LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಕಿತ್ತೂರು ನಾಡಿನಲ್ಲಿ ಸಂಭ್ರಮದ ಬಸವ ಜಯಂತಿ: ಮನೆಮನ ಬೆಳಗಿದ ವಚನ ಜ್ಯೋತಿ

 

 

​ಚನ್ನಮ್ಮನ ಕಿತ್ತೂರು: ತಾಲ್ಲೂಕಿನ ಎತ್ತಿನಕೇರಿ-ಮಲ್ಲಾಪುರ ಬಸವ ಮಂಟಪದಲ್ಲಿ ವಿಶ್ವಗುರು ಬಸವಣ್ಣನವರ 893ನೇ ಜಯಂತಿಯನ್ನು ಅತ್ಯಂತ ಸಡಗರ-ಸಂಭ್ರಮದಿಂದ ಆಚರಿಸಲಾಯಿತು. 

ಈ ಸುಸಂದರ್ಭದಲ್ಲಿ ಗ್ರಾಮದ ಶರಣೆಯರು ಬಸವಣ್ಣನವರ ಭಾವಚಿತ್ರವನ್ನು ಶ್ರದ್ಧಾಭಕ್ತಿಗಳಿಂದ ತೊಟ್ಟಿಲಿನಲ್ಲಿಟ್ಟು, ಜೋಗುಳ ಹಾಗೂ ಬಸವಣ್ಣನವರ ವಚನಗಳನ್ನು ಸುಶ್ರಾವ್ಯವಾಗಿ  ಹಾಡುವ ಮೂಲಕ ಸಂಪ್ರದಾಯಬದ್ಧವಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. 

ಗ್ರಾಮದ ಪ್ರಮುಖ ಬೀದಿಗಳಲ್ಲಿ ಬಸವಣ್ಣನವರ ಭಾವಚಿತ್ರದ ಭವ್ಯ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು. ಮೆರವಣಿಗೆಯುದ್ದಕ್ಕೂ ವಚನಗಳನ್ನು ಪಠಿಸುವ ಮೂಲಕ ಜನರಲ್ಲಿ ಸಾಮಾಜಿಕ ಸಮಾನತೆ ಹಾಗೂ ಕಾಯಕ ತತ್ವದ ಬಗ್ಗೆ ಜಾಗೃತಿ ಮೂಡಿಸಲಾಯಿತು. 

ಬಸವ ಜಯಂತಿ ಕೇವಲ ಆಚರಣೆಗೆ ಸೀಮಿತವಾಗದೆ, ಬಸವಣ್ಣನವರ ವಿಚಾರಧಾರೆಗಳು ಪ್ರತಿಯೊಬ್ಬರ ಜೀವನದಲ್ಲಿ ಅಳವಡಿಕೆಯಾಗಬೇಕು ಎನ್ನುವ ಸಂದೇಶ ಈ ವೇಳೆ ಮೊಳಗಿತು. 

ಕಾರ್ಯಕ್ರಮದ ಸಮಾರೋಪದಲ್ಲಿ ಭಕ್ತಾದಿಗಳಿಗೆ ಮಹಾಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಸುತ್ತಮುತ್ತಲಿನ ಹಳ್ಳಿಯ ನೂರಾರು ಸದ್ಭಕ್ತರು ಈ ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಈ ವೇಳೆ ಶರಣರಾದ ರಾಯಪ್ಪ ಹಣಜಿ, ಅಶೋಕ ಅಳ್ನಾವರ, ಮಹೇಶ ಪೂಜೇರ, ಜಗದೀಶ ಕಂಬಾರಗಣವಿ, ಅಶೋಕ ಕೂಗಟಿ, ಬಾಳಪ್ಪ ಶಿವಲಿಂಗನವರ, ಕೇಶಪ್ಪ ಶಿವಲಿಂಗನವರ, ಬಸವರಾಜ ಅಮಟೂರ ಸೇರಿದಂತೆ ಶರಣ ತಂದೆ ತಾಯಂದಿರು ಇದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್