LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ರಾಸಾಯನಿಕ ಗೊಬ್ಬರ ತಗ್ಗಿಸಿ, ಸಾವಯವ ಕೃಷಿಗೆ ಆದ್ಯತೆ ನೀಡಲು ಕರೆ



ಬಳ್ಳಾರಿ,ಜೂ.24 : ಪ್ರಸ್ತುತ ದಿನಗಳಲ್ಲಿ ಮಣ್ಣಿನ ಆರೋಗ್ಯ ಕಾಪಾಡುವುದು ಅತ್ಯಂತ ಅಗತ್ಯವಾಗಿದೆ. ರೈತರು ಅತಿಯಾಗಿ ರಾಸಾಯನಿಕ ಗೊಬ್ಬರಗಳ ಬಳಕೆಯನ್ನು ಮಾಡುವುದನ್ನು ತಗ್ಗಿಸಬೇಕು ಮತ್ತು ಭೂಮಿಯ ಫಲವತ್ತತೆ ಹೆಚ್ಚಿಸಲು ಸಾವಯವ ಕೃಷಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಸೋಮಸುಂದರ್ ಅವರು ಕರೆ ನೀಡಿದರು.
ಕೋಳೂರು ಹೋಬಳಿಯ ದಮ್ಮೂರು ಗ್ರಾಮದ ಪ್ರಾಥಮಿಕ ಪತ್ತಿನ ಸಹಕಾರಿ ಸಂಘದ ಆವರಣದಲ್ಲಿ ಇತ್ತೀಚೆಗೆ ಕೃಷಿ ಇಲಾಖೆ, ಬಳ್ಳಾರಿ ಹಾಗೂ ಕೃಷಿ ವಿಜ್ಞಾನ ಕೇಂದ್ರ (ಕೆ.ವಿ.ಕೆ) ಹಗರಿ ಇವರ ಜಂಟಿ ಸಹಯೋಗದೊಂದಿಗೆ ಆಯೋಜಿಸಿದ್ದ ‘ಖೇತ್ ಬಚಾವೋ ಅಭಿಯಾನ್, ಧರ್ತಿ ಮಾತಾ ಬಚಾವೋ’ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕೆ.ವಿ.ಕೆ ಹಗರಿಯ ಕೃಷಿ ವಿಜ್ಞಾನಿ ಡಾ.ರವಿ ಅವರು ಮಾತನಾಡಿ, ಸಸ್ಯಗಳ ಸಮೃದ್ಧ ಬೆಳವಣಿಗೆಗೆ ಒಟ್ಟು 16 ಅತ್ಯಗತ್ಯ ಪೋಷಕಾಂಶಗಳ ಅವಶ್ಯಕತೆಯಿರುತ್ತದೆ. ಇವುಗಳಲ್ಲಿ ಕೆಲವು ಮಣ್ಣಿನಲ್ಲಿ ಲಭ್ಯವಿದ್ದರೆ, ಇನ್ನು ಕೆಲವು ವಾತಾವರಣದಿಂದ ದೊರೆಯುತ್ತವೆ. ಹಾಗಾಗಿ ರೈತರು ಕಡ್ಡಾಯವಾಗಿ ಮಣ್ಣು ಪರೀಕ್ಷೆ ಮಾಡಿಸಿ, ಅದರಿಂದ ಬರುವ ಫಲಿತಾಂಶದ ಆಧಾರದ ಮೇಲೆಯೇ ರಸಗೊಬ್ಬರಗಳನ್ನು ಸಮರ್ಪಕವಾಗಿ ಬಳಸಬೇಕು ಎಂದು ವೈಜ್ಞಾನಿಕ ಮಾಹಿತಿ ನೀಡಿದರು.
ಇನ್ನೋರ್ವ ವಿಜ್ಞಾನಿ ಡಾ.ನವೀನ್ ಅವರು ಮಾತನಾಡಿ, ಮನೆಯಲ್ಲೇ ತಯಾರಿಸಬಹುದಾದ ಪಂಚಗವ್ಯ, ಜೀವಾಮೃತ ಹಾಗೂ ಬೀಜಾಮೃತದಂತಹ ಸಾವಯವ ಕೃಷಿ ಪರಿಕರಗಳನ್ನು ಬಳಸುವುದರಿಂದ ಕೃಷಿ ವೆಚ್ಚವನ್ನು ಗಣನೀಯವಾಗಿ ತಗ್ಗಿಸಬಹುದು. ಜೊತೆಗೆ ನಮ್ಮ ಮುಂದಿನ ಪೀಳಿಗೆಗೆ ವಿಷಮುಕ್ತ ಆಹಾರವನ್ನು ನೀಡಲು ಸಾಧ್ಯವಾಗುತ್ತದೆ ಎಂದರು.
ಇದೇ ಸಂದರ್ಭದಲ್ಲಿ ಕೃಷಿ ಅಧಿಕಾರಿ ಬಸವರಾಜ್ ಅವರು ಕೃಷಿ ಇಲಾಖೆಯಲ್ಲಿ ಲಭ್ಯವಿರುವ ವಿವಿಧ ಯೋಜನೆಗಳು ಹಾಗೂ ಸಹಾಯಧನಗಳ ಬಗ್ಗೆ ರೈತರಿಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು.
ರೈತ ಸಂಪರ್ಕ ಕೇಂದ್ರದ ಅಧಿಕಾರಿ ಡಾ.ಅರುಣಾ ಅವರು ತೊಗರಿ ಬೆಳೆಯಲ್ಲಿ ಬೀಜೋಪಚಾರ ಮಾಡುವ ಸುಲಭ ವಿಧಾನಗಳು ಮತ್ತು ಅದರ ಮಹತ್ವವನ್ನು ರೈತರಿಗೆ ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು.
ಕಾರ್ಯಕ್ರಮದಲ್ಲಿ ಸಹಾಯಕ ಕೃಷಿ ನಿರ್ದೇಶಕ ಗರ್ಜಪ್ಪ, ಪ್ರಮುಖರಾದ ದಯಾನಂದ, ಉಮೇಶ್, ಕೃಷಿ ಅಧಿಕಾರಿ ಯೇಸುಬಾಬು, ಆತ್ಮ ಸಂಸ್ಥೆಯ ಸಿಬ್ಬಂದಿಯಾದ ಕವಿತಾ, ರೇಣುಕಾರಾಧ್ಯ, ರೈತರಾದ ಆದಿನಾರಾಯಣ ರೆಡ್ಡಿ, ಶಂಕರ ಗೌಡ, ಜೆ. ನಾರಾಯಣ ರೆಡ್ಡಿ, ರೇವಣಸಿದ್ಧಯ್ಯ ಸ್ವಾಮಿ, ಮಾಣಿಕ್ಯ ರೆಡ್ಡಿ ಹಾಗೂ ಸ್ಥಳೀಯ ಕೃಷಿ ಸಖಿಯರು ಉಪಸ್ಥಿತರಿದ್ದರು.
ದಮ್ಮೂರು ಮತ್ತು ಕೋಳೂರು ಗ್ರಾಮದ ನೂರಾರು ಪ್ರಗತಿಪರ ರೈತರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಕೃಷಿ ತಜ್ಞರಿಂದ ಸೂಕ್ತ ಮಾಹಿತಿ ಹಾಗೂ ಮಾರ್ಗದರ್ಶನ ಪಡೆದುಕೊಂಡರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ