LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಸೊಳ್ಳೆ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರಕ್ಕೆ ಕರೆ: ನಂದಿನಿ



ಬಳ್ಳಾರಿ,ಜು.21 ಸಮುದಾಯಗಳಲ್ಲಿ ಸೊಳ್ಳೆ ನಿಯಂತ್ರಣಕ್ಕಾಗಿ ಸಾರ್ವಜನಿಕರ ಸಹಕಾರ ಬಹಳ ಅಗತ್ಯವಾಗಿದೆ ಎಂದು ಜಿಲ್ಲಾ ಕೀಟಶಾಸ್ತçಜ್ಞರಾದ ನಂದಿನಿ ಅವರು ಹೇಳಿದರು.
ಡೆಂಗ್ಯೂ ರೋಗ ನಿಯಂತ್ರಣ ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಬಂಡಿಹಟ್ಟಿಯ ಸರ್ಕಾರಿ ಹಾಸ್ಟೆಲ್‌ನಲ್ಲಿ ಶಾಲಾ ಮಕ್ಕಳಿಗೆ ಶುಕ್ರವಾರ ಹಮ್ಮಿಕೊಂಡಿದ್ದ ವಿಶೇಷ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಡೆಂಗ್ಯೂ ರೋಗವು ‘ಈಡೀಸ್ ಈಜಿಪ್ಟೆöÊ' ಎಂಬ ಸೋಂಕಿತ ಸೊಳ್ಳೆ ಕಚ್ಚುವುದರಿಂದ ಹರಡುತ್ತದೆ. ಮಳೆಗಾಲದಲ್ಲಿ ಸೊಳ್ಳೆಗಳ ಸಂತತಿ ಹೆಚ್ಚಾಗುವ ಸಾಧ್ಯತೆ ಇರುವುದರಿಂದ, ಮನೆ ಒಳಗಡೆ ಮತ್ತು ಹೊರಾಂಗಣದಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ನಿಂತ ನೀರಿನಲ್ಲಿ ಈಡೀಸ್ ಸೊಳ್ಳೆಗಳ ಲಾರ್ವಾ ಉತ್ಪತ್ತಿಯಾಗುವುದನ್ನು ತಡೆಗಟ್ಟಲು ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.
ನಿಂತ ನೀರಿನಿಂದಾಗಿ ಡೆಂಗ್ಯೂ ಮಾತ್ರವಲ್ಲದೆ ಚಿಕೂನ್‌ಗುನ್ಯಾ, ಮಲೇರಿಯಾ, ಆನೇಕಾಲು ರೋಗ ಹಾಗೂ ಮೆದುಳು ಜ್ವರಗಳಂತಹ ಮಾರಕ ರೋಗಗಳು ಹರಡುವ ಸಾಧ್ಯತೆಯಿದೆ. ಸಾಧಾರಣ ಜ್ವರವೆಂದು ನಿರ್ಲಕ್ಷಿಸಿದರೆ ಡೆಂಗ್ಯೂ ರೋಗಿಗಳಲ್ಲಿ ಪ್ಲೇಟ್‌ಲೆಟ್‌ಗಳ ಸಂಖ್ಯೆ ಶೀಘ್ರವಾಗಿ ಕುಸಿದು ರಕ್ತಸ್ರಾವದಂತಹ ಗಂಭೀರ ಪರಿಸ್ಥಿತಿ ನಿರ್ಮಾಣವಾಗಬಹುದು. ಹಾಗಾಗಿ 3 ದಿನಗಳಿಗಿಂತ ಹೆಚ್ಚು ಜ್ವರ, ವಿಪರೀತ ತಲೆನೋವು, ಕಣ್ಣುಗಳ ಹಿಂಭಾಗದಲ್ಲಿ ನೋವು, ಮಾಂಸಖAಡ ಮತ್ತು ಕೀಲುಗಳಲ್ಲಿ ನೋವು ಕಂಡುಬAದರೆ ತಕ್ಷಣವೇ ಹತ್ತಿರದ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರೀಕ್ಷಿಸಿಕೊಳ್ಳಬೇಕು ಎಂದು ತಿಳಿಸಿದ ಅವರು, ಮುಖ್ಯವಾಗಿ ಚಿಕ್ಕ ಮಕ್ಕಳು, ಗರ್ಭಿಣಿಯರು ಹಾಗೂ ವಯೋವೃದ್ಧರ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವಂತೆ ಅವರು ಮನವಿ ಮಾಡಿದರು.
ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರೇಣುಕಾ ಜಡಗನ್ನವರ ಅವರು ಮಾತನಾಡಿ, ಮನೆಯಲ್ಲಿ ನೀರು ಸಂಗ್ರಹಿಸುವ ಡ್ರಮ್, ಬ್ಯಾರಲ್, ನೀರಿನ ತೊಟ್ಟಿ, ಕಲ್ಲಿನ ಡೋಣಿ, ಹೂವಿನ ಕುಂಡಗಳನ್ನು ವಾರಕ್ಕೊಮ್ಮೆ ಕಡ್ಡಾಯವಾಗಿ ಸ್ವಚ್ಛಗೊಳಿಸಬೇಕು. ನೀರು ತುಂಬಿದ ಪಾತ್ರೆಗಳಿಗೆ ಮುಚ್ಚಳ ಮುಚ್ಚಬೇಕು ಅಥವಾ ಬಟ್ಟೆ ಕಟ್ಟಬೇಕು. ಬಳಕೆಯಾಗದ ನೀರು ಸಂಗ್ರಹಕಗಳಿಗೆ ಕೊಬ್ಬರಿ ಎಣ್ಣೆ ಹಾಕುವುದರಿಂದ ಸೊಳ್ಳೆ ಉತ್ಪತ್ತಿಯನ್ನು ತಡೆಯಬಹುದು ಎಂದು ಸರಳ ಪರಿಹಾರಗಳನ್ನು ತಿಳಿಸಿದರು.
ಮನೆಯ ಸುತ್ತಮುತ್ತ ಹಳೆಯ ಡಬ್ಬಿ, ಟೈಯರ್, ಒಡೆದ ಬಕೆಟ್, ಬಾಟಲಿ ಹಾಗೂ ಕಸವನ್ನು ಸರಿಯಾಗಿ ವಿಲೇವಾರಿ ಮಾಡಬೇಕು. ಹೂದಾನಿ ಮತ್ತು ಫ್ರಿಜ್ ಹಿಂಭಾಗದ ವೇಸ್ಟ್ ವಾಟರ್ ಟ್ರೇಗಳಲ್ಲಿ ನೀರನ್ನು ಪ್ರತಿದಿನ ಸ್ವಚ್ಛಗೊಳಿಸಬೇಕು. ಸೊಳ್ಳೆ ಕಚ್ಚದಂತೆ ಪೂರ್ಣ ಬಾಹು ಬಟ್ಟೆಗಳನ್ನು ಧರಿಸಿ ಮತ್ತು ಮನೆಗಳ ಕಿಟಕಿ-ಬಾಗಿಲುಗಳಿಗೆ ಸೊಳ್ಳೆ ಜಾಲಿ ಅಳವಡಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಖುರ್ಶಿದ್ ಬೇಗಮ್, ಜಿಲ್ಲಾ ಮಲೇರಿಯಾ ನಿಯಂತ್ರಣ ಕಚೇರಿಯ ನಾಗೇಂದ್ರಪ್ಪ (ಹಿ.ಆ.ನಿ), ಆರೋಗ್ಯ ನಿರೀಕ್ಷಣಾಧಿಕಾರಿ ನಾಗರಾಜ್, ಎಮ್.ಟಿ.ಎಸ್ ಬಾಬುರಾವ್, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಾದ ಗೀತಾ, ದಾನಕುಮಾರಿ, ಹಾಸ್ಟೆಲ್ ಸಿಬ್ಬಂದಿ ವರ್ಗದವರು ಹಾಗೂ ವಸತಿ ನಿಲಯದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್