲ್ಲಿರುವ ಸ್ಥಾನಮಾನವನ್ನು ಹೊಂದಿರಲು ಅರ್ಹನಾಗಿರುತ್ತಾನೆ. ಆದಾಗ್ಯೂ, ಒಬ್ಬ ಅಧಿಕಾರಿಯನ್ನು ಆತನ ಸ್ವಂತ ಕೋರಿಕೆಯ ಮೇರೆಗೆ ವರ್ಗಾವಣೆ ಮಾಡಿದರೆ, ಆಗ ಆತ ವರ್ಗಾವಣೆಗೊಂಡ ಇಲಾಖೆಯ ಇತರ ಉದ್ಯೋಗಿಗಳ ಹಕ್ಕುಗಳು ಮತ್ತು ಸ್ಥಿತಿಗತಿಗಳನ್ನು ಗಮನಿಸಿ ಹಿರಿತನ ಪರಿಗಣಿಸಬೇಕಾಗುತ್ತದೆ. ಏಕೆಂದರೆ, ವರ್ಗಾವಣೆಯಲ್ಲಿ ಸಾರ್ವಜನಿಕ ಹಿತಾಸಕ್ತಿ ಇಲ್ಲದೆ ಇದ್ದರೆ ಆಗ ಹಿಂದಿನ ಹುದ್ದೆಯ ಹಿರಿತನ ನೀಡಲಾಗದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಕರ್ನಾಟಕದ ಪ್ರಕರಣದಲ್ಲಿ ಸುಪ್ರೀಂ ತೀರ್ಪು:


ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಪಿಎಸ್ ನರಸಿಂಹ ಮತ್ತು ಮನೋಜ್ ಮಿಶ್ರಾ ಅವರ ಪೀಠವು ಮಹತ್ವದ ಆದೇಶ ನೀಡಿದೆ. ಸರ್ಕಾರಿ ಸ್ಟಾಫ್ ನರ್ಸ್ ಒಬ್ಬರು 1985 ರಲ್ಲಿ ಆರೋಗ್ಯ ಸಮಸ್ಯೆಗಳ ಕಾರಣ ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ಆಗಿ ಕೇಡರ್ ಬದಲಾವಣೆಯನ್ನು ಕೋರಿದ್ದರು. ವೈದ್ಯಕೀಯ ಮಂಡಳಿಯು ಅವರ ಅಸಮರ್ಥತೆಯನ್ನು ದೃಢಪಡಿಸಿದ್ದರಿಂದ ಕರ್ನಾಟಕ ಸರ್ಕಾರ 1989ರಲ್ಲಿ ಅವರನ್ನು ಬೇರೊಂದು ಕೇಡರ್​​ಗೆ ವರ್ಗಾವಣೆ ಮಾಡಿ ಅನುಮೋದನೆ ನೀಡಿತ್ತು. ಆದರೆ, ಅವರ ಸೇವಾ ಹಿರಿತನವನ್ನು 1979 ರ ಬದಲಿಗೆ 1989 ರಿಂದ ನಿಗದಿಪಡಿಸಿತ್ತು. ಇದನ್ನು ಪ್ರಶ್ನಿಸಿದ್ದ ಅವರು 2007ರಲ್ಲಿ ಹೈಕೋರ್ಟ್ ಮೊರೆ ಹೋಗಿದ್ದರು. ಅಲ್ಲಿ ಅವರ ಪರವಾಗಿ ತೀರ್ಪು ಬಂದಿತ್ತು. ಕರ್ನಾಟಕ ರಾಜ್ಯ ಹಾಗೂ ಕೆ. ಸೀತಾರಾಮುಲು (2010) ಪ್ರಕರಣದ ತೀರ್ಪನ್ನು ಉಲ್ಲೇಖಿಸಿ, ವೈದ್ಯಕೀಯ ಕಾರಣ ಆಧಾರಿತ ವರ್ಗಾವಣೆಗಳನ್ನು ಸಾರ್ವಜನಿಕ ಹಿತಾಸಕ್ತಿ ವರ್ಗಾವಣೆಗಳೆಂದು ಪರಿಗಣಿಸಿ, ಮೂಲ ಸೇವಾ ಹಿರಿತನವನ್ನು ಉಳಿಸಿಕೊಳ್ಳಲು ಅವಕಾಶ ಮಾಡಿಕೊಟ್ಟಿತ್ತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್